AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​: ಸಂಜೆ ಹೊತ್ತು ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಸಾವು

ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ನಾಡಿಯಾಡ್ ಅಗ್ನಿಶಾಮಕ ದಳದ ತಂಡವು ಕನಿಜ್ ಗ್ರಾಮದ ಬಳಿ ಸ್ಥಳಕ್ಕೆ ತಲುಪಿ, ಆರು ಶವಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್​: ಸಂಜೆ ಹೊತ್ತು ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ಸಾವು
ನದಿ- ಸಾಂದರ್ಭಿಕ ಚಿತ್ರImage Credit source: Shutterstock
ನಯನಾ ರಾಜೀವ್
|

Updated on: May 01, 2025 | 8:12 AM

Share

ಖೇಡಾ, ಮೇ 1: ಒಂದೇ ಕುಟುಂಬದ 6 ಮಂದಿ ನದಿ(River)ಯಲ್ಲಿ ಮುಳುಗಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆ ಗುಜರಾತ್​ನ ಖೇಡಾ ಜಿಲ್ಲೆಯ ಮೆಶ್ವೋ ನದಿಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ನಾಡಿಯಾಡ್ ಅಗ್ನಿಶಾಮಕ ದಳದ ತಂಡವು ಕನಿಜ್ ಗ್ರಾಮದ ಬಳಿ ಸ್ಥಳಕ್ಕೆ ತಲುಪಿ, ಆರು ಶವಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕನಿಜ್ ಗ್ರಾಮದ ಬಳಿಯ ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು ಎಂದು ಖೇಡಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ಗಾಧಿಯಾ ಮಾಹಿತಿ ನೀಡಿದ್ದಾರೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮತ್ತೊಂದೆಡೆ ಫ್ಯಾಮಿಲಿ ಮ್ಯಾನ್ 3ಯಲ್ಲಿ ನಟಿಸಿದ್ದ ರೋಹಿತ್ ಎಂಬುವವರ ಮೃತದೇಹ ಜಲಪಾತದ ಬಳಿ ಪತ್ತೆಯಾಗಿದೆ. ಮಧ್ಯಾಹ್ನ ಗರ್ಭಂಗ ಜಲಪಾತದ ಬಳಿ ಅವರ ಮೃತದೇಹ ಪತ್ತೆಯಾಗಿದೆ. ರೋಹಿತ್ ತನ್ನ ಒಂಬತ್ತು ಸಹೋದ್ಯೋಗಿಗಳೊಂದಿಗೆ ಪಿಕ್ನಿಕ್‌ಗೆ ಹೋಗಿದ್ದಾಗ ಜಲಪಾತಕ್ಕೆ ಬಿದ್ದಿದ್ದಾನೆ ಎಂದು ವರದಿಯಾಗಿದೆ. ರಾಣಿ ಪೊಲೀಸ್ ಔಟ್‌ಪೋಸ್ಟ್ ಅಧಿಕಾರಿಗಳು ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ
Image
30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ
Image
ರೆಸಾರ್ಟ್​ನ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ದುರ್ಮರಣ!
Image
37 ಸೆಕೆಂಡ್​ನಲ್ಲಿ ನೀರೊಳಗೆ 26 ಪಲ್ಟಿ: ಮಂಗಳೂರಿನ ಬಾಲಕನಿಂದ ವಿಶ್ವ ದಾಖಲೆ
Image
‘ಎಂಜಾಯ್ ಮಾಡಿದೆವು’; ಹನಿಮೂನ್ ಫೋಟೋ ಹಂಚಿಕೊಂಡ ರಾಕುಲ್

ಮತ್ತಷ್ಟು ಓದಿ:ಹಾಸನ: ಈಜು ಗೊತ್ತಿದ್ದರೂ ಕೆರೆ ನೀರಲ್ಲಿ ಮುಳುಗಿ ಇಬ್ಬರ ಸಾವು

ಆಕಸ್ಮಿಕವಾಗಿ ರೋಹಿತ್ ಜಲಪಾತಕ್ಕೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ, ಇದುವರೆಗೆ ಬೇರೆ ಯಾವುದೆ ಅನುಮಾನ ವ್ಯಕ್ತವಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ವರ್ಷದಿಂದ, ರೋಹಿತ್ ಫ್ಯಾಮಿಲಿ ಮ್ಯಾನ್ ಸೆಟ್‌ಗಳ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಜೈದೀಪ್ ಅಹ್ಲಾವತ್ ಮತ್ತು ದಲೀಪ್ ತಹಿಲ್ ಅವರೊಂದಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ