Gyanvapi Mosque: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ

ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ ನೀಡಿದೆ.

Gyanvapi Mosque: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ
ಜ್ಞಾನವಾಪಿ ಮಸೀದಿImage Credit source: CNBCTV18.COM
Follow us
|

Updated on:Aug 04, 2023 | 7:57 AM

ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ ನೀಡಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್​ ಸಮ್ಮತಿ ನೀಡಿದೆ.

ಹೈಕೋರ್ಟ್​ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ, ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ ತೀರ್ಪು ನೀಡಿದೆ. ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿ ವಜಾಗೊಳಿಸಿದೆ. ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಲಾಗಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಯನ್ನು ಪ್ರಾರಂಭಿಸಲಾಗುವುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸರ್ವೆ ಪ್ರಕರಣದಲ್ಲಿ ಹಿಂದೂ ಪರವಾಗಿ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದರು.

ಮತ್ತಷ್ಟು ಓದಿ: Gyanvapi Mosque: ಜ್ಞಾನವಾಪಿ ಮಸೀದಿ ಎಎಸ್​ಐ ಸಮೀಕ್ಷೆ ಕುರಿತು ಇಂದು ಅಲಹಾಬಾದ್​ ಕೋರ್ಟ್​ನಿಂದ ಮಹತ್ವದ ತೀರ್ಪು

ಜುಲೈ 21 ರಂದು ವಾರಾಣಸಿಯ ನ್ಯಾಯಾಲಯವು ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಬಳಿಕ ಹೆಗ್ಗುರುತಾಗಿರುವ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವ ಏಕೈಕ ಮಾರ್ಗ ಸಮೀಕ್ಷೆ ಎಂದು ನಾಲ್ವರು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಆದೇಶ ನೀಡಿತ್ತು. ಈ ಮಸೀದಿಯು ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿಯೇ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:26 am, Thu, 3 August 23