Gyanvapi Hearing: ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಗೆ ಅವಕಾಶ ಕೋರಿದ್ದ ಹಿಂದೂ ಮಹಿಳೆಯರ ಅರ್ಜಿಗೆ ಮನ್ನಣೆ; ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ

ಮಸೀದಿಯ ಗೋಡೆಯ ಮೇಲೆ ‘ಶೃಂಗಾರ ಗೌರಿ’ ಮತ್ತು ಇತರ ಹಿಂದೂ ದೇವತೆಗಳ ಶಿಲ್ಪವಿದೆ. ಅವುಗಳ ಆರಾಧನೆಗೆ ಅವಕಾಶ ನೀಡಬೇಕು ಎಂದು ಹಿಂದೂ ಮಹಿಳೆಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

Gyanvapi Hearing: ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಗೆ ಅವಕಾಶ ಕೋರಿದ್ದ ಹಿಂದೂ ಮಹಿಳೆಯರ ಅರ್ಜಿಗೆ ಮನ್ನಣೆ; ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ
ಕಾಶಿಯ ಜ್ಞಾನವಾಪಿ ಮಸೀದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 22, 2022 | 10:50 AM

ಲಖನೌ: ವಾರಣಾಸಿ ನ್ಯಾಯಾಲಯದ ಅತ್ಯಂತ ಹಿರಿಯ ನ್ಯಾಯಾಧೀಶರು ಇಂದಿನಿಂದ (ಸೆ 22) ಜ್ಫಾನವಾಪಿ ಮಸೀದಿ (Gyanvapi Mosque Case) ಪ್ರಕರಣದ ವಿಚಾರಣೆ ಆರಂಭಿಸಲಿದ್ದಾರೆ. ಮಸೀದಿಯ ಗೋಡೆಯ ಮೇಲೆ ‘ಶೃಂಗಾರ ಗೌರಿ’ ಮತ್ತು ಇತರ ಹಿಂದೂ ದೇವತೆಗಳ ಶಿಲ್ಪವಿದೆ. ಅವುಗಳ ಆರಾಧನೆಗೆ ಅವಕಾಶ ನೀಡಬೇಕು ಎಂದು ಹಿಂದೂ ಮಹಿಳೆಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬಾರದು ಎಂದು ಕೋರಿ ಮಸೀದಿ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಸೆ 19ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿ, ವಿಚಾರನೆಯನ್ನು ಸೆ.22ಕ್ಕೆ ಮುಂದೂಡಿತ್ತು. ಮಸೀದಿಯಲ್ಲಿರುವ ಶಿಲ್ಪಗಳನ್ನು ಪೂಜಿಸಲು ಅವಕಾಶ ನೀಡಬೇಕು ಎಂದು ಕೋರಿರುವ ಹಿಂದೂ ಮಹಿಳೆಯರ ಪರ ವಕೀಲ ವಿಷ್ಣು ಶಂಕರ್ ಜೈನ್ ವಾದಿಸುತ್ತಿದ್ದಾರೆ.

‘ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯ’ ಎಂದು ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಅಭಿಪ್ರಾಯಪಟ್ಟಿದ್ದರು. ಈ ತೀರ್ಪನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸುವುದಾಗಿ ಮುಸ್ಲಿಮರನ್ನು ಜಿಲ್ಲಾ ನ್ಯಾಯಾಲಯದಲ್ಲಿ ಪ್ರತಿನಿಧಿಸಿದ್ದ ಅಂಜುಮನ್ ಇಂತೆಜಾಮಿಯಾ ಸಮಿತಿ ಹೇಳಿತ್ತು. ಆದರೆ ಈವರೆಗೆ ಸಂಘಟನೆಯು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಹಿಂದೂಗಳು ಸಲ್ಲಿಸಿರುವ ಅರ್ಜಿಯ ಸಿಂಧುತ್ವದ ಬಗ್ಗೆ ನ್ಯಾಯಾಲಯವು ತೀರ್ಪು ನೀಡಿದ ನಂತರ ಗಲಭೆ ಉಂಟಾಗಬಹುದು ಎಂದು ಶಂಕಿಸಿದ್ದ ಪೊಲೀಸರು ಕಳೆದ ಸೆ 18-19ರಂದು ವಾರಣಾಸಿಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರು. ಎರಡೂ ಸಮುದಾಯಗಳ ಜನರು ವಾಸಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು.

‘ಜ್ಞಾನವಾಪಿ ಮಸೀದಿಯು ವಕ್ಫ್​ ಸುಪರ್ದಿಯಲ್ಲಿರುವ ಆಸ್ತಿಯಾಗಿದೆ. ಪೂಜಾಸ್ಥಳಗಳ ಕಾಯ್ದೆ 1991ರ ಪ್ರಕಾರ ಯಥಾಸ್ಥಿತಿ ಕಾಯ್ದುಕೊಳ್ಳಬೇಕಿದೆ’ ಎಂದು ಮುಸ್ಲಿಮರ ಪರ ವಕೀಲರು ವಾದಿಸಿದ್ದರು. ಇದನ್ನು ಆಕ್ಷೇಪಿಸಿದ್ದ ಹಿಂದೂಗಳ ಪರ ವಕೀಲ ಮದನ್ ಮೋಹನ್ ಯಾದವ್, ‘ದೇಗುಲವನ್ನು ಕೆಡವಿ, ಅದೇ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ’ ಎಂದು ವಾದಿಸಿದ್ದರು.

ಸುಪ್ರೀಂಕೋರ್ಟ್ ಸೂಚನೆಯ ನಂತರ ಜಿಲ್ಲಾ ನ್ಯಾಯಾಲಯವು ಪ್ರಕರಣದ ಮರುವಿಚಾರಣೆ ಆರಂಭಿಸಿತ್ತು. ಇದಕ್ಕೂ ಮೊದಲು ಸಿವಿಲ್ ನ್ಯಾಯಾಲಯವು ಮಸೀದಿ ಸಮುಚ್ಚಯದ ವಿಡಿಯೊ ಸಮೀಕ್ಷೆಗೆ ಸೂಚನೆ ನೀಡಿತ್ತು. ಮೇ 16ರಂದು ಸಮೀಕ್ಷೆ ಮುಕ್ತಾಯವಾಗಿತ್ತು. ಮೇ 19ರಂದು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಯಿತು. ವಿಡಿಯೊ ಸಮೀಕ್ಷೆ ವೇಳೆ ಮಸೀದಿ ಸಮುಚ್ಚಯದ ಒಳಗೆ ಶಿವಲಿಂಗದ ಆಕೃತಿ ಕಂಡು ಬಂದಿತ್ತು ಎಂದು ಹಿಂದೂ ಪರ ವಕೀಲರು ಹೇಳಿದ್ದು. ಅದು ಶಿವಲಿಂಗ ಅಲ್ಲ, ಕಾರಂಜಿ ವ್ಯವಸ್ಥೆ ಎಂದು ಮಸೀದಿ ಪರ ವಕೀಲರು ಆಕ್ಷೇಪಿಸಿದ್ದರು.

Published On - 10:50 am, Thu, 22 September 22

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ