AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪ್ಪಾ ನನ್ನನ್ನು ಬದುಕಿಸಿ’; ಫೋನ್ ಮಾಡಿದ 20 ನಿಮಿಷದಲ್ಲೇ ಯುವತಿ ಸಾವು

ಮದುವೆಯಾದ ಕೇವಲ 1 ವರ್ಷದಲ್ಲೇ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ತನ್ನ ಮನೆಯಲ್ಲಿ ನವವಿವಾಹಿತ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಆಕೆಯ ಕುಟುಂಬವು ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಆರೋಪ ಮಾಡಿದೆ. ಆದರೆ, ಮಹಿಳೆಯ ಅತ್ತೆ-ಮಾವಂದಿರು ಆಕೆ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಪಾಲಕ್ ರಜಾಕ್ ಎಂಬ 21 ವರ್ಷದ ಯುವತಿ ತನ್ನ ಸಾವಿಗೂ ಸುಮಾರು 20 ನಿಮಿಷಗಳ ಮೊದಲು ತನ್ನ ತಂದೆಗೆ ಕರೆ ಮಾಡಿ, ತನ್ನ ಅತ್ತೆ-ಮಾವನ ಮನೆಯಿಂದ ಕರೆದೊಯ್ಯುವಂತೆ ಬೇಡಿಕೊಂಡಿದ್ದಳು. ಅವರು ಬರುವಷ್ಟರಲ್ಲಿ ಆಕೆ ಮೃತಪಟ್ಟಾಗಿತ್ತು.

'ಅಪ್ಪಾ ನನ್ನನ್ನು ಬದುಕಿಸಿ'; ಫೋನ್ ಮಾಡಿದ 20 ನಿಮಿಷದಲ್ಲೇ ಯುವತಿ ಸಾವು
Dowry
ಸುಷ್ಮಾ ಚಕ್ರೆ
|

Updated on: May 19, 2026 | 7:35 PM

Share

ಗ್ವಾಲಿಯರ್, ಮೇ 19: ಹೊಸದಾಗಿ ಮದುವೆಯಾಗಿದ್ದ ಯುವತಿಯೊಬ್ಬರು ತನ್ನನ್ನು ರಕ್ಷಿಸುವಂತೆ ತಂದೆಗೆ ಕರೆ ಮಾಡಿದ 20 ನಿಮಿಷಗಳಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಗ್ವಾಲಿಯರ್​ನಲ್ಲಿ ನಡೆದಿದೆ. ವರದಕ್ಷಿಣೆ (Dowry) ಕಿರುಕುಳದಿಂದಾಗಿ ಈ ಸಾವು ಸಂಭವಿಸಿದೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. 21 ವರ್ಷದ ಯುವತಿ ಮದುವೆಯಾದ ಕೇವಲ 1 ವರ್ಷದೊಳಗೆ ಗ್ವಾಲಿಯರ್‌ನಲ್ಲಿರುವ ತನ್ನ ಗಂಡನ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇತ್ತೀಚೆಗೆ ಹೆಚ್ಚುತ್ತಿರುವ ವರದಕ್ಷಿಣೆ ಕಿರುಕುಳ ಪ್ರಕರಣ ಆತಂಕ ಹೆಚ್ಚಿಸಿದೆ.

ಮೃತ ಯುವತಿಯನ್ನು ಪಾಲಕ್ ರಜಾಕ್ ಎಂದು ಗುರುತಿಸಲಾಗಿದ್ದು, ಆಕೆ ಸಾವನ್ನಪ್ಪುವ ಕೆಲವೇ ಕ್ಷಣಗಳ ಮುನ್ನ ತನ್ನ ತಂದೆಗೆ ಅತ್ಯಂತ ಹತಾಶೆಯಿಂದ ಕರೆ ಮಾಡಿ, ತನ್ನನ್ನು ಗಂಡನ ಮನೆಯಿಂದ ಕರೆದುಕೊಂಡು ಹೋಗುವಂತೆ ಬೇಡಿಕೊಂಡಿದ್ದರು ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಮೇ 12ರ ಸಂಜೆ ಆಕೆ ಸಾವನ್ನಪ್ಪುವ ಕೇವಲ 20ರಿಂದ 30 ನಿಮಿಷಗಳ ಮೊದಲು ಪಾಲಕ್ ತನ್ನ ತಂದೆಗೆ ಕರೆ ಮಾಡಿದ್ದರು. ಗಂಡನ ಮನೆಯವರು ಬಹಳ ಹಿಂಸೆ ನೀಡುತ್ತಿದ್ದಾರೆ, ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗಿ ಬದುಕಿಸಿ ಅಪ್ಪಾ ಎಂದು ಆಕೆ ಅಪ್ಪನ ಬಳಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಎಂಜಿನಿಯರ್ ದಾರುಣ ಅಂತ್ಯ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ?

“ಅಪ್ಪಾ, ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗಿ. ಅವರು ಪದೇ ಪದೇ ಕಾರು ಮತ್ತು ಚಿನ್ನದ ಸರಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಇವರು ನನ್ನನ್ನು ಕೊಂದುಬಿಡುತ್ತಾರೆ” ಎಂದು ಆಕೆ ಫೋನ್‌ನಲ್ಲಿ ಅಳುತ್ತಾ ತನ್ನ ತಂದೆಗೆ ಹೇಳಿದ್ದರು ಎನ್ನಲಾಗಿದೆ.

ಆಕೆಯ ಮಾತು ಕೇಳಿ ಹೆದರಿದ್ದ ಪೋಷಕರು ಪಾಲಕ್ ಅವರನ್ನು ಮರಳಿ ಮನೆಗೆ ಕರೆತರಲು ತಮ್ಮ ಮನೆಯಿಂದ ಹೊರಟಿದ್ದರು. ಆದರೆ ಅವರು ಅಲ್ಲಿಗೆ ತಲುಪುವ ಮೊದಲೇ ಪಾಲಕ್ ಪತಿ ಅಮಿತ್ ಅವರಿಂದ ಕರೆ ಬಂದಿದ್ದು, ಪಾಲಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದರು. ದುರದೃಷ್ಟವಶಾತ್, ಆಕೆಯ ಕುಟುಂಬದವರು ಆಸ್ಪತ್ರೆ ತಲುಪುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದರು.

ಇದನ್ನೂ ಓದಿ: ವರದಕ್ಷಿಣೆ ಪಡೆದರೂ ತೀರದ ಧನ ದಾಹ, ಸಾಲದಕ್ಕೆ ಅನುಮಾನ: ಪತಿ ಟಾರ್ಚರ್​​ಗೆ ಪತ್ನಿ ಆತ್ಮಹತ್ಯೆ

ಪಾಲಕ್ ಅವರ ಕುತ್ತಿಗೆ, ಕಾಲುಗಳು ಮತ್ತು ದೇಹದ ಇತರ ಭಾಗಗಳಲ್ಲಿ ಗಾಯದ ಗುರುತುಗಳಿದ್ದು, ಇದು ಕೊಲೆಯ ಶಂಕೆಯನ್ನು ಹುಟ್ಟುಹಾಕಿದೆ ಎಂದು ತವರು ಮನೆಯವರು ಆರೋಪಿಸಿದ್ದಾರೆ. ಆಕೆಯ ಪತಿ, ಅತ್ತೆ ಮತ್ತು ಮೈದುನ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಪಾಲಕ್ ಕುಟುಂಬದವರು ಆರೋಪಿಸಿದ್ದಾರೆ. ಮದುವೆಯಾದಾಗಿನಿಂದಲೂ ಆಕೆಗೆ ಸತತವಾಗಿ ಹಿಂಸೆ ನೀಡಲಾಗುತ್ತಿತ್ತು. ಮನೆಯೊಳಗೆ ಯಾರೊಂದಿಗೂ ಮಾತನಾಡದಂತೆ ಕೂಡಿಹಾಕಲಾಗಿತ್ತು, ಆಹಾರವನ್ನೂ ನೀಡುತ್ತಿರಲಿಲ್ಲ ಎಂದು ಆಕೆಯ ಸಂಬಂಧಿಕರು ದೂರಿದ್ದಾರೆ.

ಆಕೆಯ ಸಾವಿನ ನಂತರ, ಆಕ್ರೋಶಗೊಂಡ ಪಾಲಕ್ ಸಂಬಂಧಿಕರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬಹಳ ಹೊತ್ತಾದರೂ ಪಾಲಕ್ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ ಆಕೆಯ ಕೋಣೆಯ ಬಾಗಿಲನ್ನು ಒಡೆದು ಒಳಗೆ ಹೋಗಿ ನೋಡಿದಾಗ ಆಕೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದಳು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಕೆ ಬದುಕಲಿಲ್ಲ ಎಂದು ಪಾಲಕ್ ಅವರ ಮಾವ (ಪತಿಯ ತಂದೆ) ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ