AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ನಿಲ್ಲಿಸಲಿಲ್ಲವೆಂದು ಉದ್ದೇಶಪೂರ್ವಕವಾಗಿಯೇ ಗುದ್ದಿದ್ರು: ಹಿಟ್ ಆ್ಯಂಡ್ ರನ್ ಕೇಸ್‌ನಲ್ಲಿ ಬೆಚ್ಚಿಬೀಳಿಸುವ ಹೊಸ ಆ್ಯಂಗಲ್ ವಿಡಿಯೋ ವೈರಲ್

ಗುರುಗ್ರಾಮದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮಹಿಳಾ ಬೈಕರ್ ಸಿಯಾ ಅವರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಗುದ್ದಿರುವುದು ಹೊಸ ವಿಡಿಯೋದಲ್ಲಿ ಬಹಿರಂಗವಾಗಿದೆ. ಮದ್ಯಪಾನ ಮಾಡಿದ್ದ ಚಾಲಕ ಕಲ್ಯಾಣ್ ಬೈನ್ಸ್ಲಾ ಬೈಕ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆ. ಆರೋಪಿ ಪತ್ತೆಯಾಗಿದ್ದು, ಸಾರ್ವಜನಿಕರು ಮತ್ತು ರೈಡಿಂಗ್ ಸಮುದಾಯ ಭಾರತೀಯ ನ್ಯಾಯ ಸಂಹಿತೆಯಡಿ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಬೈಕ್ ನಿಲ್ಲಿಸಲಿಲ್ಲವೆಂದು ಉದ್ದೇಶಪೂರ್ವಕವಾಗಿಯೇ ಗುದ್ದಿದ್ರು: ಹಿಟ್ ಆ್ಯಂಡ್ ರನ್ ಕೇಸ್‌ನಲ್ಲಿ ಬೆಚ್ಚಿಬೀಳಿಸುವ ಹೊಸ ಆ್ಯಂಗಲ್ ವಿಡಿಯೋ ವೈರಲ್
ಬೈಕರ್
ನಯನಾ ರಾಜೀವ್
|

Updated on: Sep 15, 2026 | 10:51 AM

Share

ಗುರುಗ್ರಾಮ, ಸೆಪ್ಟೆಂಬರ್ 15: ಹರಿಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಮಹಿಳಾ ಬೈಕರ್ ಸಿಯಾ ಅವರ ‘ಬೈಕಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಯ ನೈಜ ಭೀಕರತೆಯನ್ನು ತೆರೆದಿಡುವ ಮತ್ತೊಂದು ಹೊಸ ಆ್ಯಂಗಲ್ ವಿಡಿಯೋ ಹೊರಬಿದ್ದಿದೆ. ಅಪಘಾತ ಸಂಭವಿಸಿದ ವೇಳೆ ಸಿಯಾ ಅವರ ಹಿಂದೆಯೇ ಬೈಕ್‌ನಲ್ಲಿ ಬರುತ್ತಿದ್ದ ಅವರ ಸ್ನೇಹಿತ ಅಭಿಷೇಕ್ ಈ ದೃಶ್ಯಗಳನ್ನು ಹಂಚಿಕೊಂಡಿದ್ದು, ಕಾರು ಚಾಲಕ ಬೇಕೆಂದೇ ಸಿಯಾ ಅವರ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹೊಸ ವಿಡಿಯೋದಲ್ಲಿ ಏನಿದೆ?: ಸಿಯಾ ಅವರ ಬೈಕ್ ಕ್ಯಾಮೆರಾದಲ್ಲಿ ಡಿಕ್ಕಿಯ ಮುಂಭಾಗದ ದೃಶ್ಯ ಮಾತ್ರ ಇತ್ತು. ಆದರೆ ಅಭಿಷೇಕ್ ಅವರ ಹೆಲ್ಮೆಟ್ ಕ್ಯಾಮೆರಾದಲ್ಲಿ ಬಿಳಿ ಸೆಡಾನ್ ಕಾರು ವೇಗವಾಗಿ ಬಂದು ಸಿಯಾ ಅವರ ಬೈಕಿಗೆ ಬಲವಾಗಿ ಡಿಕ್ಕಿ ಹೊಡೆಯುವುದು ಮತ್ತು ರಭಸಕ್ಕೆ ಆಕೆ ರಸ್ತೆಗೆ ಉರುಳಿಬೀಳುವ ದೃಶ್ಯ ಸ್ಪಷ್ಟವಾಗಿ ದಾಖಲಾಗಿದೆ.

ಕಾರಿನಲ್ಲಿ ಮೂವರು ಕುಡುಕರು: ಎನ್‌ಡಿಟಿವಿ ಜೊತೆ ಮಾತನಾಡಿದ ಅಭಿಷೇಕ್, “ಕಾರಿನಲ್ಲಿದ್ದ ಮೂವರು ಸಂಪೂರ್ಣವಾಗಿ ಮದ್ಯಪಾನ ಮಾಡಿದ್ದರು. ಕಾರಿಗೆ ಟಿಂಟೆಡ್ ಗ್ಲಾಸ್ ಹಾಕಲಾಗಿತ್ತು. ಕಾರು ಸಿಯಾ ಅವರ ಬೈಕನ್ನು ಅತ್ಯಂತ ಅಪಾಯಕಾರಿಯಾಗಿ ಹಿಂಬಾಲಿಸುತ್ತಿತ್ತು . ಕಿಟಕಿ ಇಳಿಸಿ ಬೈಕ್ ನಿಲ್ಲಿಸುವಂತೆ ಸನ್ನೆ ಮಾಡಿದರು, ಆಕೆ ನಿರಾಕರಿಸಿ ದೂರವಿರಲು ಸೂಚಿಸಿದಾಗ ಆಕ್ರೋಶಗೊಂಡರು ಎಂದು ತಿಳಿಸಿದ್ದಾರೆ.

ತಿರುವಿನಲ್ಲಿ ನಡೆದ ಕೃತ್ಯ: ಸೆಂಟ್ರಲ್ ಪ್ಲಾಜಾ ಜಂಕ್ಷನ್ ಬಳಿ ಕಾರು ಸರಾಗವಾಗಿ ಮುಂದೆ ಹೋಗಲಿ ಎಂದು ಸಿಯಾ ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದರು. ಆದರೆ ಚಾಲಕ ಬಲದಿಂದ ಎಡಕ್ಕೆ ಕಾರನ್ನು ತಿರುಗಿಸಿ ನೇರವಾಗಿ ಬೈಕಿಗೆ ಗುದ್ದಿ ಪರಾರಿಯಾದನು ಎಂದು ಪ್ರತ್ಯಕ್ಷದರ್ಶಿ ವಿವರಿಸಿದ್ದಾರೆ.

ಆರೋಪಿಯ ಮುಖ ಸೆರೆಹಿಡಿದ ಸವಾರ: ಅಪಘಾತವಾದ ಕೂಡಲೇ ಸಿಯಾ ಅವರ ಬಳಿ ಸಾರ್ವಜನಿಕರು ಇದ್ದಿದ್ದರಿಂದ, ಅಭಿಷೇಕ್ ಕಾರನ್ನು ಬೆನ್ನಟ್ಟಿದ್ದಾರೆ. ಮುಂದೆ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾರು ನಿಂತಾಗ ಆರೋಪಿಯ ಬಳಿ ತೆರಳಿ ಪ್ರಶ್ನಿಸಿದ್ದಾರೆ, ಆ ವೇಳೆ ಆರೋಪಿ ಕಿಟಕಿ ಕೆಳಗಿಳಿಸಿದಾಗ ಆತನ ಮುಖ ಅಭಿಷೇಕ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಮತ್ತಷ್ಟು ಓದಿ: ಗುರುಗ್ರಾಮದಲ್ಲಿ ಮಹಿಳಾ ಬೈಕರ್ ಮೇಲೆ ಕಾರು ಚಾಲಕನ ದರ್ಪ: ಅಂತರ ಕಾಯ್ದುಕೊಳ್ಳಲು ಹೇಳಿದ್ದಕ್ಕೆ ಗುದ್ದಿ ಪರಾರಿ, ಆಘಾತಕಾರಿ ವಿಡಿಯೋ ವೈರಲ್

ಆರೋಪಿ ಗುರುತು ಪತ್ತೆ: ಮಹಿಳಾ ಬೈಕರ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕನನ್ನು ಕಲ್ಯಾಣ್ ಬೈನ್ಸ್ಲಾ ಎಂದು ಗುರುತಿಸಲಾಗಿದ್ದು, ವಾಹನದ ನೋಂದಣಿ ವಿವರಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಕಾನೂನು ಕ್ರಮಕ್ಕೆ ಹೆಚ್ಚಿದ ಒತ್ತಡ: ಮೊದಲೇ ನಿರ್ಧರಿಸಿ ಕೊಲೆಯತ್ನ ನಡೆಸಿದಂತೆ ಕಾಣುತ್ತಿರುವ ಈ ವಿಡಿಯೋ ಸಾಕ್ಷ್ಯಗಳು ಹೊರಬರುತ್ತಿದ್ದಂತೆ, ಹರಿಯಾಣ ಪೊಲೀಸರು ಕೇವಲ ಸಾಮಾನ್ಯ ಅಪಘಾತ ಪ್ರಕರಣವಲ್ಲದೆ, ಭಾರತೀಯ ನ್ಯಾಯ ಸಂಹಿತೆಯ (BNS) ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಬೇಕೆಂದು ಸಾರ್ವಜನಿಕರು ಹಾಗೂ ರೈಡಿಂಗ್ ಸಮುದಾಯ ತೀವ್ರವಾಗಿ ಆಗ್ರಹಿಸಿದೆ.

ಗುರುಗ್ರಾಮದ ರಸ್ತೆಗಳು ಹೆಣ್ಣುಮಕ್ಕಳಿಗೆ ಎಷ್ಟು ಮಾತ್ರಕ್ಕೂ ಸುರಕ್ಷಿತವಾಗಿಲ್ಲ, ಬೈಕ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರಿನಲ್ಲಿ ಬಂದು ಗುದ್ದಿ ಓಡಿಹೋಗುವಷ್ಟು ಪುಂಡರ ಅಟ್ಟಹಾಸ ಮಿತಿಮೀರಿದೆ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ