ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಾಗಿದ್ದ ಸೀರಿಯಲ್ ಕಿಲ್ಲರ್ ಕೊನೆಗೂ ಸಿಕ್ಕಿಬಿದ್ದ

ಯುವತಿ ಮೇಲೆ ಅತ್ಯಾಚಾರ ಹಾಗೂ ಹಲವು ಕೊಲೆಯ ಪ್ರಕರಣದಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಸರಣಿ ಕೊಲೆ ಹಂತಕನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ಪೊಲೀಸರು ಸೀರಿಯಲ್ ಕಿಲ್ಲರ್​ನನ್ನು ಬಂಧಿಸಿದ್ದಾರೆ. ಹರ್ಯಾಣದ ರೋಹ್ಟಕ್‌ನ ರಾಹುಲ್ ಜಾಟ್ ಎಂಬಾತ 19 ವರ್ಷದ ಯುವತಿಯನ್ನು ಕೊಲೆ ಮಾಡಿದ್ದ ಆಕೆಯ ಶವ ಉದ್ವಾಡ ರೈಲು ನಿಲ್ದಾಣದ ಸಮೀಪವಿರುವ ಹಳಿಯ ಮೇಲೆ ನವೆಂಬರ್ 14ರಂದು ಪತ್ತೆಯಾಗಿತ್ತು.

ಬಂಧನImage Credit source: ipleaders
Follow us
ನಯನಾ ರಾಜೀವ್
|

Updated on:Nov 26, 2024 | 10:41 AM

ಯುವತಿ ಮೇಲೆ ಅತ್ಯಾಚಾರ ಹಾಗೂ ಹಲವು ಕೊಲೆಯ ಪ್ರಕರಣದಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಸರಣಿ ಕೊಲೆ ಹಂತಕನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ಪೊಲೀಸರು ಸೀರಿಯಲ್ ಕಿಲ್ಲರ್​ನನ್ನು ಬಂಧಿಸಿದ್ದಾರೆ. ಹರ್ಯಾಣದ ರೋಹ್ಟಕ್‌ನ ರಾಹುಲ್ ಜಾಟ್ ಎಂಬಾತ 19 ವರ್ಷದ ಯುವತಿಯನ್ನು ಕೊಲೆ ಮಾಡಿದ್ದ ಆಕೆಯ ಶವ ಉದ್ವಾಡ ರೈಲು ನಿಲ್ದಾಣದ ಸಮೀಪವಿರುವ ಹಳಿಯ ಮೇಲೆ ನವೆಂಬರ್ 14ರಂದು ಪತ್ತೆಯಾಗಿತ್ತು.

ಆಕೆ ಟ್ಯೂಷನ್​ನಿಂದ ಮನೆಗೆ ಹೋಗುವಾಗ ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಲ್ಸಾದ್‌ನ ವಾಪಿ ರೈಲ್ವೇ ನಿಲ್ದಾಣದ ಪಾರ್ಕಿಂಗ್ ಪ್ರದೇಶದಿಂದ ಸ್ಥಳೀಯ ಮತ್ತು ರೈಲ್ವೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಾಹುಲ್ ಜಾಟ್‌ನನ್ನು ಬಂಧಿಸಲಾಯಿತು.

ಜಾಟ್ ಪದೇ ಪದೇ ತಾನಿರುವ ಸ್ಥಳವನ್ನು ಬದಲಾಯಿಸುತ್ತಿದ್ದ. ಆತ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕರ್ನಾಟಕ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ರೈಲುಗಳು ಮತ್ತು ರೈಲು ನಿಲ್ದಾಣಗಳಲ್ಲಿ ಲೂಟಿ ಮತ್ತು ಕೊಲೆ ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದ.

ಮತ್ತಷ್ಟು ಓದಿ: ಪತ್ನಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಸೆರೆ

ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದ ಸೋಲಾಪುರ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದ ಬಳಿ ಕತಿಹಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ವೃದ್ಧನೊಬ್ಬನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಕರ್ನಾಟಕದ ಮೂಲ್ಕಿಯಲ್ಲಿ ರೈಲು ಪ್ರಯಾಣಿಕನನ್ನು ಹತ್ಯೆ ಮಾಡಿದ ಆರೋಪವನ್ನು ಜಾಟ್ ಎದುರಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:39 am, Tue, 26 November 24

ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ

ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್

ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!

ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು

ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ

ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?

ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?

ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..

ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ

ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್