ಜಮ್ಮು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮತ ಎಣಿಕೆ: ಗುಫ್ಕಾರ್ ಕೂಟ 11, ಬಿಜೆಪಿ 8, ಕಾಂಗ್ರೆಸ್ 2 ಮುನ್ನಡೆ

ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಕೌನ್ಸಿಲ್​ಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ನ್ಯಾಶನಲ್ ಕಾನ್ಫರೆನ್ಸ್​, ಪಿಡಿಪಿ ಸೇರಿ ಪ್ರಾದೇಶಿಕ ಪಕ್ಷಗಳ ಒಕ್ಕೂಟ ಗುಫ್ಕಾರ್ ಕೂಟ ಬಿಜೆಪಿಗಿಂತ ಕೇವಲ 11 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ.

ಜಮ್ಮು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮತ ಎಣಿಕೆ: ಗುಫ್ಕಾರ್ ಕೂಟ 11, ಬಿಜೆಪಿ 8, ಕಾಂಗ್ರೆಸ್ 2 ಮುನ್ನಡೆ
370ನೇ ವಿಧಿ ರದ್ದತಿಯ ನಂತರ ಜಮ್ಮು ಕಾಶ್ಮೀರ ಮೊದಲ ಬಾರಿಗೆ ಚುನಾವಣೆಗೆ ಸಾಕ್ಷಿಯಾಗುತ್ತಿದೆ. ಇಂದು ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ
guruganesh bhat

|

Dec 22, 2020 | 5:23 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಕೌನ್ಸಿಲ್​ಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್​, ಪಿಡಿಪಿ ಸೇರಿ ಪ್ರಾದೇಶಿಕ ಪಕ್ಷಗಳ ಒಕ್ಕೂಟ ಗುಫ್ಕಾರ್ ಕೂಟ ಬಿಜೆಪಿಗಿಂತ ಕೇವಲ 11 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ.

ಜಿಲ್ಲಾ ಅಭಿವೃದ್ಧಿ ಮಂಡಳಿಗೆ (DCC) ನಡೆದ ಮೊದಲ ಚುನಾವಣೆ ಇದಾಗಿದ್ದು ಮತ ಎಣಿಕೆ ಆರಂಭವಾದಾಗ ಬಿಜೆಪಿ ಕೊಂಚ ಹೆಚ್ಚು ಮುನ್ನಡೆ ಗಳಿಸಿತ್ತು. ಸದ್ಯ ಬಿಜೆಪಿ 8, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಒಟ್ಟು 280 ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಬ್ಯಾಲೆಟ್​​ ಪೇಪರ್​ನಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದ ಕಾರಣ ಸಂಜೆಯ ಹೊತ್ತಿಗೆ ಫಲಿತಾಂಶ ಹೊರಬರುವ ಸಾಧ್ಯತೆಯಿದೆ.

ಪ್ರಾದೇಶಿಕ ಪಕ್ಷಗಳ ಒಕ್ಕೂಟಗಳ ಪಕ್ಷಗಳ ನಾಯಕರಾದ ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮುಂತಾದ ನಾಯಕರು ಆರ್ಟಿಕಲ್ 370 ನ್ನು ರದ್ದುಗೊಳಿಸಿದ ಕಾರಣ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ. ಬಿಜೆಪಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ಕಾಶ್ಮೀರಿಗರ ಮನೆ ಗೆಲ್ಲುವ ಹುಕಿಯಲ್ಲಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada