ಹಲ್ಲೆ ಪ್ರಕರಣ: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ನಾಳೆ ಬಾರ್‌ಪೇಟಾದ ಉನ್ನತ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸುವುದಾಗಿ ಶಾಸಕರ ವಕೀಲರು ತಿಳಿಸಿದ್ದಾರೆ. "ನಾವು ಸಂಪೂರ್ಣವಾಗಿ ಆಶ್ಚರ್ಯಚಕಿತರಾಗಿದ್ದೇವೆ. ಅವರು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದಾಗ...

ಹಲ್ಲೆ ಪ್ರಕರಣ: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ
ಜಿಗ್ನೇಶ್ ಮೇವಾನಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Apr 26, 2022 | 8:38 PM

ಗುವಾಹಟಿ: ಅಸ್ಸಾಂನಲ್ಲಿ (Assam) ಮಹಿಳಾ ಪೊಲೀಸ್ ಪೇದೆಯೊಬ್ಬ ಮೇಲೆ  ಹಲ್ಲೆ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಗುಜರಾತ್‌ನ (Gujarat) ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ (Jignesh Mevani) ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಏಪ್ರಿಲ್ 21 ರಂದು ಬಾರ್ಪೇಟಾ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೇವಾನಿ ಅವರು ಸಾರ್ವಜನಿಕವಾಗಿ ಅಶ್ಲೀಲ ಕೃತ್ಯಗಳು ಅಥವಾ ಪದಗಳನ್ನು ಬಳಸಿದ್ದಾರೆ. ಮಾತ್ರವಲ್ಲದೆ ಕ್ರಿಮಿನಲ್ ಬಲವನ್ನು ಬಳಸಿಕೊಂಡು ಸಾರ್ವಜನಿಕ ಸೇವಕರನ್ನು ತಮ್ಮ ಕರ್ತವ್ಯ ನಿರ್ವಹಣೆಯಿಂದ ತಡೆದಿದ್ದಾರೆ ಎಂದು ಆರೋಪ ಮಾಡಲಾಗಿದ. ನಾಳೆ ಬಾರ್‌ಪೇಟಾದ ಉನ್ನತ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸುವುದಾಗಿ ಶಾಸಕರ ವಕೀಲರು ತಿಳಿಸಿದ್ದಾರೆ. “ನಾವು ಸಂಪೂರ್ಣವಾಗಿ ಆಶ್ಚರ್ಯಚಕಿತರಾಗಿದ್ದೇವೆ. ಅವರು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅಧಿಕಾರಿಗಳ ಮೇಲಿನ ಹಲ್ಲೆಯ ಬಗ್ಗೆ ಯಾವುದೇ ಗುಸುಗುಸು ಇರಲಿಲ್ಲ. ಅವರು ಜಾಮೀನು ನೀಡಿದ ನಂತರ ಇದ್ದಕ್ಕಿದ್ದಂತೆ ಅವರನ್ನು ಮತ್ತೊಮ್ಮೆ ಬಂಧಿಸಲಾಗಿದೆ ಎಂದು ಮೇವಾನಿ ವಕೀಲರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಟ್ವೀಟ್‌ಗಳನ್ನು ಒಳಗೊಂಡ ಪ್ರಕರಣದಲ್ಲಿ ಸೋಮವಾರ ಜಾಮೀನು ಪಡೆದ ದಲಿತ ನಾಯಕ, ಮಹಿಳಾ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಎರಡನೇ ಪ್ರಕರಣದಲ್ಲಿ ತಕ್ಷಣವೇ ಬಂಧಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟ್‌ಗಳ ಕುರಿತು ಅಸ್ಸಾಂ ಬಿಜೆಪಿಯ ನಾಯಕರೊಬ್ಬರು ಅವರ ವಿರುದ್ಧ ದೂರು ದಾಖಲಿಸಿದ ನಂತರ ಮೇವಾನಿ ಅವರನ್ನು ಗುಜರಾತ್‌ನ ಪಾಲನ್‌ಪುರದಲ್ಲಿ ಗುರುವಾರ ಬಂಧಿಸಲಾಯಿತು.

ಅಸ್ಸಾಂ ಕೋರ್ಟ್‌ನಿಂದ ಹೊರಬರುವಾಗ ‘ಪುಷ್ಪಾ’ ಸ್ಟೈಲ್​​ನಲ್ಲಿ ಗಡ್ಡದ ಮೇಲೆ ಕೈಯಾಡಿಸಿದ ಜಿಗ್ನೇಶ್ ಮೇವಾನಿ

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ನ್ಯಾಯಾಲಯದ ಹೊರಗೆ ಚಿತ್ರೀಕರಿಸಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ, ಪೊಲೀಸರಿಂದ ಸುತ್ತುವರಿದ ಪೊಲೀಸ್ ಜೀಪಿನಲ್ಲಿ ಜಿಗ್ನೇಶ್ ಮೇವಾನಿ ‘ಪುಷ್ಪಾ’ ಸ್ಟೈಲ್​​ನಲ್ಲಿ ಜುಕೇಗಾ ನಹೀ ಸಾಲಾ ಎಂಬ ರೀತಿಯಲ್ಲಿ ಗಡ್ಡವನ್ನು ಸವರುತ್ತಿರುವುದು ಕಾಣುತ್ತದೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ನಿಂದನಾತ್ಮಕ ಪೋಸ್ಟ್​ ಹಾಕಿ ಜೈಲು ಸೇರಿದ್ದ ಗುಜರಾತ್​ ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು

Published On - 7:45 pm, Tue, 26 April 22

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ