AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬೆಲೆ ಏರಿಕೆ ಸಿಟ್ಟಿಗೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿದ ಕಿರಾತಕರು

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಇಂಧನ ದರ ವಿವಾದದ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಭೀಕರ ಘಟನೆ ನಡೆದಿದೆ. ಮಗನನ್ನು ರಕ್ಷಿಸಲು ಹೋದ ತಂದೆಗೂ ಗಾಯಗಳಾಗಿವೆ. ಆಕಾಶ್ ಸೆಂಗಾರ್ ದೇಹದ ಶೇ. 37 ರಷ್ಟು ಸುಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಪೆಟ್ರೋಲ್ ಬೆಲೆ ಏರಿಕೆ ಸಿಟ್ಟಿಗೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿದ ಕಿರಾತಕರು
ಪೆಟ್ರೋಲ್
ನಯನಾ ರಾಜೀವ್
|

Updated on: Jun 25, 2026 | 3:05 PM

Share

ಮುಖ್ಯಾಂಶಗಳು

  • ಇಂಧನ ದರದ ಜಗಳಕ್ಕೆ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಕಿರಾತಕರು
  • ಮಗನನ್ನು ರಕ್ಷಿಸಲು ಹೋಗಿ ಸೆಕ್ಯೂರಿಟಿ ಗಾರ್ಡ್ ತಂದೆಯ ಕಾಲುಗಳು ಸುಟ್ಟುಹೋಗಿವೆ
  • ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಸಿಸಿಟಿವಿ ಪರಿಶೀಲಿಸುತ್ತಿರುವ ಪೊಲೀಸರು

ಭೋಪಾಲ್, ಜೂನ್ 25: ಪೆಟ್ರೋಲ್(Petrol) ಬೆಲೆ ಏರಿಕೆಯ ಕೋಪಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಬೆಂಕಿಯ ಜ್ವಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಮಗನನ್ನು ರಕ್ಷಿಸಲು ಹೋಗಿದ್ದ ತಂದೆಗೂ ಬೆಂಕಿ ತಗುಲಿದೆ. ಗ್ವಾಲಿಯರ್‌ನ ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಆಕಾಶ್ ಸೆಂಗಾರ್ ಹಲ್ಲೆಗೆ ಒಳಗಾದ ದುರ್ದೈವಿ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮೂವರು ಯುವಕರು ಬುಲೆಟ್ ಬೈಕ್‌ನಲ್ಲಿ ಪೆಟ್ರೋಲ್ ಹಾಕಿಸಲು ಬಂದಿದ್ದರು. ಇಂಧನದ ದರದ ವಿಚಾರವಾಗಿ ಅವರು ಬಂಕ್ ಸಿಬ್ಬಂದಿ ಆಕಾಶ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ.

ಈ ವೇಳೆ ಕ್ರೂರಿಗಳಾದ ಆ ಯುವಕರು ಇದ್ದಕ್ಕಿದ್ದಂತೆ ಆಕಾಶ್ ದೇಹದ ಮೇಲೆ ಪೆಟ್ರೋಲ್ ಸುರಿದು, ಲೈಟರ್‌ನಿಂದ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಆಕಾಶ್ ಬೆಂಕಿಯ ಜ್ವಾಲೆಯಲ್ಲಿ ಸಿಲುಕಿ ರಕ್ಷಣೆಗಾಗಿ ಜೋರಾಗಿ ಕಿರುಚಾಡಲಾರಂಭಿಸಿದ್ದಾನೆ.

ಇದೇ ಪೆಟ್ರೋಲ್ ಪಂಪ್‌ನ ಪಕ್ಕದಲ್ಲಿರುವ ಟ್ರಾವೆಲ್ಸ್ ಕಚೇರಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಆಕಾಶ್ ತಂದೆ ರಾಮಚಂದ್ರ ಸೆಂಗಾರ್, ಮಗನ ಕಿರುಚಾಟ ಕೇಳಿ ಓಡಿ ಬಂದಿದ್ದಾರೆ. ಉರಿಯುತ್ತಿದ್ದ ಮಗನನ್ನು ಅಪ್ಪಿಕೊಂಡು ಬೆಂಕಿ ನಂದಿಸಲು ಹತಾಶ ಪ್ರಯತ್ನ ನಡೆಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ಅವರ ಎರಡೂ ಕಾಲುಗಳು ಭೀಕರವಾಗಿ ಸುಟ್ಟುಹೋಗಿವೆ.

ಮತ್ತಷ್ಟು ಓದಿ: ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಪೆಟ್ರೋಲ್ ಬಂಕ್​ನತ್ತ ಸುಳಿಯದ ವಾಹನ ಸವಾರರು

ಸ್ಥಳೀಯರು ತಕ್ಷಣ ಧಾವಿಸಿ ಬೆಂಕಿ ನಂದಿಸಿ, ತಂದೆ-ಮಗ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕಾಶ್ ದೇಹದ ಶೇ. 37 ರಷ್ಟು ಭಾಗ ಸುಟ್ಟುಹೋಗಿದ್ದು, ಆತನ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಭೀಕರ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಡೋಲಿ ಅಲಿಯಾಸ್ ಅನುಜ್ ಗುರ್ಜರ್ ಮತ್ತು ಸಚಿನ್ ಗುರ್ಜರ್ ಎಂಬ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಮೂರನೇ ಆರೋಪಿ ಅರವಿಂದ್ ಛವಾಯಿ ಪ್ರಸ್ತುತ ತಲೆಮರೆಸಿಕೊಂಡಿದ್ದು, ಆತನಿಗಾಗಿ ತೀವ್ರ ಹುಡುಕಾಟ ನಡೆದಿದೆ. ಪೊಲೀಸರು ಘಟನೆಯ ನಿಖರವಾದ ಘಟನೆ ತಿಳಿಯಲು ಪಂಪ್‌ನಲ್ಲಿರುವ ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!