Gujarat: ಗುಜರಾತ್​ನಲ್ಲಿ ಎರಡು ವರ್ಷದ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳು

ದೇಶದೆಲ್ಲೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ, ಬೀದಿ ನಾಯಿ(Stray Dog)ಗಳಿಂದ ವಾಹನ ಅಪಘಾತಗಳು ಸಂಭವಿಸುತ್ತಿವೆ, ದಾಳಿಯಿಂದ ಹಲವು ಮಕ್ಕಳು ಮೃತಪಟ್ಟಿದ್ದಾರೆ.

Gujarat: ಗುಜರಾತ್​ನಲ್ಲಿ ಎರಡು ವರ್ಷದ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳು
ಬೀದಿ ನಾಯಿಗಳು
Follow us
ನಯನಾ ರಾಜೀವ್
|

Updated on: Jul 13, 2023 | 2:06 PM

ದೇಶದೆಲ್ಲೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ, ಬೀದಿ ನಾಯಿ(Stray Dog)ಗಳಿಂದ ವಾಹನ ಅಪಘಾತಗಳು ಸಂಭವಿಸುತ್ತಿವೆ, ದಾಳಿಯಿಂದ ಹಲವು ಮಕ್ಕಳು ಮೃತಪಟ್ಟಿದ್ದಾರೆ. ಬೀದಿ ನಾಯಿಗಳ ಕಡಿತದಿಂದ 2 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಮೊರ್ಬಿ ನಗರದ ಮಾಟೆಲ್ ರಸ್ತೆಯಲ್ಲಿರುವ ಸೆರಾಮಿಕ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.

ಜುಲೈ 11 ರಂದು, ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬಕ್ಕೆ ಸೇರಿದ ಎರಡೂವರೆ ವರ್ಷದ ಬಾಲಕ ಆವರಣದಲ್ಲಿ ಆಟವಾಡುತ್ತಿದ್ದಾಗ ಬೀದಿ ನಾಯಿಯೊಂದು ದಾಳಿ ಮಾಡಿತ್ತು. ಮಗುವಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ವಾಂಕನೇರ್‌ನ ಆಸ್ಪತ್ರೆಗೆ ಸಾಗಿಸಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಏತನ್ಮಧ್ಯೆ, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೀದಿ ನಾಯಿ ಕಚ್ಚುವಿಕೆಯು ಅಪಾಯಕಾರಿ ಬ್ಯಾಕ್ಟೀರಿಯಾ ಮಾನವ ದೇಹಕ್ಕೆ ಹೋಗಬಹುದು ಮತ್ತು ಚಿಕಿತ್ಸೆ ನೀಡದೆ ಬಿಟ್ಟಾಗ ಗಂಭೀರವಾದ ಮತ್ತು ಕೆಲವೊಮ್ಮೆ ಮಾರಣಾಂತಿಕ ಸೋಂಕನ್ನು ಉಂಟುಮಾಡಬಹುದು.

ಮತ್ತಷ್ಟು ಓದಿ: ದಾವಣಗೆರೆ: ಬೀದಿ ನಾಯಿಗಳ ದಾಳಿ, 15 ಕುರಿಗಳ ಸಾವು; 20ಕ್ಕೂ ಹೆಚ್ಚು ಕುರಿಗಳಿಗೆ ಗಾಯ

ಜುಲೈ 9 ರಂದು ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ಹೊಲಕ್ಕೆ ತೆರಳುತ್ತಿದ್ದ 12 ವರ್ಷದ ಬಾಲಕನ ಮೇಲೆ ಮೂರು ಬೀದಿ ನಾಯಿಗಳು ದಾಳಿ ನಡೆಸಿದ್ದವು. 500 ಮೀಟರ್ ದೂರದಲ್ಲಿರುವ ತನ್ನ ಮನೆ ಮತ್ತು ಹೊಲದ ನಡುವಿನ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದಾಗ ನಾಯಿಗಳು ಬಾಲಕನನ್ನು ಸುತ್ತುವರೆದು ದಾಳಿ ಮಾಡಿವೆ.

ಮಹಾರಾಷ್ಟ್ರದಲ್ಲಿ ಕಳೆದ ಆರು ತಿಂಗಳಲ್ಲಿ ರಾಯಗಡ ಜಿಲ್ಲೆಯಲ್ಲಿ ಒಟ್ಟು 6,427 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಅಧಿಕಾರಿಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, 2021 ರಲ್ಲಿ ಈ ಸಂಖ್ಯೆ 9,138 ಮತ್ತು ಕಳೆದ ವರ್ಷ 10,625 ಕ್ಕೆ ಏರಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್