AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರನ ಸಹಾಯದಿಂದ ಲಿವ್​ ಇನ್​ ಸಂಗಾತಿಯ ಹತ್ಯೆಗೈದ ಮಹಿಳೆ

ಸಹೋದರನ ಸಹಾಯದಿಂದ ಲಿವ್​-ಇನ್​ ಸಂಗಾತಿಯನ್ನು ಹತ್ಯೆಗೈದ ಆರೋಪದ ಮೇಲೆ ಗುರುಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ನಿಜವಾದ ಕಾರಣ ಇನ್ನೂ ಬಹಿರಂಗಗೊಂಡಿಲ್ಲ.

ಸಹೋದರನ ಸಹಾಯದಿಂದ ಲಿವ್​ ಇನ್​ ಸಂಗಾತಿಯ ಹತ್ಯೆಗೈದ ಮಹಿಳೆ
ಸಾವು
ನಯನಾ ರಾಜೀವ್
|

Updated on:May 21, 2024 | 7:56 AM

Share

ಮಹಿಳೆಯೊಬ್ಬರು ಸಹೋದರನ ಸಹಾಯದಿಂದ ಲಿವ್​-ಇನ್​ ಸಂಗಾತಿಯನ್ನು ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.  ತಲೆ ಮತ್ತು ಕುತ್ತಿಗೆಗೆ ಪ್ಯಾನ್‌ನಿಂದ ಹೊಡೆದು ಕೊಲೆಗೈದ ಆರೋಪದ ಮೇಲೆ ಪೊಲೀಸರು ಮಹಿಳೆಯೊಬ್ಬರ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆ ತನ್ನ ಸಹೋದರನ ಸಹಾಯದಿಂದ ಟಿಕ್ರಿ ಗ್ರಾಮದಲ್ಲಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುಗ್ರಾಮದ ಅಶೋಕ್ ವಿಹಾರ್ ನಿವಾಸಿ ನೀತು ಅಲಿಯಾಸ್ ನಿಶಾ (34) ಮತ್ತು ವಿಕ್ಕಿ (28) ಕಳೆದ ಆರು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಮದುವೆಯಾಗಿದ್ದಾಳೆ ಆದರೆ ಪತಿಯಿಂದ ಬೇರ್ಪಟ್ಟಿದ್ದಾಳೆ. ಆಕೆಗೆ 15 ವರ್ಷದ ಮಗಳಿದ್ದಾಳೆ. ನ್ಯಾಯಾಲಯವು ನೀತುವನ್ನು ಒಂದು ದಿನದ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ಮಹಿಳೆಯ ಸಹೋದರ ಪರಾರಿಯಾಗಿದ್ದು, ಆತನನ್ನು ಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಮತ್ತಷ್ಟು ಓದಿ: ಸುತ್ತಿಗೆಯಿಂದ ಲಿವ್​ಇನ್ ಸಂಗಾತಿ ಕೊಂದು, ಮಗನ ಹತ್ಯೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಪೊಲೀಸರ ಪ್ರಕಾರ, ಶುಕ್ರವಾರ ತಡರಾತ್ರಿ ಕಚ್ಚಿ ಕಾಲೋನಿಯ ಮನೆಯೊಂದರಲ್ಲಿ ವಿಕ್ಕಿ ಶವವಾಗಿ ಪತ್ತೆಯಾಗಿದ್ದಾರೆ. ವಿಕ್ಕಿಯನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು ಆತನ ಸಹೋದರ ದೂರು ದಾಖಲಿಸಿದ್ದಾರೆ. ಶನಿವಾರದಂದು ಸದರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ, ಇನ್‌ಸ್ಪೆಕ್ಟರ್ ಅರ್ಜುನ್ ದೇವ್ ನೇತೃತ್ವದ ಪೊಲೀಸ್ ತಂಡವು ಪ್ರಕರಣವನ್ನು ಭೇದಿಸಿ ಭಾನುವಾರ ಘಾಟಾ ಗ್ರಾಮದಿಂದ ನೀತುವನ್ನು ಬಂಧಿಸಿದೆ. ಪೊಲೀಸರು ವಿಕ್ಕಿಯ ಬಳಿಯಿದ್ದ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:56 am, Tue, 21 May 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ