AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿ ಸಮೀಕ್ಷೆ ಆರಂಭ, ಸುಪ್ರಿಂಕೋರ್ಟ್​ ಮೆಟ್ಟಿಲೇರಿದ ಮಸೀದಿ ಆಡಳಿತ ಮಂಡಳಿ

ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯನ್ನು ಹಿಂದೂ ದೇವಾಲಯವ ಕೆಡವಿ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಮೀಕ್ಷೆಯನ್ನು ಪುನರಾರಂಭಿಸಿದೆ. ಈ ಸಮೀಕ್ಷೆಯನ್ನು ಮಸೀದಿ ಸಮಿತಿ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದೆ.

ಜ್ಞಾನವಾಪಿ ಮಸೀದಿ ಸಮೀಕ್ಷೆ ಆರಂಭ, ಸುಪ್ರಿಂಕೋರ್ಟ್​ ಮೆಟ್ಟಿಲೇರಿದ ಮಸೀದಿ ಆಡಳಿತ ಮಂಡಳಿ
ಮಸೀದಿImage Credit source: Mint
ನಯನಾ ರಾಜೀವ್
|

Updated on: Aug 04, 2023 | 8:02 AM

Share

ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯನ್ನು ಹಿಂದೂ ದೇವಾಲಯವ ಕೆಡವಿ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಮೀಕ್ಷೆಯನ್ನು ಪುನರಾರಂಭಿಸಿದೆ. ಈ ಸಮೀಕ್ಷೆಯನ್ನು ಮಸೀದಿ ಸಮಿತಿ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದೆ. ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಒಪ್ಪಿಗೆ ನೀಡಿದೆ.

ಹಲವು ಬಿಜೆಪಿ ನಾಯಕರು ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಈ ಸ್ಥಳದಲ್ಲಿ ದೇವಾಲಯದ ಬಗ್ಗೆ ಸತ್ಯ ಈಗ ಹೊರಬರಲಿದೆ ಎಂದು ಹೇಳಿದ್ದಾರೆ. ಈ ತೀರ್ಪನ್ನು ಮಸೀದಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಈ ವಿಚಾರದಲ್ಲಿ ತಮ್ಮ ವಿಚಾರಣೆ ನಡೆಸದೆ ಯಾವುದೇ ಆದೇಶ ಹೊರಡಿಸಬಾರದು ಎಂದು ಹಿಂದೂ ಪರ ಪಕ್ಷವೊಂದು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದೆ.

ಮತ್ತಷ್ಟು ಓದಿ: Gyanvapi Mosque: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ

ಹಿಂದೂ ಅರ್ಜಿದಾರರು ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಮತ್ತು 17 ನೇ ಶತಮಾನದಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಅದನ್ನು ಕೆಡವಲಾಯಿತು ಎಂದು ವಾದಿಸಿದ್ದಾರೆ.

ಈ ಹಿಂದೆ ಸುಪ್ರೀಂ ಕೋರ್ಟ್ ಮಸೀದಿ ಸಂಕೀರ್ಣದೊಳಗೆ ಯಾವುದೇ ಸಮೀಕ್ಷೆಯನ್ನು ನಿರ್ಬಂಧಿಸಿತ್ತು. ಜುಲೈ 24 ರಂದು ಸಮೀಕ್ಷೆ ಪ್ರಾರಂಭವಾಯಿತು, ಆದರೆ ಮಸೀದಿ ಸಮಿತಿಯು ಸುಪ್ರೀಂಕೋರ್ಟ್​ಗೆ ಮನವಿ ಮಾಡಿದ್ದರಿಂದ ಕೆಲವೇ ಗಂಟೆಗಳಲ್ಲಿ ತಡೆ ಬಿದ್ದಿತ್ತು.

ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಕುರಿತು ಮಾತನಾಡಿ, ಒಂದೊಮ್ಮೆ ಇದು ಮಸೀದಿಯಾಗಿದ್ದರೆ ಅಲ್ಲಿ ತ್ರಿಶೂಲ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ