ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಕೌನ್ಸಿಲ್ಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಸೇರಿ ಪ್ರಾದೇಶಿಕ ಪಕ್ಷಗಳ ಒಕ್ಕೂಟ ಗುಫ್ಕಾರ್ ಕೂಟ ಬಿಜೆಪಿಗಿಂತ ಕೇವಲ 11 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ.
ಜಿಲ್ಲಾ ಅಭಿವೃದ್ಧಿ ಮಂಡಳಿಗೆ (DCC) ನಡೆದ ಮೊದಲ ಚುನಾವಣೆ ಇದಾಗಿದ್ದು ಮತ ಎಣಿಕೆ ಆರಂಭವಾದಾಗ ಬಿಜೆಪಿ ಕೊಂಚ ಹೆಚ್ಚು ಮುನ್ನಡೆ ಗಳಿಸಿತ್ತು. ಸದ್ಯ ಬಿಜೆಪಿ 8, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಒಟ್ಟು 280 ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಬ್ಯಾಲೆಟ್ ಪೇಪರ್ನಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದ ಕಾರಣ ಸಂಜೆಯ ಹೊತ್ತಿಗೆ ಫಲಿತಾಂಶ ಹೊರಬರುವ ಸಾಧ್ಯತೆಯಿದೆ.
ಪ್ರಾದೇಶಿಕ ಪಕ್ಷಗಳ ಒಕ್ಕೂಟಗಳ ಪಕ್ಷಗಳ ನಾಯಕರಾದ ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮುಂತಾದ ನಾಯಕರು ಆರ್ಟಿಕಲ್ 370 ನ್ನು ರದ್ದುಗೊಳಿಸಿದ ಕಾರಣ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ. ಬಿಜೆಪಿ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ಕಾಶ್ಮೀರಿಗರ ಮನೆ ಗೆಲ್ಲುವ ಹುಕಿಯಲ್ಲಿದೆ.
Published On - 11:50 am, Tue, 22 December 20