AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಿಂಗಳ ಹಿಂದಿನ ಘಟನೆಗೆ ಸೇಡು; ಶಾಲಾ ಹುಡುಗನಿಂದ ಗುಂಡಿನ ದಾಳಿ

Haryana Teenager shoots his schoolmate using licensed pistol of his father: ಹರ್ಯಾಣದ ಗುರುಗ್ರಾಮ್​ನ ಸೆಕ್ಟರ್ 48ರಲ್ಲಿರುವ ಫ್ಲ್ಯಾಟ್​ವೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಸ್ಕೂಲ್​ಮೇಟ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ತನ್ನ ಅಪ್ಪನ ಪಿಸ್ತೂಲ್ ಬಳಸಿ ಈ ದಾಳಿ ಎಸಗಿದ್ದಾನೆ. ಗುಂಡೇಟು ತಿಂದ 17 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರು ಆರೋಪಿ ಹಾಗೂ ಆತನಿಗೆ ಸಹಕರಿಸಿದ ಸ್ನೇಹಿತ, ಇಬ್ಬರನ್ನೂ ಬಂಧಿಸಿದ್ದಾರೆ.

ಎರಡು ತಿಂಗಳ ಹಿಂದಿನ ಘಟನೆಗೆ ಸೇಡು; ಶಾಲಾ ಹುಡುಗನಿಂದ ಗುಂಡಿನ ದಾಳಿ
ಜೈಲಿನ ಪ್ರಾತಿನಿಧಿಕ ಚಿತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 09, 2025 | 7:21 PM

Share

ನವದೆಹಲಿ, ನವೆಂಬರ್ 9: ಎರಡು ತಿಂಗಳ ಹಿಂದೆ ನಡೆದ ಘಟನೆಯೊಂದಕ್ಕೆ ಸೇಡು ತೀರಿಸಿಕೊಳ್ಳಲು 17 ವರ್ಷದ ಬಾಲಕನೊಬ್ಬ ತನ್ನ ಶಾಲೆಯ ಇನ್ನೊಬ್ಬ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ (gurugaon firing incident) ನಡೆಸಿದ ಘಟನೆ ಬೆಳಕಿಗೆ ಬಂದಿದೆ. ತನ್ನ ಅಪ್ಪನ ಪಿಸ್ತೂಲ್ ಅನ್ನು ಬಳಸಿ ಈ ಯುವಕ ಕೃತ್ಯ ಎಸಗಿರುವುದು ತಿಳಿದುಬಂದಿದೆ. ಶುಕ್ರವಾರ ರಾತ್ರಿ (ನ. 7) ಈ ಘಟನೆ ಸಂಭವಿಸಿದ್ದು, ಗುಂಡೇಟು ತಿಂದ ಯುವಕ ಗಂಭೀರವಾಗಿ ಗಾಯಗೊಂಡು, ಸಾವು ಬದುಕಿನ ಹೋರಾಟದಲ್ಲಿದ್ದಾನೆ.

ಹರ್ಯಾಣ ರಾಜ್ಯಕ್ಕೆ ಸೇರಿದ ಮತ್ತು ದೆಹಲಿ ಎನ್​ಸಿಆರ್ ವ್ಯಾಪ್ತಿಗೆ ಬರುವ ಗುರುಗ್ರಾಮ್ ನಗರದ ಸೆಕ್ಟರ್ 48ರಲ್ಲಿ ಈ ಫೈರಿಂಗ್ ಘಟನೆ ಸಂಭವಿಸಿದೆ. ಪೊಲೀಸರು 17 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ಈತನ ಜೊತೆ ಘಟನೆಯಲ್ಲಿ ಭಾಗಿಯಾದ ಆತನ ಸ್ನೇಹಿತನನ್ನೂ ಬಂಧಿಸಲಾಗಿದೆ.

ಇದನ್ನೂ ಓದಿ: ಮಕ್ಕಳಿಗೆ ಸಂಸ್ಕಾರ ಕಲಿಸದಿದ್ದರೆ ಲವ್ ಜಿಹಾದ್​ಗೆ ಬಲಿಯಾಗಬೇಕಾಗುತ್ತೆ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

ಗಾಯಗೊಂಡಿರುವ ವಿದ್ಯಾರ್ಥಿಯು 11ನೇ ತರಗತಿಯಲ್ಲಿ ಓದುತ್ತಿದ್ದಾನೆ. ಆತನ ತಾಯಿ ನೀಡಿರುವ ಹೇಳಿಕೆ ಪ್ರಕಾರ ಶುಕ್ರವಾರ ರಾತ್ರಿ ಆಕೆಯ ಮಗನಿಗೆ ಶಾಲಾ ಸ್ನೇಹಿತರೊಬ್ಬರಿಂದ ಕರೆ ಬಂದಿದ್ದು, ಭೇಟಿಯಾಗುವಂತೆ ಕೇಳಿದ್ದಾರೆ. ಇದಕ್ಕೆ ಆ ಯುವಕ ಮೊದಲು ಒಪ್ಪಲಿಲ್ಲ. ಸ್ನೇಹಿತನ ಬಲವಂತಕ್ಕೆ ಒಪ್ಪಿ ಖೇರ್ಕಿ ದೌಲಾ ಟೋಲ್ ಪ್ಲಾಜಾಗೆ ಹೋಗಿ, ಆರೋಪಿಯನ್ನು ಭೇಟಿಯಾಗಿದ್ದಾನೆ.

ಆರೋಪಿಯು ಈತನನ್ನು ಸೆಕ್ಟರ್ 48ರಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆದೊಯ್ದಿದ್ದಾನೆ. ಈ ವೇಳೆ ಆತನ ಜೊತೆ ಮತ್ತೊಬ್ಬ ಸ್ನೇಹಿತನೂ ಇರುತ್ತಾನೆ. ಆ ಮನೆಯಲ್ಲಿ ಆರೋಪಿಯು ತನ್ನ ಅಪ್ಪನ ಲೈಸೆನ್ಸ್ ಪಿಸ್ತೂಲ್ ಬಳಸಿ ಯುವಕನ ಮೇಲೆ ಫೈರಿಂಗ್ ಮಾಡಿದ್ದಾನೆ.

ಇದನ್ನೂ ಓದಿ: ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ

ಆರೋಪಿಯ ತಂದೆ ಒಬ್ಬ ಪ್ರಾಪರ್ಟಿ ಡೀಲರ್ ಆಗಿದ್ದಾರೆ. ಅವರ ಬಳಿ ಪರವಾನಿಗೆ ಹೊಂದಿರುವ ಪಿಸ್ತೂಲ್ ಇತ್ತು. ಮನೆಯಲ್ಲಿದ್ದ ಆ ಪಿಸ್ತೂಲ್ ಅನ್ನೇ ಬಳಸಿ ಆರೋಪಿಯು ತನ್ನ ಸಹಪಾಠಿಯ ಮೇಲೆ ದಾಳಿ ಮಾಡಿದ್ದಾನೆ. ಪೊಲೀಸರ ಕಂಟ್ರೋಲ್ ರೂಮ್​ಗೆ ಶುಕ್ರವಾರ ಮಧ್ಯರಾತ್ರಿ ಕರೆ ಬಂದಿದೆ. ಸಾದರ್ ಠಾಣೆಯ ಪೊಲೀಸರು ಸ್ಥಳಕ್ಕೆ ಹೋಗಿ ನೋಡುವಷ್ಟರಲ್ಲಿ ಗಾಯಾಳುವನ್ನು ಮೇದಾಂತ ಆಸ್ಪತ್ರೆಗೆ ಸಾಗಿಸಲಾಗಿತ್ತು. ಒಂದು ಪಿಸ್ತೂಲ್, ಒಂದು ಮ್ಯಾಗಜಿನ್, ಐದು ಲೈವ್ ಕಾರ್ಟ್ರಿಟ್ಜ್​ಗಳನ್ನು ಘಟನೆಯ ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ. ಅದೇ ಮನೆಯಲ್ಲಿ ಮತ್ತೊಂದು ಮ್ಯಾಗಜಿನ್ ಹಾಗೂ 65 ಲೈವ್ ಕಾರ್ಟ್ರಿಡ್ಜ್​ಗಳು ಪೊಲೀಸರಿಗೆ ಸಿಕ್ಕಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ