ಸಹೋದರನ ಸಹಾಯದಿಂದ ಲಿವ್​ ಇನ್​ ಸಂಗಾತಿಯ ಹತ್ಯೆಗೈದ ಮಹಿಳೆ

ಸಹೋದರನ ಸಹಾಯದಿಂದ ಲಿವ್​-ಇನ್​ ಸಂಗಾತಿಯನ್ನು ಹತ್ಯೆಗೈದ ಆರೋಪದ ಮೇಲೆ ಗುರುಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ನಿಜವಾದ ಕಾರಣ ಇನ್ನೂ ಬಹಿರಂಗಗೊಂಡಿಲ್ಲ.

ಸಹೋದರನ ಸಹಾಯದಿಂದ ಲಿವ್​ ಇನ್​ ಸಂಗಾತಿಯ ಹತ್ಯೆಗೈದ ಮಹಿಳೆ
ಸಾವು

Updated on: May 21, 2024 | 7:56 AM

ಮಹಿಳೆಯೊಬ್ಬರು ಸಹೋದರನ ಸಹಾಯದಿಂದ ಲಿವ್​-ಇನ್​ ಸಂಗಾತಿಯನ್ನು ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.  ತಲೆ ಮತ್ತು ಕುತ್ತಿಗೆಗೆ ಪ್ಯಾನ್‌ನಿಂದ ಹೊಡೆದು ಕೊಲೆಗೈದ ಆರೋಪದ ಮೇಲೆ ಪೊಲೀಸರು ಮಹಿಳೆಯೊಬ್ಬರ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆ ತನ್ನ ಸಹೋದರನ ಸಹಾಯದಿಂದ ಟಿಕ್ರಿ ಗ್ರಾಮದಲ್ಲಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುಗ್ರಾಮದ ಅಶೋಕ್ ವಿಹಾರ್ ನಿವಾಸಿ ನೀತು ಅಲಿಯಾಸ್ ನಿಶಾ (34) ಮತ್ತು ವಿಕ್ಕಿ (28) ಕಳೆದ ಆರು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಮದುವೆಯಾಗಿದ್ದಾಳೆ ಆದರೆ ಪತಿಯಿಂದ ಬೇರ್ಪಟ್ಟಿದ್ದಾಳೆ. ಆಕೆಗೆ 15 ವರ್ಷದ ಮಗಳಿದ್ದಾಳೆ. ನ್ಯಾಯಾಲಯವು ನೀತುವನ್ನು ಒಂದು ದಿನದ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ಮಹಿಳೆಯ ಸಹೋದರ ಪರಾರಿಯಾಗಿದ್ದು, ಆತನನ್ನು ಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಮತ್ತಷ್ಟು ಓದಿ: ಸುತ್ತಿಗೆಯಿಂದ ಲಿವ್​ಇನ್ ಸಂಗಾತಿ ಕೊಂದು, ಮಗನ ಹತ್ಯೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಪೊಲೀಸರ ಪ್ರಕಾರ, ಶುಕ್ರವಾರ ತಡರಾತ್ರಿ ಕಚ್ಚಿ ಕಾಲೋನಿಯ ಮನೆಯೊಂದರಲ್ಲಿ ವಿಕ್ಕಿ ಶವವಾಗಿ ಪತ್ತೆಯಾಗಿದ್ದಾರೆ.
ವಿಕ್ಕಿಯನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು ಆತನ ಸಹೋದರ ದೂರು ದಾಖಲಿಸಿದ್ದಾರೆ. ಶನಿವಾರದಂದು ಸದರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ, ಇನ್‌ಸ್ಪೆಕ್ಟರ್ ಅರ್ಜುನ್ ದೇವ್ ನೇತೃತ್ವದ ಪೊಲೀಸ್ ತಂಡವು ಪ್ರಕರಣವನ್ನು ಭೇದಿಸಿ ಭಾನುವಾರ ಘಾಟಾ ಗ್ರಾಮದಿಂದ ನೀತುವನ್ನು ಬಂಧಿಸಿದೆ. ಪೊಲೀಸರು ವಿಕ್ಕಿಯ ಬಳಿಯಿದ್ದ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:56 am, Tue, 21 May 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us