ಗುಜರಾತ್​ನಲ್ಲಿ ಭೀಕರ ಅಪಘಾತ: ಬಸ್​ಗೆ ಲಾರಿ ಡಿಕ್ಕಿ, 6 ಮಂದಿ ಸಾವು, ಹಲವರಿಗೆ ಗಾಯ

ಗುಜರಾತ್​ನಲ್ಲಿ ಪಂಕ್ಚರ್​ ಆಗಿ ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆನಂದ್​ನಲ್ಲಿ ನಡೆದಿದೆ.

ಗುಜರಾತ್​ನಲ್ಲಿ ಭೀಕರ ಅಪಘಾತ: ಬಸ್​ಗೆ ಲಾರಿ ಡಿಕ್ಕಿ, 6 ಮಂದಿ ಸಾವು, ಹಲವರಿಗೆ ಗಾಯ
ಅಪಘಾತ
Follow us
ನಯನಾ ರಾಜೀವ್
|

Updated on: Jul 15, 2024 | 10:27 AM

ಗುಜರಾತ್​ನ ಆನಂದ್​ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಅಹಮದಾಬಾದ್ ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಜುಲೈ 15 ರಂದು ಬೆಳಿಗ್ಗೆ 4.30 ರ ಸುಮಾರಿಗೆ ಐಷಾರಾಮಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ. 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬಸ್ ಮಹಾರಾಷ್ಟ್ರದಿಂದ ರಾಜಸ್ಥಾನಕ್ಕೆ ಹೋಗುತ್ತಿತ್ತು. ಆನಂದ್ ಬಳಿ ಬಸ್ ಪಂಕ್ಚರ್ ಆಗಿತ್ತು. ಇದರಿಂದಾಗಿ ಬಸ್ಸಿನ ಚಾಲಕ ಹಾಗೂ ಪ್ರಯಾಣಿಕರು ಬಸ್ಸಿನ ಕೆಳಗೆ ನಿಂತಿದ್ದರು. ಆಗ ಹಿಂದಿನಿಂದ ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದ ಸುದ್ದಿ ತಿಳಿದ ತಕ್ಷಣ ಆನಂದ ಅಗ್ನಿಶಾಮಕ ದಳ, ಎಕ್ಸ್‌ಪ್ರೆಸ್ ಹೈವೇ ಪೆಟ್ರೋಲಿಂಗ್ ತಂಡ ಮತ್ತು ಆನಂದ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದರು.

ಎಲ್ಲಾ ಗಾಯಾಳುಗಳನ್ನು ಆನಂದ್‌ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಡಿಕ್ಕಿಯ ನಂತರ ಬಸ್ ಮತ್ತು ಟ್ರಕ್ ತೀವ್ರವಾಗಿ ಜಖಂಗೊಂಡಿದೆ. ಮೃತ ದೇಹಗಳ ಪಂಚನಾಮ ಸಿದ್ಧಪಡಿಸುವ ಮೂಲಕ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಮತ್ತಷ್ಟು ಓದಿ: ಚಿಕ್ಕಮಗಳೂರಿನಲ್ಲಿ ಮುಂದುವರಿದ ಪ್ರವಾಸಿಗರ ಹುಚ್ಚಾಟ; ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ

ಜುಲೈ 12 ರಂದು ಕೂಡ ಗುಜರಾತ್‌ನ ಪಟಾನ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಉಂಟಾಗಿತ್ತು. ಈ ಅಪಘಾತದಲ್ಲಿ ಕನಿಷ್ಠ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ 2 ಮಂದಿ ಗಾಯಗೊಂಡಿದ್ದಾರೆ. ರಾಧನ್‌ಪುರ ಪಟ್ಟಣದ ಖಾರಿ ಸೇತುವೆ ಬಳಿ ಡಿಕ್ಕಿ ಸಂಭವಿಸಿದೆ.

ಎದುರಿನಿಂದ ಬರುತ್ತಿದ್ದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ಸಾವನ್ನಪ್ಪಿದ್ದಾರೆ. ಲಾರಿಯ ಚಾಲಕ ಮತ್ತು ಕ್ಲೀನರ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಜುಲೈ 7 ರಂದು ಗುಜರಾತ್‌ನ ಡ್ಯಾಂಗ್ ಜಿಲ್ಲೆಯಲ್ಲಿ ಖಾಸಗಿ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದಿತ್ತು. ಇದರಿಂದ 2 ಮಕ್ಕಳು ಸಾವನ್ನಪ್ಪಿದ್ದು, 5 ಮಂದಿ ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​