Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಂ ಕಡೆಯ 5 ಅರ್ಜಿಗಳನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

Gyanvapi Mosque case: ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸುವ ಬಗ್ಗೆ ಹಿಂದೂ ಸಮುದಾಯ ಸಲ್ಲಿಸಿದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಮತ್ತು ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಸಲ್ಲಿಸಿದ 5 ಅರ್ಜಿಗಳನ್ನು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಂ ಕಡೆಯ 5 ಅರ್ಜಿಗಳನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್
Follow us
ಅಕ್ಷಯ್​ ಪಲ್ಲಮಜಲು​​
| Updated By: Digi Tech Desk

Updated on:Feb 02, 2024 | 12:04 PM

ಉತ್ತರಪ್ರದೇಶ, ಡಿ.19: ಜ್ಞಾನವಾಪಿ ಮಸೀದಿ (Gyanvapi Mosque) ಭೂ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಹಿಂದೂ ಸಮುದಾಯಕ್ಕೆ ಜಯವಾಗಿದೆ. ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸುವ ಬಗ್ಗೆ ಹಿಂದೂ ಸಮುದಾಯ ಸಲ್ಲಿಸಿದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಮತ್ತು ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಸಲ್ಲಿಸಿದ 5 ಅರ್ಜಿಗಳನ್ನು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ರಾಷ್ಟ್ರೀಯ ಪ್ರಾಮುಖ್ಯತೆ ಹಾಗೂ 1991 ಕಾಯಿದೆ ಅನುಸಾರವಾಗಿ ಧಾರ್ಮಿಕ ಆರಾಧನೆಗಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈಗಾಗಲೇ ಈ ಬಗ್ಗೆ ಕಾನೂನತ್ಮಕವಾಗಿ ತನಿಖೆ ಹಾಗೂ ವಿಚಾರಣೆಗಳು ನಡೆಯುತ್ತಿದೆ. ಜ್ಞಾನವಾಪಿ ಮಸೀದಿಯ ಸಮಗ್ರ ಸಮೀಕ್ಷೆಯನ್ನು ನಡೆಸಲು ಏಪ್ರಿಲ್ 8, 2021 ರ ವಾರಣಾಸಿ ನ್ಯಾಯಾಲಯದ ಆದೇಶ ನೀಡಿತ್ತು. ಇದನ್ನು ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ (ಎಐಎಂಸಿ) ಮತ್ತು ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಪ್ರಶ್ನಿಸಿತ್ತು.

ಇದನ್ನೂ ಓದಿ: Gyanvapi Mosque Survey: ವಾರಾಣಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ಆರಂಭ

ಡಿಸೆಂಬರ್ 8 ರಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರು ಎರಡು ಕಡೆಯ ವಾದವನ್ನು ಆಲಿಸಿದ ನಂತರ ಈ ತೀರ್ಪು ನೀಡಿದ್ದಾರೆ. ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ನಿರ್ವಹಣೆಯನ್ನು ನೋಡಿಕೊಳ್ಳುವ ಎಐಎಂಸಿ, ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾದ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿದೆ, ಇದರಲ್ಲಿ ಹಿಂದೂ ಅರ್ಜಿದಾರರು ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸಲು ಕೋರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:05 am, Tue, 19 December 23

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!