AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gurmeet Ram Rahim: ಪೆರೋಲ್ ಮೇಲೆ ಬಿಡುಗಡೆಗೊಂಡು ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ ಅತ್ಯಾಚಾರ ಆರೋಪಿ ರಾಮ್ ರಹೀಮ್

ಪ್ರಸ್ತುತ ಪೆರೋಲ್ ಮೇಲೆ ಹೊರಗಿರುವ ಅತ್ಯಾಚಾರ ಆರೋಪಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

Gurmeet Ram Rahim: ಪೆರೋಲ್ ಮೇಲೆ ಬಿಡುಗಡೆಗೊಂಡು ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ ಅತ್ಯಾಚಾರ ಆರೋಪಿ ರಾಮ್ ರಹೀಮ್
ಗುರ್ಮೀತ್ ರಾಮ್ ರಹೀಮ್
TV9 Web
| Updated By: ನಯನಾ ರಾಜೀವ್|

Updated on: Jan 24, 2023 | 9:48 AM

Share

ಪ್ರಸ್ತುತ ಪೆರೋಲ್ ಮೇಲೆ ಹೊರಗಿರುವ ಅತ್ಯಾಚಾರ ಆರೋಪಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.ಇದೀಗ ಆ ಫೋಟೊ ಹಾಗೂ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅತ್ಯಾಚಾರ ಮತ್ತು ಕೊಲೆ ಆರೋಪ ಎದುರಿಸಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಮ್ ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್ ಪಡೆದಿದ್ದರು. ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಅವರ ಬರ್ನಾವಾ ಆಶ್ರಮಕ್ಕೆ ಆಗಮಿಸಿದರು. ರಾಮ್ ರಹೀಮ್ ಅವರು ದೈತ್ಯ ಕೇಕ್​ನೊಂದಿಗೆ ಸಂಭ್ರಮಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.

ಜಾಮೀನು ಅರ್ಜಿಯಲ್ಲಿ ರಾಮ್ ರಹೀಮ್ ಅವರು ಜನವರಿ 25 ರಂದು ಮಾಜಿ ಡೇರಾ ಮುಖ್ಯಸ್ಥ ಷಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಸಮಾರಂಭದಲ್ಲಿ ಭಾಗವಹಿಸಲು ಬಯಸುವುದಾಗಿ ಹೇಳಿದ್ದರು. ಐದು ವರ್ಷಗಳ ನಂತರ ಈ ರೀತಿ ಆಚರಿಸಲು ಅವಕಾಶ ಸಿಕ್ಕಿದೆ ಹಾಗಾಗಿ ಕನಿಷ್ಠ ಐದು ಕೇಕ್‌ಗಳನ್ನಾದರೂ ಕತ್ತರಿಸಬೇಕು. ಇದು ಮೊದಲ ಕೇಕ್ ಎಂದು ಹೇಳುತ್ತಿರುವುದು ಕೇಳಿಬಂದಿತ್ತು. ಶಸ್ತ್ರಾಸ್ತ್ರಗಳ ಕಾಯ್ದೆ ಪ್ರಕಾರ ಶಸ್ತ್ರಾಸ್ತ್ರಗಳ ಸಾರ್ವಜನಿಕ ಪ್ರದರ್ಶನವನ್ನು (ಕತ್ತಿಯಿಂದ ಕೇಕ್ ಕತ್ತರಿಸುವುದು) ನಿಷೇಧಿಸಲಾಗಿದೆ.

ಮತ್ತಷ್ಟು ಓದಿ: ಸ್ವಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ತದ್ರೂಪಿ ಇದ್ದಾನೆ ಎಂಬ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ರಾಮ್ ರಹೀಮ್ ಸೋಮವಾರ ಹರ್ಯಾಣ ಮತ್ತು ಇತರ ಕೆಲವು ರಾಜ್ಯಗಳಲ್ಲಿ ಅನೇಕ ಸ್ಥಳಗಳಲ್ಲಿ ತಮ್ಮ ಪಂಥದ ಸ್ವಯಂಸೇವಕರು ಆಯೋಜಿಸಿದ್ದ ಮೆಗಾ ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿದ್ದರು. ರಾಜ್ಯಸಭಾ ಸಂಸದ ಕ್ರಿಶನ್ ಲಾಲ್ ಪನ್ವಾರ್ ಮತ್ತು ಮಾಜಿ ಸಚಿವ ಕ್ರಿಶನ್ ಕುಮಾರ್ ಬೇಡಿ ಸೇರಿದಂತೆ ಹರ್ಯಾಣದ ಕೆಲವು ಹಿರಿಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಳೆದ 14 ತಿಂಗಳಲ್ಲಿ ಇದು ನಾಲ್ಕನೇ ಬಾರಿ ಮತ್ತು ಮೂರು ತಿಂಗಳೊಳಗೆ ಎರಡನೇ ಬಾರಿಗೆ ರಾಮ್ ರಹೀಮ್‌ಗೆ ಪೆರೋಲ್ ನೀಡಲಾಗಿದೆ. ಇದಕ್ಕೂ ಮೊದಲು, ಹರ್ಯಾಣ ಪಂಚಾಯತ್ ಚುನಾವಣೆ ಮತ್ತು ಆದಂಪುರ ವಿಧಾನಸಭಾ ಉಪಚುನಾವಣೆಗೆ ಮುಂಚಿತವಾಗಿ ಅವರನ್ನು ಅಕ್ಟೋಬರ್ 2022 ರಲ್ಲಿ 40 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!