AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆ ಆಯ್ತು, ಗುರುವಾಯೂರ್ ದೇವಸ್ಥಾನದಲ್ಲೂ ಚಿನ್ನದ ಕಳ್ಳತನ ಬೆಳಕಿಗೆ

Guruvayur temple gold missing case: ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳುವಾಗಿರುವ ಘಟನೆ ಬೆನ್ನಲ್ಲೇ ಗುರುವಾಯೂರ್​ನಲ್ಲೂ ನಡೆದಿರುವುದು ಬೆಳಕಿಗೆ ಬಂದಿದೆ. 18 ದೇವಸ್ಥಾನಗಳನ್ನು ನಿರ್ವಹಿಸುವ ಗುರುವಾಯೂರ್ ದೇವಸ್ವಾಮ್ ಮಂಡಳಿಯ ಆಡಿಟಿಂಗ್ ವೇಳೆ ಇದು ಬೆಳಕಿಗೆ ಬಂದಿದೆ. ಚಿನ್ನ, ಬೆಳ್ಳಿ, ದಂತ ಇತ್ಯಾದಿ ಬೆಲೆ ಬಾಳುವ ವಸ್ತುಗಳ ಲೆಕ್ಕ ಸಿಕ್ಕಿಲ್ಲ ಎನ್ನಲಾಗಿದೆ.

ಶಬರಿಮಲೆ ಆಯ್ತು, ಗುರುವಾಯೂರ್ ದೇವಸ್ಥಾನದಲ್ಲೂ ಚಿನ್ನದ ಕಳ್ಳತನ ಬೆಳಕಿಗೆ
ಗುರುವಾಯೂರ್ ದೇವಸ್ಥಾನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 22, 2025 | 6:56 PM

Share

ತಿರುವನಂತಪುರಂ, ಅಕ್ಟೋಬರ್ 22: ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳುವಾಗಿರುವ ಘಟನೆ ಹಿಂದೂ ಧಾರ್ಮಿಕ ಭಕ್ತರಿಗೆ ಆಘಾತ ಕೊಟ್ಟ ಘಟನೆ ಮಾಸುವ ಮುನ್ನವೇ ಕೇರಳದ ಮತ್ತೊಂದು ದೇವಸ್ಥಾನದಲ್ಲಿ ಅಂತಹುದ್ದೇ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಬಹಳ ಜನಪ್ರಿಯವಾದ ಗುರುವಾಯೂರ್ ದೇವಸ್ಥಾನಗಳಲ್ಲಿ (Guruvayur temple) ಬೆಲೆಬಾಳುವ ಆಭರಣಗಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಕೇರಳದಲ್ಲಿ 12 ದೇವಸ್ಥಾನಗಳ ಆಡಳಿತ ನಿಭಾಯಿಸುವ ಗುರುವಾಯೂರ್ ದೇವಸ್ವಾಮ್ ಮಂಡಳಿಯ ಆಡಿಟಿಂಗ್ ವೇಳೆ ಸಾಕಷ್ಟು ವ್ಯತ್ಯಯಗಳು ಪತ್ತೆಯಾಗಿವೆ. 2019ರಲ್ಲಿ ಮಾಡಲಾದ ಆಡಿಟಿಂಗ್​ನಲ್ಲಿ ಕೆಲ ಗಮನಾರ್ಹ ಸಂಗತಿಗಳು ಬೆಳಕಿಗೆ ಬಂದಿವೆ. ಚಿನ್ನ, ಬೆಳ್ಳಿ, ದಂತ ಇತ್ಯಾದಿ ಹಲವು ವಸ್ತುಗಳು ಕಾಣೆಯಾಗಿರುವುದು ಗೊತ್ತಾಗಿದೆ. ಗೋಲ್ಡ್ ಸ್ಕೀಮ್​ನಲ್ಲಿ ಇರಲಾಗಿದ್ದ ಠೇವಣಿಗಳಿಂದ 79 ಲಕ್ಷ ರೂ ನಷ್ಟವಾಗಿರುವುದನ್ನು ತೋರಿಸಲಾಗಿದೆ.

ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿ ಕಡಿಮೆ ಮಾಡುತ್ತೆ ಭಾರತ, ಪ್ರಧಾನಿ ಮೋದಿಯಿಂದ ಭರವಸೆ ಸಿಕ್ಕಿದೆ ಎಂದ ಟ್ರಂಪ್

2019-20 ಮತ್ತು 2020-21ರ ಅವಧಿಯಲ್ಲಿ ಗುರುವಾಯೂರ್ ದೇವಸ್ವಾಮ್​ನ ಆಡಿಟಿಂಗ್ ಅನ್ನು ಸರ್ಕಾರದಿಂದ ನಡೆಸಲಾಗಿತ್ತು. ಅದರ ವರದಿಯು ಈಗ ಬೆಳಕಿಗೆ ಬಂದಿದೆ. ಆದಾಯ ಮತ್ತು ವೆಚ್ಚದ ಲೆಕ್ಕದಲ್ಲಿ ವ್ಯತ್ಯಾಸ ಗೊತ್ತಾಗಿದೆ. ಚಿನ್ನ, ಬೆಳ್ಳಿ ಇತ್ಯಾದಿ ಬೆಲೆಬಾಳುವ ವಸ್ತುಗಳ ಪರಿಶೀಲನೆಯನ್ನು ಸರಿಯಾಗಿ ನಡೆಸಲಾಗಿಲ್ಲ ಎಂಬುದು ಗೊತ್ತಾಗಿದೆ. ಒಟ್ಟಾರೆ 25 ಕೋಟಿ ರೂ ಮೊತ್ತದ ವಸ್ತುಗಳಿಗೆ ಲೆಕ್ಕ ಸಿಕ್ಕಿಲ್ಲ ಎನ್ನಲಾಗಿದೆ.

ಕೇರಳ ಸರ್ಕಾರದ ವಿರುದ್ಧ ಟೀಕೆ

ಗುರುವಾಯೂರ್ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿರುವುದು ಹಾಗೂ ಆಡಳಿತ ನಿರ್ವಹಣೆ ಸರಿಯಾಗಿ ಆಗದೇ ಇರುವುದು ಸೋಷಿಯಲ್ ಮೀಡಿಯಾದಲ್ಲಿ ಕೆಲವರಿಂದ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ. ಕೇರಳದ ಎಡಪಂಥೀಯ ಸರ್ಕಾರ ಉದ್ದೇಶಪೂರ್ವಕವಾಗಿ ಹಿಂದೂ ದೇವಸ್ಥಾನಗಳನ್ನು ನಿರ್ಲಕ್ಷಿಸುತ್ತಿವೆ ಎಂದು ಪ್ರದೀಪ್ ಭಂಡಾರಿ ಎನ್ನುವವರು ಎಕ್ಸ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾ ಪೋಸ್ಟ್

ಇದನ್ನೂ ಓದಿ: ತಮಿಳುನಾಡಿನಲ್ಲಿ ವರುಣ ಅಬ್ಬರ; ಚಂಡಮಾರುತ ಸಂಭವ; ಬೆಂಗಳೂರಿಗೂ ರಾಚುತ್ತಾ ಮಳೆ?

ಇದೇ ವೇಳೆ, ಗುರುವಾಯೂರ್ ದೇವಸ್ವಾಮ್ ಮಂಡಳಿ ಈ ಆಡಿಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಲೋಪದೋಷಗಳನ್ನು ಸರಿಪಡಿಸಲಾಗಿದ್ದು, ಈ ಮಾಹಿತಿಯನ್ನು ಕೇರಳ ಹೈಕೋರ್ಟ್​ಗೆ ವಿವರಾದ ಅಫಿಡವಿಟ್ ಮೂಲಕ ಸಲ್ಲಿಸಲಾಗಿದೆ ಎಂದು ಹೇಳಿದೆ. ಕೇರಳ ಸರ್ಕಾರ ಕೂಡ ಇದೇ ಅಭಿಪ್ರಾಯ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Wed, 22 October 25

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ