ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ.

ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಗುಜರಾತ್ ಪೊಲೀಸರು
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:May 20, 2024 | 3:58 PM

ಅಹಮದಾಬಾದ್‌, ಮೇ.20:ಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ (Sardar Vallabhbhai Patel of Ahmedabad) ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಇದೀಗ ಗುಜರಾತ್​​​ ಎಟಿಎಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಲು ಉಗ್ರರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದೆ ಎಂದು ಟಿವಿ9 ಗುಜರಾತಿ ವರದಿ ಮಾಡಿದೆ. ಅವರು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಯಾಕೆ ಬಂದಿದ್ದಾರೆ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದೀಗ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಐಪಿಎಲ್ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳಿಗಾಗಿ ಮೂರು ತಂಡಗಳು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೊದಲು ಈ ಘಟನೆ ನಡೆದಿದೆ. ಹಾಗಾಗಿ ಈಗಾಗಲೇ ಅಹಮದಾಬಾದ್ ವಿಮಾನ ನಿಲ್ದಾಣ ಹಾಗೂ ಅಕ್ಕಪಕ್ಕದ ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಬಾಂಗ್ಲಾದೇಶದಿಂದ ಇಬ್ಬರು ಉಗ್ರರು ಗಡಿ ದಾಟಿ ಭಾರತಕ್ಕೆ ಬಂದಿದ್ದರು, ಅವರನ್ನು ಅಂತರರಾಷ್ಟ್ರೀಯ ಗಡಿಯ ಬಳಿ ಬಂಧಿಸಲಾಯಿತು. ಬಂಧಿತ ಐಸಿಸ್ ಉಗ್ರರನ್ನು ಉತ್ತರಾಖಂಡದ ಡೆಹ್ರಾಡೂನ್ ನಿವಾಸಿ ಹರೀಶ್ ಅಜ್ಮಲ್ ಫಾರೂಕಿ ಅಲಿಯಾಸ್ ಹರೀಶ್ ಅಜ್ಮಲ್ ಫಾರೂಖಿ ಮತ್ತು ಹರಿಯಾಣದ ಪಾಣಿಪತ್ ನಿವಾಸಿ ಅನುರಾಗ್ ಸಿಂಗ್ ಅಲಿಯಾಸ್ ರೆಹಾನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಛತ್ತೀಸ್‌ಗಢ: ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು

ಇಬ್ಬರೂ ವ್ಯಕ್ತಿಗಳನ್ನು ಭಾರತದ ಒಳಗೆ ಇರುವ ಭಯೋತ್ಪಾದಕರನ್ನು ಪತ್ತೆ ಮಾಡಲು ಬಳಸಲಾಗಿದೆ. ಭಾರತದಾದ್ಯಂತ ಹಲವಾರು ಸ್ಥಳಗಳಲ್ಲಿ ಐಇಡಿಗಳ ಮೂಲಕ ನೇಮಕಾತಿ, ಭಯೋತ್ಪಾದಕ ನಿಧಿ ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಇವರನ್ನು ಬಳಸಿಕೊಳ್ಳಲಾಗುತ್ತಿದೆ. ಎಸ್‌ಟಿಎಫ್ ಪ್ರಕಾರ, ಈ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ನವದೆಹಲಿ ಮತ್ತು ಎಟಿಎಸ್, ಲಕ್ನೋದಿಂದ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:27 pm, Mon, 20 May 24