ಕೋಪದಲ್ಲಿ ಮಗನನ್ನು ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನೇ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ತಾಯಿಯೊಬ್ಬಳು ಹುಚ್ಚ ಎಂದು ಕರೆದಳೆನ್ನುವ ಕೋಪಕ್ಕೆ ಮಗನೊಬ್ಬ ಚಾಕುವಿನಿಂದ ಇರಿದು, ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ಕೋಪದಲ್ಲಿ ಮಗನನ್ನು ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನೇ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ
ಬೆಂಕಿ

Updated on: Mar 11, 2024 | 10:47 AM

ಮಾನಸಿಕ ಅಸ್ವಸ್ಥ(Mentally Ill) ಮಗನೊಬ್ಬ ತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮೊದಲು ತಾಯಿಗೆ ಚಾಕುವಿನಿಂದ ಇರಿದು ಬಳಿಕ ಫ್ಲ್ಯಾಟ್​ಗೆ ಬೆಂಕಿ ಹಚ್ಚಿದ್ದಾನೆ. ಮಗನನ್ನು ಕೋಪದಲ್ಲಿ ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನು ಮಗ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ರಾನು ಶಾ ತನ್ನ ಪತಿ ಮತ್ತು ಮಗನೊಂದಿಗೆ ಗುರುಗ್ರಾಮದ ಸೆಕ್ಟರ್ 48 ರಲ್ಲಿ ಐಷಾರಾಮಿ ಅಪಾರ್ಟ್ಮೆಂಟ್ ಸಂಕೀರ್ಣವಾದ ವಿಪುಲ್ ಗ್ರೀನ್ಸ್‌ನಲ್ಲಿ ವಾಸಿಸುತ್ತಿದ್ದರು. ಆಕೆಯ ಮಗ ಅತ್ರಿಶ್ ಮಾನಸಿಕ ಅಸ್ವಸ್ಥನಾಗಿ ಬಹಳ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಆತನ ಪೋಷಕರೊಂದಿಗೆ ಆಗಾಗ ಜಗಳ ನಡೆಯುತ್ತಿದ್ದ ಎಂದು ನೆರೆಹೊರೆಯವರು ತಿಳಿಸಿದ್ದಾರೆ.

ನಿನ್ನೆ ತಡರಾತ್ರಿ ಅವರ ಫ್ಲ್ಯಾಟ್​ನಿಂದ ಹೊಗೆ ಬರುತ್ತಿರುವುದನ್ನು ಕಂಡ ನೆರೆಹೊರೆಯವರು ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಕರೆ ಮಾಡಿದ್ದಾರೆ. ಅವರು ಬಾಗಿಲು ಒಡೆದು ಒಳಗೆ ಹೋದಾಗ ಶಾ ಅವರು ಸುಟ್ಟ ಗಾಯಗಳಿಂದ ನರಳುತ್ತಿದ್ದರು. ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.

ಮತ್ತಷ್ಟು ಓದಿ: ದಾವಣಗೆರೆ: ಮರ್ಮಾಂಗ ಕತ್ತರಿಸಿಕೊಳ್ಳಲು ಮುಂದಾದ ಮಾನಸಿಕ ಅಸ್ವಸ್ಥ

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯ ಪ್ರಕಾರ ಅತ್ರಿಶ್ ಆಗಾಗ ಉದ್ರೇಕಗೊಂಡು ತನ್ನ ತಾಯಿಯ ಮೇಲೆ ಹಲ್ಲೆ ಮಾಡುತ್ತಿದ್ದ. ಕೋಪದಲ್ಲಿ ಆತನನ್ನು ಹುಚ್ಚ ಎಂದು ತಾಯಿ ಕರೆದಿದ್ದಾರೆ. ಅದಕ್ಕೆ ಕೋಪಗೊಂಡು ಪದೇ ಪದೇ ಆಕೆಗೆ ಚಾಕುವಿನಿಂದ ಇರಿದಿದ್ದಾನೆ.

ಬಳಿಕ ಅವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ತನಿಖೆಯನ್ನು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ಪೊಲೀಸರು ನಿರ್ಧಾರ ತೆಗೆದುಕೊಳ್ಳುವ ಮೊದಲು ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ಮೌಲ್ಯಮಾಪನ ಮಾಡಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಯಾಂಕ್ ಗುಪ್ತಾ ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ