ಕುಪ್ವಾರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾಕರ ಹತ್ಯೆ

ಶುಕ್ರವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಭಯೋತ್ಪಾದಕರು ಭಾರತದ ಒಳಗೆ ಬಂದಿರುವ ಬಗ್ಗೆ ಮಾಹಿತಿ ಪಡೆದು ಭಾರತೀಯ ಭದ್ರತಾ ಪಡೆಗಳು ದಾಳಿಯನ್ನು ನಡೆಸಿದೆ. ಇಬ್ಬರು ಭಯೋತ್ಪಾಕರ ಹತ್ಯೆ ಮಾಡಲಾಗಿದೆ. ಇದರ ಜತೆಗೆ ಭಾರತದ ಗಡಿ ಪ್ರದೇಶಗಳನ್ನು ಭದ್ರತೆಗೊಳಿಸುವಂತೆ ಸೂಚನೆ ನೀಡಲಾಗಿದೆ. ಭದ್ರತಾ ಪಡೆಗಳು ಇನ್ನು ಕೂಡ ತಮ್ಮ ಕಾರ್ಯಚರಣೆಯನ್ನು ಮುಂದುವರಿಸಿದೆ.

ಕುಪ್ವಾರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾಕರ ಹತ್ಯೆ
Follow us
ಅಕ್ಷಯ್​ ಪಲ್ಲಮಜಲು​​
|

Updated on: Oct 05, 2024 | 9:44 AM

ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೆನ್ನೆ (ಅ.4) ಭಯೋತ್ಪಾದಕರು ಒಳನುಸುಳುವಿಕೆ ಯತ್ನದ ನಡೆಸಿದ್ದಾರೆ ಎಂದು ಗುಪ್ತಚರ ಮಾಹಿತಿ ಬಂದಿದ್ದು, ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಪ್ವಾರದ ಗುಗಲ್ಧರ್‌ನಲ್ಲಿ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಭಾರತೀಯ ಭದ್ರತಾ ಪಡೆಗಳು ಭಯೋತ್ಪಾದಕರ ಇಮ್ಮೆಟ್ಟಲು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಭಯೋತ್ಪಾಕರನ್ನು ಹತ್ಯೆ ಮಾಡಲಾಗಿದೆ. ಇದಕ್ಕೆ ಪ್ರತಿಯಾಗಿ ಅವರು ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಕಾರ್ಯಚರಣೆಯಲ್ಲೇ ಸೇನೆ ತೋಡಗಿಸಿಕೊಂಡಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ಶನಿವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಶುಕ್ರವಾರ, ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿರುವುದು ನಿಜ ಎಂದು ಅಧಿಕಾರಿಗಳು ಇದೀಗ ಸ್ಪಷ್ಟ ಪಡಿಸಿದ್ದಾರೆ. ಭಯೋತ್ಪಾದಕರ ಭಾರತದ ಗಡಿಯೊಳಗೆ ಬಂದಿದ್ದಾರೆ ಎಂದು ಖಚಿತ ಮಾಹಿತಿಯ ಆಧಾರದ ಮೇಲೆ ಈ ದಾಳಿಯನ್ನು ನಡೆಸಲಾಗಿದೆ. ಕಿಶ್ತ್ವಾರ್ ಜಿಲ್ಲೆಯ ಚತ್ರೂ ಗ್ರಾಮದಲ್ಲಿ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆಯನ್ನು ಈಗಾಗಲೇ ಪ್ರಾರಂಭ ಮಾಡಲಾಗಿದೆ.

ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ 30 ನಕ್ಸಲರ ಹತ್ಯೆ

ಪೊಲೀಸ್ ಎನ್‌ಕೌಂಟರ್‌ನಲ್ಲಿ 30 ನಕ್ಸಲರ ಹತ್ಯೆ

ಛತ್ತೀಸ್‌ಗಢದಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 30 ನಕ್ಸಲರನ್ನು ಹತ್ಯೆ ಮಾಡಲಾಗಿದ್ದು, ಅವರ ಮೃತದೇಹಗಳು, ಅಪಾರ ಪ್ರಮಾಣದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಏಪ್ರಿಲ್ 16ರಂದು ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು 29 ಮಾವೋವಾದಿಗಳನ್ನು ಹತ್ಯೆ ಮಾಡಿದ ನಂತರ ಇದು ನಕ್ಸಲರ ವಿರುದ್ಧದ ಅತಿದೊಡ್ಡ ಎನ್​ಕೌಂಟರ್ ಕಾರ್ಯಾಚರಣೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ ಮಹಾರಾಷ್ಟ್ರ ಶಿವಸೇನೆ ಪುಂಡರಿಂದ ಕಿರಿಕ್
ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ ಮಹಾರಾಷ್ಟ್ರ ಶಿವಸೇನೆ ಪುಂಡರಿಂದ ಕಿರಿಕ್