Bikaner Express Accident: ಬಿಕನೇರ್- ಗುವಾಹಟಿ ರೈಲು ಅಪಘಾತ; ಸಾವಿನ ಸಂಖ್ಯೆ 9ಕ್ಕೆ ಏರಿಕೆ

Bengal Train Accident: ಬಿಕನೇರ್- ಗುವಾಹಟಿ ರೈಲು ಅಪಘಾತದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿದೆ. ಒಟ್ಟು 36 ಜನರು ಗಾಯಗೊಂಡಿದ್ದು ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.

Bikaner Express Accident: ಬಿಕನೇರ್- ಗುವಾಹಟಿ ರೈಲು ಅಪಘಾತ; ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಬಿಕನೇರ್- ಗುವಾಹಟಿ ರೈಲು ಅಪಘಾತ (ಚಿತ್ರ: ಪಿಟಿಐ)
Follow us
TV9 Web
| Updated By: shivaprasad.hs

Updated on:Jan 14, 2022 | 10:11 AM

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದ ಬಿಕಾನೇರ್-ಗುವಾಹಟಿ ರೈಲಿನ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿದೆ, 36 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಗುರುವಾರ ಅಸ್ಸಾಂ ಕಡೆ ತೆರಳುತ್ತಿದ್ದ ಬಿಕಾನೆರ್-ಗುವಾಹಟಿ ಎಕ್ಸ್‌ಪ್ರೆಸ್​ನ(15633) 12 ಬೋಗಿಗಳು ಹಳಿತಪ್ಪಿದ್ದವು. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ ಮೂವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ಜಲ್ಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಬಸು ತಿಳಿಸಿದ್ದಾರೆ. ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. 

ಇಂದು ಮುಂಜಾನೆ ಪ್ರಧಾನಿ ಮೋದಿ ಕೂಡ ಅಧಿಕಾರಿಗಳ ಬಳಿ ವಿಚಾರಿಸಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಜನರ ಕುಟುಂಬ ಸದಸ್ಯರಿಗೆ ಭಾರತೀಯ ರೈಲ್ವೇ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಗಾಯಾಳುಗಳನ್ನು ಜಲಪೈಗುಡಿ ಜಿಲ್ಲಾಸ್ಪತ್ರೆ ಮತ್ತು ನ್ಯೂ ಮೊಯಿನಗುಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಎರಡು ತಂಡಗಳೊಂದಿಗೆ ಧಾವಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿತ್ತು.

ಟಿಎಂಸಿ ಸಂಸದ ಸೌಗತ ರಾಯ್ ಮಾತನಾಡಿ, ಒಂದು ವೇಳೆ ರೈಲ್ವೆ ಹಳಿಯಲ್ಲಿ ಬಿರುಕು ಇದ್ದಿದ್ದು ಹೌದಾದರೆ, ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಎಎನ್​ಐಗೆ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿ ಅವರೊಂದಿಗಿನ ಕೊವಿಡ್ ಕುರಿತ ಸಿಎಂ ಸಭೆಯಲ್ಲಿ ದುರಂತದ ಕುರಿತು ವಿವರಿಸಿದ್ದಾರೆ.

ಇದನ್ನೂ ಓದಿ:

ಆರೋಪಿಯ ಬಂಧಿಸಲು ತಮ್ಮ ಕಾರು ಕೊಟ್ಟಿದ್ದೇಕೆ ಜಿಲ್ಲೆಯ ನಂ. 1 ಪೊಲೀಸ್​ ಅಧಿಕಾರಿ? ಇದರಲ್ಲಿ ಇನ್ಸ್​ಪೆಕ್ಟರ್​ ಸಾಹೇಬ ಹಕೀಕತ್ತು, ಹಿಕ್ಮತ್ತು ಏನು?

‘ದೇವರು ಇದ್ದಾನೋ ಇಲ್ಲವೋ?’: ಸಮನ್ವಿ ನಿಧನದ ಬಳಿಕ ಸೃಜನ್​ ಲೋಕೇಶ್​ ನೋವಿನ ನುಡಿ

Published On - 8:38 am, Fri, 14 January 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್