ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದ ಬಿಕಾನೇರ್-ಗುವಾಹಟಿ ರೈಲಿನ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿದೆ, 36 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಗುರುವಾರ ಅಸ್ಸಾಂ ಕಡೆ ತೆರಳುತ್ತಿದ್ದ ಬಿಕಾನೆರ್-ಗುವಾಹಟಿ ಎಕ್ಸ್ಪ್ರೆಸ್ನ(15633) 12 ಬೋಗಿಗಳು ಹಳಿತಪ್ಪಿದ್ದವು. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ ಮೂವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ಜಲ್ಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಬಸು ತಿಳಿಸಿದ್ದಾರೆ. ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಮುಂಜಾನೆ ಪ್ರಧಾನಿ ಮೋದಿ ಕೂಡ ಅಧಿಕಾರಿಗಳ ಬಳಿ ವಿಚಾರಿಸಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಜನರ ಕುಟುಂಬ ಸದಸ್ಯರಿಗೆ ಭಾರತೀಯ ರೈಲ್ವೇ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಗಾಯಾಳುಗಳನ್ನು ಜಲಪೈಗುಡಿ ಜಿಲ್ಲಾಸ್ಪತ್ರೆ ಮತ್ತು ನ್ಯೂ ಮೊಯಿನಗುಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಎರಡು ತಂಡಗಳೊಂದಿಗೆ ಧಾವಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿತ್ತು.
ಟಿಎಂಸಿ ಸಂಸದ ಸೌಗತ ರಾಯ್ ಮಾತನಾಡಿ, ಒಂದು ವೇಳೆ ರೈಲ್ವೆ ಹಳಿಯಲ್ಲಿ ಬಿರುಕು ಇದ್ದಿದ್ದು ಹೌದಾದರೆ, ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಎಎನ್ಐಗೆ ಹೇಳಿಕೆ ನೀಡಿದ್ದಾರೆ.
Kolkata | It is suspected that there was a crack on track, it should be investigated. The Railway Minister should give a clear statement on the incident: Saugata Roy, TMC MP on Bikaner-Guwahati Express derailment incident that claimed 4 lives (13.01) pic.twitter.com/LsYdUUOrGz
— ANI (@ANI) January 14, 2022
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿ ಅವರೊಂದಿಗಿನ ಕೊವಿಡ್ ಕುರಿತ ಸಿಎಂ ಸಭೆಯಲ್ಲಿ ದುರಂತದ ಕುರಿತು ವಿವರಿಸಿದ್ದಾರೆ.
ಇದನ್ನೂ ಓದಿ:
‘ದೇವರು ಇದ್ದಾನೋ ಇಲ್ಲವೋ?’: ಸಮನ್ವಿ ನಿಧನದ ಬಳಿಕ ಸೃಜನ್ ಲೋಕೇಶ್ ನೋವಿನ ನುಡಿ
Published On - 8:38 am, Fri, 14 January 22