AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್ಗಢ: ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ, 16 ನಕ್ಸಲರ ಹತ್ಯೆ

ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಈ ಗುಂಡಿ ಘರ್ಷಣೆಯಲ್ಲಿ 16 ಜನ ನಕ್ಸಲರು ಸಾವನ್ನಪ್ಪಿದ್ದಾರೆ. ಇದು ದೊಡ್ಡ ಕಾರ್ಯಚರಣೆಯಾಗಿದೆ. ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ. ಈ ಕಾರ್ಯಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಭಾಗಿಯಾಗಿದ್ದಾರೆ.

ಛತ್ತೀಸ್ಗಢ: ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ, 16 ನಕ್ಸಲರ ಹತ್ಯೆ
ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ
ಅಕ್ಷಯ್​ ಪಲ್ಲಮಜಲು​​
|

Updated on: Mar 29, 2025 | 10:46 AM

Share

ಸುಕ್ಮಾ ಮಾ,29: ಛತ್ತೀಸ್ಗಢದ (Chhattisgarh) ಸುಕ್ಮಾ ಜಿಲ್ಲೆಯಲ್ಲಿ ಇಂದು (ಮಾ.29) ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್ಕೌಂಟರ್ ನಡೆದಿದೆ. ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ ಪಿ ತಿಳಿಸಿದ್ದಾರೆ. ಕೆರ್ಲಾಪಾಲ್ ಪೊಲೀಸ್ ಠಾಣೆ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ ನಕ್ಸಲ ವಿರೋಧಿ ಕಾರ್ಯಾಚರಣೆಗೆ ಭದ್ರತಾ ಪಡೆಗಳ ಜಂಟಿ ತಂಡ ಹೊರಟಿತ್ತು . ಈ ವೇಳೆ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆರ್ಲಾಪಾಲ್ ಪ್ರದೇಶದಲ್ಲಿ ಮಾವೋವಾದಿಗಳು ಬಿಡುಬಿಟ್ಟಿದ್ದರು ಎಂದು ಹೇಳಲಾಗಿದೆ. ಮಾಹಿತಿಯ ಆಧಾರದ ಮೇಲೆ ಶುಕ್ರವಾರ (ಮಾರ್ಚ್ 28) ರಾತ್ರಿ ಭದ್ರತಾ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದಾರೆ.

ಈ ಕಾರ್ಯಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಭಾಗಿಯಾಗಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಇದುವರೆಗೆ 16 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಿದ್ದಾರೆ. ಸುಕ್ಮಾ ಪೊಲೀಸ್ ಠಾಣೆ ವ್ಯಾಪ್ತಿಯ ಕೆರ್ಲಪಾಲ್ ಪ್ರದೇಶದಲ್ಲಿ ನಕ್ಸಲರ ಇರುವ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಜಂಟಿ ತಂಡವು ಮಾರ್ಚ್ 28 ರಂದು ಶೋಧ ಕಾರ್ಯಾಚರಣೆಗೆ ತೆರಳಿದ್ದು, ಇಂದು (ಮಾರ್ಚ್ 29) ಬೆಳಗಿನ ಜಾವದಿಂದ ನಿರಂತರ ಗುಂಡಿನ ದಾಳಿ ಮುಂದುವರೆದಿದೆ.

ಇದನ್ನೂ ಓದಿ
Image
ಮೇವು ಹಗರಣದ ನಷ್ಟವನ್ನು ಲಾಲು ಯಾದವ್​ರಿಂದಲೇ ವಸೂಲಿಗೆ ಮುಂದಾದ ಸರ್ಕಾರ
Image
ರೆಸ್ಟೋರೆಂಟ್​ಗಳಿಗೆ ಹೋದಾಗ ಟಿಪ್ಸ್ ಕೊಡಲೇಬೇಕೆಂದಿಲ್ಲ; ದೆಹಲಿ ಹೈಕೋರ್ಟ್
Image
ಬೇರೆ ಮಾಧ್ಯಮಗಳೂ ಇದನ್ನೇ ಅನುಸರಿಸುತ್ತವೆ; ಟಿವಿ9ಗೆ ಪ್ರಧಾನಿ ಮೋದಿ ಶ್ಲಾಘನೆ
Image
ಭಾರತ ಜಾಗತಿಕ ದಕ್ಷಿಣದ ದೇಶಗಳ ಧ್ವನಿಯಾಗುತ್ತಿದೆ; WITT ಶೃಂಗಸಭೆಯಲ್ಲಿ ಮೋದಿ

ಭದ್ರತಾ ಪಡೆಗಳು ಪ್ರಸ್ತುತ ಎನ್ಕೌಂಟರ್ ಸ್ಥಳ ಮತ್ತು ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ತೀವ್ರ ಶೋಧ ನಡೆಸುತ್ತಿವೆ. ನಡೆಯುತ್ತಿರುವ ಕಾರ್ಯಾಚರಣೆ ಪೂರ್ಣಗೊಂಡ ನಂತರ ವಿವರವಾದ ಹೇಳಿಕೆಯನ್ನು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಸುಕ್ಮಾ ಅತ್ಯಂತ ಹೆಚ್ಚು ನಕ್ಸ್​​​​ಲ್ ಪೀಡಿತ ಜಿಲ್ಲೆಗಳಲ್ಲಿ ಒಂದಾಗಿದೆ.ಈ ಹಿಂದೆ ಹಲವಾರು ನಕ್ಸಲ್ ದಾಳಿಗಳನ್ನು ಈ ಪ್ರದೇಶದಲ್ಲಿ ಕಂಡಿದ್ದೇವೆ. ಇನ್ನು ಶುಕ್ರವಾರ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಒಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಭಾರತ ಉತ್ತಮ ಪ್ರಧಾನಿಯನ್ನು ಪಡೆದಿದೆ, ಮೋದಿ ತುಂಬಾ ಬುದ್ಧಿವಂತ ವ್ಯಕ್ತಿ, ಮತ್ತೊಮ್ಮೆ ಹಾಡಿ ಹೊಗಳಿದ ಡೊನಾಲ್ಡ್ ಟ್ರಂಪ್

ಇನ್ನು ಇದೇ ವೇಳೆ ಛತ್ತೀಸ್‌ಗಢದ ಬೆಡ್ಮಕೋಟಿಯ ಬಳಿ ಇಟ್ಟಿದ ಮತ್ತೊಂದು ಐಇಡಿ ಸ್ಫೋಟಗೊಂಡು ಮತ್ತೊಂಬ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕನಿಗೆ ನಾರಾಯಣಪುರದ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಬಸ್ತಾರ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಿ ತಿಳಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ನಂತರ, ಗಾಯಗೊಂಡ ಸೈನಿಕನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್