ಜಮ್ಮು – ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಇಬ್ಬರು ಭಯೋತ್ಪಾದಕರ ಹತ್ಯೆ ಮಾಡಿದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ನ್ಯಾಯಾಲಯ ಸಂಕೀರ್ಣದ ಬಳಿ ಮಂಗಳವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಸಂಕ್ಷಿಪ್ತ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು - ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಇಬ್ಬರು ಭಯೋತ್ಪಾದಕರ ಹತ್ಯೆ ಮಾಡಿದ ಭದ್ರತಾ ಪಡೆ
ಸಾಂರ್ದಭಿಕ ಚಿತ್ರ Image Credit source: google image
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 17, 2023 | 12:30 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ( Jammu and Kashmir) ಬುದ್ಗಾಮ್ ಜಿಲ್ಲೆಯ ನ್ಯಾಯಾಲಯ ಸಂಕೀರ್ಣದ ಬಳಿ ಮಂಗಳವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಸಂಕ್ಷಿಪ್ತ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುದ್ಗಾಮ್ ಮೂಲಕ ಭಯೋತ್ಪಾದಕರ ಚಲನೆಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ, ಸೈನ್ಯ ಮತ್ತು ಪೋಲೀಸರ ಜಂಟಿ ಕಾರ್ಯಚರಣೆ ಮೂಲಕ ಈ ಪ್ರದೇಶಕ್ಕೆ ಧಾಮಿಸಿದ್ದಾರೆ. ನ್ಯಾಯಾಲಯದ ಸಂಕೀರ್ಣದ ಬಳಿ ಒಂದು ಶಂಕಿತ ವಾಹನವನ್ನು ನಿಲ್ಲಿಸಲು ಪ್ರಯತ್ನಿಸಿತು. ಭಯೋತ್ಪಾದಕರು ಗುಂಡು ಹಾರಿಸಿದ್ದು ಪ್ರತೀಕಾರವಾಗಿ ಭಾರತೀಯ ಸೈನಿಕರು ಮತ್ತು ಪೊಲೀಸರು ಕೂಡು ಗುಂಡು ಹಾರಿಸಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕರು ನಿಷೇಧಿತ ಸಂಘಟನೆ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಹೇಳಿದ್ದಾರೆ, ಅವರನ್ನು ಪುಲ್ವಾಮಾ ಜಿಲ್ಲೆಯ ಅರ್ಬಾಜ್ ಮಿರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದೆ.

ಇದನ್ನು ಓದಿ:ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರ ಹತ್ಯೆ ಮಾಡಿದ ಭದ್ರತಾ ಪಡೆ; ಇವರೆಲ್ಲರೂ ಜೈಷ್​ ಇ ಮೊಹಮ್ಮದ್​ ಸಂಘಟನೆಗೆ ಸೇರಿದವರು

ಸಮೀಪದ ಮಗಮ್ ಪ್ರದೇಶದಲ್ಲಿ ಕಳೆದ ವಾರ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯಿಂದ ಇಬ್ಬರೂ ಭಯೋತ್ಪಾದಕರು ತಪ್ಪಿಸಿಕೊಂಡಿದ್ದಾರೆ ಎಂದು ಕುಮಾರ್ ಹೇಳಿದರು. ಹತ್ಯೆಯಾದ ಉಗ್ರರಿಂದ ಎಕೆ ರೈಫಲ್ ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:30 pm, Tue, 17 January 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್