
ಗುರುಗ್ರಾಮ, ಸೆಪ್ಟೆಂಬರ್ 30: ಸಾಫ್ಟ್ವೇರ್ ಎಂಜಿನಿಯರ್ ಪತ್ನಿಯ ಜತೆ ಜಗಳವಾಡಿ ಆಕೆಯನ್ನು ಕೊಂದು ಸ್ನೇಹಿತನಿಗೆ ವಿಷಯ ತಿಳಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಿವಾಸಿ ಕುಮಾರ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) ಮೂರು ವರ್ಷಗಳ ಹಿಂದೆ ವಿವಾಹವಾದರು. ಇಬ್ಬರೂ ಗುರುಗ್ರಾಮ್‌ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಪೊಲೀಸರು ತಿಳಿಸಿರುವ ಪ್ರಕಾರ, ಕುಮಾರ್ ಅವರ ಸ್ನೇಹಿತನಿಂದ ಕರೆ ಬಂದಿದ್ದು, ಮಧ್ಯಾಹ್ನ 3.15 ಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಕಳುಹಿಸಿದ್ದೇನೆ ಎಂದು ಹೇಳಿದ್ದಾನೆ. ದಂಪತಿ ನಡುವೆ ಯಾವುದೋ ವಿಚಾರಕ್ಕೆ ವಾಗ್ವಾದ ನಡೆದಿತ್ತು.
ಪೊಲೀಸರು ಸೆಕ್ಟರ್ 37 ರಲ್ಲಿರುವ ವಸತಿ ಸೊಸೈಟಿಯಲ್ಲಿರುವ ಅವರ ಫ್ಲಾಟ್ ಅನ್ನು ತಲುಪಿದಾಗ, ಶರ್ಮಾಳ ದೇಹವು ನೆಲದ ಮೇಲೆ ಬಿದ್ದಿರುವುದು ಕಂಡುಬಂದಿತು, ಆ ಸ್ಕಾರ್ಫ್ ಅನ್ನು ಆಕೆಯ ಕುತ್ತಿಗೆ ಹಿಸುಕಿ ಕೊಲ್ಲಲು ಬಳಸಲಾಗಿತ್ತು.
ಕುಮಾರ್ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಮಾರ್ ತನ್ನ ಪತ್ನಿಯನ್ನು ಕೊಂದಿರುವಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಎರಡೂ ಘಟನೆಗಳ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ. ಮಹಿಳೆಯ ಕುಟುಂಬವು ಕುಮಾರ್ ವಿರುದ್ಧ ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದೆ.
ಮತ್ತಷ್ಟು ಓದಿ: ಪೋಷಕರಿದ್ದ ಕೋಣೆಯ ಪಕ್ಕದ ಬಾಲ್ಕನಿಯಿಂದ ಹಾರಿ ಪ್ರಾಣ ಬಿಟ್ಟ ತರಬೇತಿ ನಿರತ ವೈದ್ಯ
ಭಾವಿ ಪತ್ನಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ವ್ಯಕ್ತಿ ಆತ್ಮಹತ್ಯೆ
ವ್ಯಕ್ತಿಯೊಬ್ಬ ತನ್ನ ಭಾವಿ ಪತ್ನಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿದ್ವಾರದಲ್ಲಿ ನಡೆದಿದೆ. ನವೀನ್ ಎಂದು ಗುರುತಿಸಲಾದ ಆ ವ್ಯಕ್ತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದು, ಸ್ನೇಹಿತನ ಕೋಣೆಯಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆತ ಇಷ್ಟ ಪಟ್ಟ ಹುಡುಗಿಯೊಂದಿಗೆ ಆತನ ನಿಶ್ಚಿತಾರ್ಥವಾಗಿತ್ತು, ಆದರೂ ಯಾಕೆ ದುಡುಕಿ ಈ ನಿರ್ಧಾರ ತೆಗೆದುಕೊಂಡ ಎನ್ನುವ ಕುರಿತು ಇನ್ನೂ ಮಾಹಿತಿ ಹೊರಬರಬೇಕಿದೆ. ಮಧ್ಯಾಹ್ನ 2.30 ರ ಸುಮಾರಿಗೆ ನವೀನ್ ತನ್ನ ನಿಶ್ಚಿತ ವಧುವಿನೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಹಗ್ಗದಿಂದ ನೇಣು ಬಿಗಿದು, ಅದನ್ನು ಸೀಲಿಂಗ್ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನವೀನ್ ಹಾಗೂ ಋಷಿ ಬಹಳ ಸಮಯದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಭಾನುವಾರ, ಫೇಸ್‌ಬುಕ್ ವೀಡಿಯೊ ಕರೆಯಲ್ಲಿ ಅವರೊಂದಿಗೆ ಮಾತನಾಡುತ್ತಿದ್ದಾಗ, ನವೀನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಮತ್ತು ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ