ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ, 6 ನಕ್ಸಲರ ಹತ್ಯೆ

| Updated By: ಅಕ್ಷಯ್​ ಪಲ್ಲಮಜಲು​​

Updated on: Mar 27, 2024 | 11:45 AM

ಭದ್ರತಾ ಸಿಬ್ಬಂದಿಗಳ ಎನ್‌ಕೌಂಟರ್‌ನಲ್ಲಿ ಮಹಿಳಾ ಕೇಡರ್ ಸೇರಿದಂತೆ ಆರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕುರಭಟ್ಟಿ ಮತ್ತು ಪುಸ್ಬಾಕ ಗ್ರಾಮಗಳ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ, 6 ನಕ್ಸಲರ ಹತ್ಯೆ
ಸಾಂದರ್ಭಿಕ ಚಿತ್ರ
Follow us on

ಬಿಜಾಪುರ, ಮಾ.27: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ (ಮಾ.27) ಭದ್ರತಾ ಸಿಬ್ಬಂದಿಗಳ ಎನ್‌ಕೌಂಟರ್‌ನಲ್ಲಿ ಮಹಿಳಾ ಕೇಡರ್ ಸೇರಿದಂತೆ ಆರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕುರಭಟ್ಟಿ ಮತ್ತು ಪುಸ್ಬಾಕ ಗ್ರಾಮಗಳ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (DRG), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF), ಮತ್ತು ಅದರ ಗಣ್ಯ ಘಟಕ CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಗೆ ಸೇರಿದ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಗುಂಡಿನ ಚಕಮಕಿಯ ನಂತರ, ಮಹಿಳೆ ಸೇರಿದಂತೆ ಆರು ನಕ್ಸಲೀಯರ ಶವಗಳು ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದರು. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದ್ದಿದ್ದು, ಇನ್ನು ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿದ್ದು, ಏಪ್ರಿಲ್ 19ರಂದು ಮೊದಲ ಹಂತದ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯಲಿದೆ.

ಇದನ್ನೂ ಓದಿ: ಹೆಣ್ಣುಮಕ್ಕಳ ಹೆತ್ತಿದ್ದಕ್ಕೆ ನಿತ್ಯ ಚಿತ್ರಹಿಂಸೆ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಮಾ. 25ರಂದು ಹೋಳಿ ದಿನದಂದು ಬಸಗುಡದ ಕಲರಪರದ ಪರಿಹಾರ ಶಿಬಿರದಲ್ಲಿ ನೆಲೆಸಿದ್ದ ಮೂವರು ಗ್ರಾಮಸ್ಥರ ಮೇಲೆ ನಕ್ಸಲೀಯರು ಆಯುಧಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಮೃತರು ಮರುದಬಾಕ ಗ್ರಾಮಾಂತರ ಪೊಲಂಪಲ್ಲಿ ನಿವಾಸಿಗಳು. ನಕ್ಸಲೀಯರ ಕಾಟಕ್ಕೆ ಗ್ರಾಮಸ್ಥರು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದರು. ವರದಿಗಳ ಪ್ರಕಾರ, ಈ ಗ್ರಾಮಸ್ಥರನ್ನು ಹೋಳಿ ಆಡುವ ನೆಪದಲ್ಲಿ ಕರೆಸಿ ಹಲ್ಲೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 11:30 am, Wed, 27 March 24