ರಾಜ್ಯದಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸ ಕ್ಯಾನ್ಸಲ್
ಕಲಬುರಗಿ: ಗುಲಬರ್ಗಾ ವಿವಿಯಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ನೀಡಿದ್ದ ಅನುಮತಿ ರದ್ದು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅನುಮತಿ ರದ್ದು ಪಡಿಸಲಾಗಿದೆ. ವಿಶ್ವವಿದ್ಯಾಲಯ ಪರಿಸರದಲ್ಲಿ ಅಶಾಂತಿ ಉಂಟಾಗಬಾರದು. ಆಸ್ತಿಪಾಸ್ತಿಗೆ ಹಾನಿ ಆಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಪ್ರಭಾರಿ ಕುಲಪತಿ ಪ್ರೊ. ಪರಿಮಳಾ ಅಂಬೇಕರ್ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರದಿಂದಲೂ ಸೂಚನೆ ಬಂದ ಹಿನ್ನೆಲೆ ಅನುಮತಿ ರದ್ದು ಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Published On - 11:45 am, Tue, 15 October 19