ಪ್ರಸ್ತುತ ಪೆರೋಲ್ ಮೇಲೆ ಹೊರಗಿರುವ ಅತ್ಯಾಚಾರ ಆರೋಪಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.ಇದೀಗ ಆ ಫೋಟೊ ಹಾಗೂ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅತ್ಯಾಚಾರ ಮತ್ತು ಕೊಲೆ ಆರೋಪ ಎದುರಿಸಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಮ್ ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್ ಪಡೆದಿದ್ದರು. ಉತ್ತರ ಪ್ರದೇಶದ ಬಾಗ್ಪತ್ನಲ್ಲಿರುವ ಅವರ ಬರ್ನಾವಾ ಆಶ್ರಮಕ್ಕೆ ಆಗಮಿಸಿದರು. ರಾಮ್ ರಹೀಮ್ ಅವರು ದೈತ್ಯ ಕೇಕ್ನೊಂದಿಗೆ ಸಂಭ್ರಮಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.
ಜಾಮೀನು ಅರ್ಜಿಯಲ್ಲಿ ರಾಮ್ ರಹೀಮ್ ಅವರು ಜನವರಿ 25 ರಂದು ಮಾಜಿ ಡೇರಾ ಮುಖ್ಯಸ್ಥ ಷಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಸಮಾರಂಭದಲ್ಲಿ ಭಾಗವಹಿಸಲು ಬಯಸುವುದಾಗಿ ಹೇಳಿದ್ದರು. ಐದು ವರ್ಷಗಳ ನಂತರ ಈ ರೀತಿ ಆಚರಿಸಲು ಅವಕಾಶ ಸಿಕ್ಕಿದೆ ಹಾಗಾಗಿ ಕನಿಷ್ಠ ಐದು ಕೇಕ್ಗಳನ್ನಾದರೂ ಕತ್ತರಿಸಬೇಕು. ಇದು ಮೊದಲ ಕೇಕ್ ಎಂದು ಹೇಳುತ್ತಿರುವುದು ಕೇಳಿಬಂದಿತ್ತು. ಶಸ್ತ್ರಾಸ್ತ್ರಗಳ ಕಾಯ್ದೆ ಪ್ರಕಾರ ಶಸ್ತ್ರಾಸ್ತ್ರಗಳ ಸಾರ್ವಜನಿಕ ಪ್ರದರ್ಶನವನ್ನು (ಕತ್ತಿಯಿಂದ ಕೇಕ್ ಕತ್ತರಿಸುವುದು) ನಿಷೇಧಿಸಲಾಗಿದೆ.
ಮತ್ತಷ್ಟು ಓದಿ: ಸ್ವಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ತದ್ರೂಪಿ ಇದ್ದಾನೆ ಎಂಬ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ರಾಮ್ ರಹೀಮ್ ಸೋಮವಾರ ಹರ್ಯಾಣ ಮತ್ತು ಇತರ ಕೆಲವು ರಾಜ್ಯಗಳಲ್ಲಿ ಅನೇಕ ಸ್ಥಳಗಳಲ್ಲಿ ತಮ್ಮ ಪಂಥದ ಸ್ವಯಂಸೇವಕರು ಆಯೋಜಿಸಿದ್ದ ಮೆಗಾ ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿದ್ದರು. ರಾಜ್ಯಸಭಾ ಸಂಸದ ಕ್ರಿಶನ್ ಲಾಲ್ ಪನ್ವಾರ್ ಮತ್ತು ಮಾಜಿ ಸಚಿವ ಕ್ರಿಶನ್ ಕುಮಾರ್ ಬೇಡಿ ಸೇರಿದಂತೆ ಹರ್ಯಾಣದ ಕೆಲವು ಹಿರಿಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಳೆದ 14 ತಿಂಗಳಲ್ಲಿ ಇದು ನಾಲ್ಕನೇ ಬಾರಿ ಮತ್ತು ಮೂರು ತಿಂಗಳೊಳಗೆ ಎರಡನೇ ಬಾರಿಗೆ ರಾಮ್ ರಹೀಮ್ಗೆ ಪೆರೋಲ್ ನೀಡಲಾಗಿದೆ.
ಇದಕ್ಕೂ ಮೊದಲು, ಹರ್ಯಾಣ ಪಂಚಾಯತ್ ಚುನಾವಣೆ ಮತ್ತು ಆದಂಪುರ ವಿಧಾನಸಭಾ ಉಪಚುನಾವಣೆಗೆ ಮುಂಚಿತವಾಗಿ ಅವರನ್ನು ಅಕ್ಟೋಬರ್ 2022 ರಲ್ಲಿ 40 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ