ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯನ್ನು ಹಿಂದೂ ದೇವಾಲಯವ ಕೆಡವಿ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಮೀಕ್ಷೆಯನ್ನು ಪುನರಾರಂಭಿಸಿದೆ. ಈ ಸಮೀಕ್ಷೆಯನ್ನು ಮಸೀದಿ ಸಮಿತಿ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದೆ. ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಒಪ್ಪಿಗೆ ನೀಡಿದೆ.
ಹಲವು ಬಿಜೆಪಿ ನಾಯಕರು ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಈ ಸ್ಥಳದಲ್ಲಿ ದೇವಾಲಯದ ಬಗ್ಗೆ ಸತ್ಯ ಈಗ ಹೊರಬರಲಿದೆ ಎಂದು ಹೇಳಿದ್ದಾರೆ.
ಈ ತೀರ್ಪನ್ನು ಮಸೀದಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
ಈ ವಿಚಾರದಲ್ಲಿ ತಮ್ಮ ವಿಚಾರಣೆ ನಡೆಸದೆ ಯಾವುದೇ ಆದೇಶ ಹೊರಡಿಸಬಾರದು ಎಂದು ಹಿಂದೂ ಪರ ಪಕ್ಷವೊಂದು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದೆ.
ಮತ್ತಷ್ಟು ಓದಿ: Gyanvapi Mosque: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ
ಹಿಂದೂ ಅರ್ಜಿದಾರರು ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಮತ್ತು 17 ನೇ ಶತಮಾನದಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಅದನ್ನು ಕೆಡವಲಾಯಿತು ಎಂದು ವಾದಿಸಿದ್ದಾರೆ.
ಈ ಹಿಂದೆ ಸುಪ್ರೀಂ ಕೋರ್ಟ್ ಮಸೀದಿ ಸಂಕೀರ್ಣದೊಳಗೆ ಯಾವುದೇ ಸಮೀಕ್ಷೆಯನ್ನು ನಿರ್ಬಂಧಿಸಿತ್ತು. ಜುಲೈ 24 ರಂದು ಸಮೀಕ್ಷೆ ಪ್ರಾರಂಭವಾಯಿತು, ಆದರೆ ಮಸೀದಿ ಸಮಿತಿಯು ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದರಿಂದ ಕೆಲವೇ ಗಂಟೆಗಳಲ್ಲಿ ತಡೆ ಬಿದ್ದಿತ್ತು.
ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಕುರಿತು ಮಾತನಾಡಿ, ಒಂದೊಮ್ಮೆ ಇದು ಮಸೀದಿಯಾಗಿದ್ದರೆ ಅಲ್ಲಿ ತ್ರಿಶೂಲ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ