Gurugram: ಪ್ರಿಯಕರನ ಆತ್ಮಹತ್ಯೆ ಸುದ್ದಿ ಕೇಳಿ ನೊಂದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ

ಪ್ರಿಯಕರನ ಆತ್ಮಹತ್ಯೆಯಿಂದ ನೊಂದು ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

Gurugram: ಪ್ರಿಯಕರನ ಆತ್ಮಹತ್ಯೆ ಸುದ್ದಿ ಕೇಳಿ ನೊಂದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ
ಪೊಲೀಸ್
Image Credit source: NDTV

Updated on: Mar 29, 2023 | 8:49 AM

ಪ್ರಿಯಕರನ ಆತ್ಮಹತ್ಯೆಯಿಂದ ನೊಂದು ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಟ್ಟ ಸ್ಥಿತಿಯಲ್ಲಿದ್ದ ಅವರನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಬಳಿಕ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಕಳುಹಿಸಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯುವತಿಯ ಕೊಠಡಿಯಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಿಹಾರ ಮೂಲದ ಮಂಜು ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸೆಕ್ಟರ್ 37 ಪ್ರದೇಶದಲ್ಲಿ ಬಾಡಿಗೆ ಮನೆ ಪಡೆದು ವಾಸಿಸುತ್ತಿದ್ದರು.

ಮತ್ತಷ್ಟು ಓದಿ: ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲು

ಭಾನುವಾರ ಸಂಜೆ ಅಕ್ರಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಿರಾಣಿ ಅಂಗಡಿಯ ನಿರ್ವಾಹಕ ಬಾಬುಲಾಲ್ ಜೊತೆ ಅವರು ಸಂಬಂಧ ಹೊಂದಿದ್ದರು ಎಂಬುದು ತಿಳಿದುಬಂದಿದೆ. ಭಾನುವಾರ ತಡರಾತ್ರಿ ತನ್ನ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಯುವತಿ ಬೆಂಕಿ ಹಚ್ಚಿಕೊಂಡಿದ್ದಾಳೆ. ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ