AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh Accident: ಗ್ವಾಲಿಯರ್‌ನಲ್ಲಿ ಭೀಕರ ಅಪಘಾತ, ಕಾರ್ಮಿಕರಿದ್ದ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿ 8 ಮಂದಿ ಸಾವು

ಮಧ್ಯಪ್ರದೇಶ ರಸ್ತೆ ಅಪಘಾತ: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಸೋಮವಾರ ತಡರಾತ್ರಿ ಸಂಭವಿಸಿದ ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

Madhya Pradesh Accident: ಗ್ವಾಲಿಯರ್‌ನಲ್ಲಿ ಭೀಕರ ಅಪಘಾತ, ಕಾರ್ಮಿಕರಿದ್ದ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿ 8 ಮಂದಿ ಸಾವು
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on: Aug 18, 2026 | 6:45 AM

Share

ಮುಖ್ಯಾಂಶಗಳು

  • ಗ್ವಾಲಿಯರ್‌ನಲ್ಲಿ ಭೀಕರ ರಸ್ತೆ ಅಪಘಾತ
  • ಟ್ರಕ್ ಡಿಕ್ಕಿಯಾಗಿ ಎಂಟು ಮಂದಿ ಸಾವು
  • 25ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ

ಭೋಪಾಲ್, ಆಗಸ್ಟ್ 18: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ-79ರಲ್ಲಿ ರಾತ್ರಿ 12ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಿಂಕಾ ಸಮೀಪದಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಲೋಡಿಂಗ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲೋಡಿಂಗ್ ವಾಹನ ಪಲ್ಟಿಯಾಗಿದ್ದು, ಅದರಲ್ಲಿದ್ದ ಹಲವು ಮಂದಿ ವಾಹನದೊಳಗೆ ಸಿಲುಕಿಕೊಂಡಿದ್ದರು.

ಅಪಘಾತದ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು, ಸ್ಥಳೀಯರು ಹಾಗೂ ವಾಹನ ಸವಾರರು ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳನ್ನು ಗ್ವಾಲಿಯರ್‌ನ ಜಯ ಆರೋಗ್ಯ ಆಸ್ಪತ್ರೆಯ ಟ್ರಾಮಾ ಸೆಂಟರ್ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರ

ಪೊಲೀಸ್ ಅಧಿಕಾರಿಗಳ ಪ್ರಕಾರ, ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಇನ್ನು ಕೆಲವರ ಆರೋಗ್ಯ ಸ್ಥಿರವಾಗಿದೆ. ಮೃತಪಟ್ಟವರಲ್ಲಿ ಕೆಲವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕುಟುಂಬಸ್ಥರನ್ನು ಸಂಪರ್ಕಿಸುವ ಪ್ರಯತ್ನ ನಡೆಯುತ್ತಿದೆ.

ಭತ್ತ ನಾಟಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕಾರ್ಮಿಕರು

ಅಪಘಾತಕ್ಕೀಡಾದ ಕಾರ್ಮಿಕರು ಉತ್ತರ ಪ್ರದೇಶದವರು ಎನ್ನಲಾಗಿದ್ದು, ಭತ್ತ ನಾಟಿ ಕೆಲಸಕ್ಕಾಗಿ ಡಬ್ರಾ ಪ್ರದೇಶದ ಚನೋರ್‌ ಭಾಗಕ್ಕೆ ಬಂದಿದ್ದರು. ಕೆಲಸ ಮುಗಿಸಿಕೊಂಡು ಊರಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ತಾರಾಪೀಠದ ಖಾಸಗಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ, 7 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

ಸದ್ಯ ಟ್ರಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅದರ ಚಾಲಕನಿಗೂ ಗಾಯಗಳಾಗಿರುವ ಸಾಧ್ಯತೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ