Gujarat Plane Crash Live: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ, ನೇರ ಪ್ರಸಾರ ಇಲ್ಲಿದೆ
Ahmedabad Plane Crash: ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 242 ಮಂದಿ ಇದ್ದರು. ವಿಮಾನ ಟೇಕ್ ಆಫ್ ಆಗುವ ಸಮಯದಲ್ಲಿ ಅವಘಡ ಸಂಭವಿಸಿದೆ. ವಿಮಾನದ ಹಿಂಭಾಗವು ಮರಕ್ಕೆ ಡಿಕ್ಕಿ ಹೊಡೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಪಘಾತಕ್ಕೆ ಸಂಬಂಧಿಸಿದ ಮಾಹಿತಿಯ ನೇರ ಪ್ರಸಾರ ಇಲ್ಲಿದೆ.

ಅಹಮದಾಬಾದ್, ಜೂನ್ 12: ಗುಜರಾತ್ನ ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಭೀಕರ ವಿಮಾನ ಅಪಘಾತ (Ahmedabad Plane Crash) ಸಂಭವಿಸಿದೆ. ಲಂಡನ್ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ (Air India Plane) ಟೇಕ್ ಆಫ್ ಆಗುವ ಸಮಯದಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದ ಹಿಂಭಾಗ ಮರಕ್ಕೆ ಡಿಕ್ಕಿ ಹೊಡೆದಿದ ಪರಿಣಾಮ ನಿರ್ಮಾಣ ಹಂತದ ಕಟ್ಟಡದ ಮೇಲೆ ವಿಮಾನ ಪತನಗೊಂಡಿದೆ ಎನ್ನಲಾಗಿದೆ. ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 242 ಪ್ರಯಾಣಿಕರಿದ್ದರು. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಅಹಮದಾಬಾದ್ ಹಾರ್ಸ್ ಕ್ಯಾಂಪ್ ಬಳಿ ಈ ಅಪಘಾತ ಸಂಭವಿಸಿದೆ. ಈ ಪ್ರದೇಶವು ಸಿವಿಲ್ ಆಸ್ಪತ್ರೆಯ ಬಳಿ ಇದೆ. ವಿಮಾನ ಅಪಘಾತದಲ್ಲಿ ಭಾರೀ ಹಾನಿಯಾಗಿರುವ ಅನುಮಾನವಿದೆ. ಗುಜರಾತ್ ಪೊಲೀಸ್ ನಿಯಂತ್ರಣ ಕೊಠಡಿ ಅಪಘಾತವನ್ನು ದೃಢಪಡಿಸಿದೆ. ಅಪಘಾತಕ್ಕೀಡಾದ ವಿಮಾನದ ಸಂಖ್ಯೆ AI171 ಎಂದು ತಿಳಿದುಬಂದಿದೆ. ವಿಮಾನವು ಮಧ್ಯಾಹ್ನ 1.30 ರ ಸುಮಾರಿಗೆ ಅಹಮದಾಬಾದ್ನ ಮೇಘಾನಿ ನಗರ ಪ್ರದೇಶದ ಮೇಲೆ ಪತನಗೊಂಡಿದೆ.
ಅಹಮದಾಬಾದ್ ವಿಮಾನ ಪತನ ನೇರ ಪ್ರಸಾರ ಇಲ್ಲಿದೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ಡಿಜಿಪಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದಿದ್ದಾರೆ. ವಿಮಾನ ಅಪಘಾತದ ಬಗ್ಗೆ ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದಾರೆ. ಅಮಿತ್ ಶಾ ಅವರು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವ ಭರವಸೆ ನೀಡಿದ್ದಾರೆ. ಎನ್ಎಸ್ಜಿ ತಂಡ ಸ್ಥಳಕ್ಕೆ ಧಾವಿಸಿದೆ.
ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ವಿಮಾನದಲ್ಲಿ ಇದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಆದಾಗ್ಯೂ, ಅಧಿಕೃತ ಮೂಲಗಳು ಈ ವಿಚಾರವನ್ನು ಇನ್ನೂ ದೃಢಪಡಿಸಿಲ್ಲ.
ವಿಮಾನದಲ್ಲಿ ಇಬ್ಬರು ಪೈಲಟ್ಗಳು ಮತ್ತು 10 ಕ್ಯಾಬಿನ್ ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಎಟಿಸಿ (ಏರ್ ಟ್ರಾಫಿಕ್ ಕಂಟ್ರೋಲ್ ರೂಮ್) ಪ್ರಕಾರ, ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದ ರನ್ವೇ 23 ರಿಂದ ಹೊರಟಿತು. ರನ್ವೇ 23 ರಿಂದ ನಿರ್ಗಮಿಸಿದ ಸ್ವಲ್ಪ ಸಮಯದ ನಂತರ, ವಿಮಾನವು ವಿಮಾನ ನಿಲ್ದಾಣದ ಹೊರಗೆ ನೆಲಕ್ಕೆ ಅಪ್ಪಳಿಸಿದೆ. ಅಪಘಾತದ ಸ್ಥಳದಿಂದ ಭಾರೀ ಕಪ್ಪು ಹೊಗೆ ಹೊರಬರುತ್ತಿರುವುದು ಕಂಡುಬಂದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:02 pm, Thu, 12 June 25








