AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಗ್ರಾಮ್‌ನಲ್ಲಿ ದಂಪತಿ ಸಾವು: ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ಬೆಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ ಶಂಕೆ

ಗುರುಗ್ರಾಮ್‌ನ ಅಪಾರ್ಟ್‌ಮೆಂಟ್‌ನಲ್ಲಿ ಬೆಂಗಳೂರು ಮೂಲದ ಟೆಕ್ಕಿ ಮೊಹಮ್ಮದ್ ಅಸ್ಲಂ ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಕ್ಟೋಬರ್ 15ರಂದು ಬೆಳಿಗ್ಗೆ ಸುಮಾರು 10.30ಕ್ಕೆ ಗುರುಗ್ರಾಮ್‌ನ ಸೆಕ್ಟರ್ 68ರ ಎಂ3ಎಂ ಮರೀನಾ ಅಪಾರ್ಟ್‌ಮೆಂಟ್‌ನ ಏಳನೇ ಟವರ್‌ನ 103ನೇ ಫ್ಲ್ಯಾಟ್‌ನಲ್ಲಿ ದಂಪತಿ ಮೃತಪಟ್ಟಿರುವ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ಬಂದಿತ್ತು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ.

ಗುರುಗ್ರಾಮ್‌ನಲ್ಲಿ ದಂಪತಿ ಸಾವು: ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ಬೆಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ ಶಂಕೆ
ಮೃತ ದಂಪತಿ
ಪ್ರಸನ್ನ ಹೆಗಡೆ
|

Updated on:Oct 18, 2026 | 10:41 AM

Share

ಗುರುಗ್ರಾಮ್, ಅಕ್ಟೋಬರ್​​ 18: ಗುರುಗ್ರಾಮ್‌ನ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಸಂಕೀರ್ಣವೊಂದರ ಫ್ಲ್ಯಾಟ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು, ಬಳಿಕ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಟೆಕ್ಕಿ ತನ್ನ ಕಂಪನಿಯ ಹಿರಿಯ ಅಧಿಕಾರಿಗಳಿಗೆ ಇ-ಮೇಲ್ ಕಳುಹಿಸಿ, ತನ್ನ ತಂದೆ ಮತ್ತು ಮನೆಯ ಮಾಲೀಕರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದ ಎನ್ನಲಾಗಿದೆ.

ಅಕ್ಟೋಬರ್ 15ರಂದು ಬೆಳಿಗ್ಗೆ ಸುಮಾರು 10.30ಕ್ಕೆ ಗುರುಗ್ರಾಮ್‌ನ ಸೆಕ್ಟರ್ 68ರ ಎಂ3ಎಂ ಮರೀನಾ ಅಪಾರ್ಟ್‌ಮೆಂಟ್‌ನ ಏಳನೇ ಟವರ್‌ನ 103ನೇ ಫ್ಲ್ಯಾಟ್‌ನಲ್ಲಿ ದಂಪತಿ ಮೃತಪಟ್ಟಿರುವ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ಬಂದಿತ್ತು. ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಹಿಳೆಯ ಮೃತದೇಹ ನೆಲದ ಮೇಲೆ ಬಿದ್ದಿತ್ತು. ಪುರುಷನ ಮೃತದೇಹ ಸೀಲಿಂಗ್ ಫ್ಯಾನ್‌ನ ಕೊಕ್ಕೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತರನ್ನು 28 ವರ್ಷದ ಫರ್ಹಾನಾ ಮತ್ತು 30 ವರ್ಷದ ಮೊಹಮ್ಮದ್ ಅಸ್ಲಂ ಎಂದು ಗುರುತಿಸಲಾಗಿದೆ. ಫರ್ಹಾನಾ ಕೇರಳ ಮೂಲದವರಾಗಿದ್ದು, ಅಸ್ಲಂ ಬೆಂಗಳೂರಿನ ನಿವಾಸಿಯಾಗಿದ್ದರು. ಅಸ್ಲಂ ಗುರುಗ್ರಾಮ್‌ನ ಸೆಕ್ಟರ್ 58ರಲ್ಲಿರುವ ಐಟಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಫರ್ಹಾನಾ ಗೃಹಿಣಿಯಾಗಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮೊಮ್ಮಗಳನ್ನು ನೋಡಲು ಬಂದ ಅಜ್ಜಿ ಮೇಲೆ ಹಲ್ಲೆ: ಮಗಳ ಇ-ಮೇಲ್‌ನಲ್ಲಿ ಪತ್ತೆಯಾಯ್ತು ಗಂಡನ ಕ್ರೌರ್ಯ

ಕಂಪನಿಯ ಹಿರಿಯ ಅಧಿಕಾರಿಗಳಿಗೆ ಇಮೇಲ್

ಅಸ್ಲಂ ತನ್ನ ಜೀವವನ್ನು ಅಂತ್ಯಗೊಳಿಸಲು ನಿರ್ಧರಿಸಿರುವುದಾಗಿ ಕಂಪನಿಯ ಹಿರಿಯ ಅಧಿಕಾರಿಗಳಿಗೆ ಇಮೇಲ್ ಕಳುಹಿಸಿದ್ದರು. ಅಲ್ಲದೆ, ತನ್ನ ತಂದೆ ಮತ್ತು ಮನೆಯ ಮಾಲೀಕರ ಮೊಬೈಲ್ ಸಂಖ್ಯೆಗಳನ್ನು ನೀಡಿ, ಅವರಿಗೆ ಮಾಹಿತಿ ತಿಳಿಸುವಂತೆ ಕೋರಿದ್ದರು ಎಂದು ಅಧಿಕಾರಿ ಹೇಳಿದ್ದಾರೆ. ಇಮೇಲ್ ಸ್ವೀಕರಿಸಿದ ಬಳಿಕ ಕಂಪನಿಯ ಅಧಿಕಾರಿಗಳು ಮನೆಯ ಮಾಲೀಕರನ್ನು ಸಂಪರ್ಕಿಸಿದ್ದು, ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಆದರೆ, ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ದಂಪತಿ ಮೃತಪಟ್ಟಿದ್ದರು. ಫ್ಲ್ಯಾಟ್‌ನಲ್ಲಿ ವಿಧಿವಿಜ್ಞಾನ ತಂಡಕ್ಕೆ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಅಸ್ಲಂ ಮೊದಲು ಫರ್ಹಾನಾ ಅವರನ್ನು ಉಸಿರುಗಟ್ಟಿಸಿ ಕೊಂದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ಆದರೆ, ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:40 am, Sun, 18 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ