ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ (Gyanvapi Mosque) ಸಂಕೀರ್ಣಕ್ಕೆ ಸಂಬಂಧಿಸಿದ ವಿವಾದದ ಕುರಿತು ಭಾರತದ ಸುಪ್ರೀಂ ಕೋರ್ಟ್ (Supreme Court) ನಾಳೆ (ನವೆಂಬರ್ 10) ಅರ್ಜಿ ವಿಚಾರಣೆ ನಡೆಸಲಿದೆ. ಜ್ಞಾನವಾಪಿ ಮಸೀದಿಯೊಳಗೆ ಸರ್ವೆ ಮಾಡುವ ಸಮಯದಲ್ಲಿ ‘ಶಿವಲಿಂಗ’ ಪತ್ತೆಯಾಗಿತ್ತು ಎನ್ನಲಾಗಿತ್ತು. ಶುಕ್ರವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠ ವಿಚಾರಣೆ ನಡೆಸಲಿದೆ.
ಮೇ 20ರಂದು ಸುಪ್ರೀಂ ಕೋರ್ಟ್ ಜ್ಞಾನವಾಪಿ ಮಸೀದಿಯ ಮೇಲೆ ಹಿಂದೂ ಭಕ್ತರು ಸಲ್ಲಿಸಿದ ಸಿವಿಲ್ ಮೊಕದ್ದಮೆಯನ್ನು ಸಿವಿಲ್ ನ್ಯಾಯಾಧೀಶರಿಂದ (ಹಿರಿಯ ವಿಭಾಗ) ವಾರಾಣಸಿಯ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿತ್ತು. ಈ ಸಮಸ್ಯೆಯ ಸಂಕೀರ್ಣತೆ ಮತ್ತು ಸೂಕ್ಷ್ಮತೆಯನ್ನು ನೋಡಿದೆ. 25ರಿಂದ 30 ವರ್ಷಕ್ಕಿಂತ ಹೆಚ್ಚು ಅನುಭವವಿರುವ ಹಿರಿಯ ನ್ಯಾಯಾಂಗ ಅಧಿಕಾರಿ ಪ್ರಕರಣವನ್ನು ನಿಭಾಯಿಸಿದರೆ ಉತ್ತಮ ಎಂದು ಕೋರ್ಟ್ ಹೇಳಿತ್ತು.
1991ರ ಕಾನೂನಿನಿಂದ ಸಿವಿಲ್ ಮೊಕದ್ದಮೆಯನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ ಮಸೀದಿ ಸಮಿತಿಯು ಸಲ್ಲಿಸಿದ ಸಿವಿಲ್ ಪ್ರೊಸೀಜರ್ ಕೋಡ್ ಆದೇಶ 7 ನಿಯಮ 11ರ ಅಡಿಯಲ್ಲಿ ಅರ್ಜಿಯ ಆದ್ಯತೆಯನ್ನು ನಿರ್ಧರಿಸಲು ಜಿಲ್ಲಾ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಸಂಸತ್ತಿನ ಸಿವಿಲ್ ನ್ಯಾಯಾಧೀಶರಿಂದ ಮೊಕದ್ದಮೆಯ ಪೇಪರ್‌ಗಳನ್ನು ವರ್ಗಾಯಿಸಿದ ನಂತರ, ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ವೈಜ್ಞಾನಿಕ ತನಿಖೆಗೆ ಮನವಿ; ವಿಚಾರಣೆ ಅಕ್ಟೋಬರ್ 11ಕ್ಕೆ ಮುಂದೂಡಿಕೆ
ಮೇ 17ರಂದು ಸುಪ್ರೀಂ ಕೋರ್ಟ್ ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶನ ನೀಡಿದ್ದು, ಜ್ಞಾನವಾಪಿ-ಶೃಂಗಾರ್ ಗೌರಿ ಸಂಕೀರ್ಣದ ಒಳಗೆ ಶಿವಲಿಂಗ ಕಂಡುಬಂದಿದೆ ಎಂದು ಹೇಳಲಾಗಿತ್ತು. ಆದರೂ ಅಲ್ಲಿ ಮುಸ್ಲಿಮರಿಗೆ ನಮಾಜ್ ಮಾಡಲು ಅವಕಾಶ ನೀಡಿತ್ತು.
ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂಟೆಝಾಮಿಯಾ ಮಸೀದಿಯ ಆಡಳಿತ ಸಮಿತಿಯು ಸಲ್ಲಿಸಿದ ಮನವಿಯನ್ನು ಆಲಿಸಿದ ಉನ್ನತ ನ್ಯಾಯಾಲಯವು ಆದೇಶವನ್ನು ಅಂಗೀಕರಿಸಿತ್ತು. ಅಕ್ಟೋಬರ್‌ನಲ್ಲಿ ನಡೆದ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ವಾರಾಣಸಿ ನ್ಯಾಯಾಲಯವು ‘ಶಿವಲಿಂಗ’ದ ವೈಜ್ಞಾನಿಕ ತನಿಖೆಗೆ ಅನುಮತಿ ನೀಡಲು ನಿರಾಕರಿಸಿತ್ತು. ಹಿಂದೂ ಕಡೆಯವರು ಜ್ಞಾನವಾಪಿ ಮಸೀದಿಯ ವಝುಖಾನಾದಲ್ಲಿ ಕಂಡುಬಂದಿರುವ ಶಿವಲಿಂಗ ಎಂದು ಹೇಳಿಕೊಳ್ಳುವ ರಚನೆಯ ಕಾರ್ಬನ್ ಡೇಟಿಂಗ್ಗೆ ಒತ್ತಾಯಿಸಿದ್ದರು.
ಆದರೆ, ಅಲ್ಲಿ ಸಿಕ್ಕಿರುವ ರಚನೆಯು ಶಿವಲಿಂಗವಲ್ಲ, ಅದೊಂದು ‘ಕಾರಂಜಿ’ ಎಂದು ಮುಸ್ಲಿಂ ಸಮುದಾಯದವರು ಹೇಳಿದ್ದರು. ನಂತರ ಹಿಂದೂ ಕಡೆಯವರು ವಾರಾಣಸಿ ಜಿಲ್ಲಾ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 22ರಂದು ಅರ್ಜಿಯನ್ನು ಸಲ್ಲಿಸಿದ್ದು, ಅವರು ‘ಶಿವಲಿಂಗ’ ಎಂದು ಹೇಳಿಕೊಳ್ಳುವ ವಸ್ತುವಿನ ಕಾರ್ಬನ್ ಡೇಟಿಂಗ್ ಅನ್ನು ಕೋರಿದ್ದರು.
ಇದನ್ನೂ ಓದಿ: Gyanvapi Case: ಜ್ಞಾನವಾಪಿ ಪ್ರಕರಣ; ಶಿವಲಿಂಗದ ಪೂಜೆ ಕುರಿತು ಇಂದು ವಾರಾಣಸಿ ಕೋರ್ಟ್ನಿಂದ ಮಹತ್ವದ ತೀರ್ಪು
ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದ ಶಿವಲಿಂಗದ ವೈಜ್ಞಾನಿಕ ತನಿಖೆಗೆ ಅನುಮತಿ ನಿರಾಕರಿಸಿದ ವಾರಾಣಸಿ ನ್ಯಾಯಾಲಯದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನ ಮೊರೆ ಹೋಗುವುದಾಗಿ ಹಿಂದೂ ಸಮುದಾಯ ಹೇಳಿತ್ತು. ಕಾರ್ಬನ್ ಡೇಟಿಂಗ್ ಎನ್ನುವುದು ಪುರಾತತ್ತ್ವ ಶಾಸ್ತ್ರದ ವಸ್ತು ಅಥವಾ ಪುರಾತತ್ತ್ವ ಶಾಸ್ತ್ರದ ಸಂಶೋಧನೆಗಳ ವಯಸ್ಸನ್ನು ಕಂಡುಹಿಡಿಯುವ ವೈಜ್ಞಾನಿಕ ಪ್ರಕ್ರಿಯೆಯಾಗಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ ಜ್ಞಾನವಾಪಿ ಮಸೀದಿ-ಶೃಂಗಾರ್ ಗೌರಿ ಪ್ರಕರಣದ ಆದೇಶವನ್ನು ಕಾಯ್ದಿರಿಸಿತ್ತು. ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಸಂಬಂಧಿಸಿದ ಪ್ರಕರಣವನ್ನು ಸಿವಿಲ್ ನ್ಯಾಯಾಧೀಶರಿಂದ ವಾರಾಣಸಿಯ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿ ಮೇ 20ರಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.
ಮೇ 16ರಂದು ಜ್ಞಾನವಾಪಿ ಮಸೀದಿಯ ಆವರಣದಲ್ಲಿ ವಿಡಿಯೋ ಸಮೀಕ್ಷೆ ನಡೆಸಲಾಗಿತ್ತು. ಮುಸ್ಲಿಮರು ನಮಾಜ್ಗೂ ಮೊದಲು ಬಳಸುತ್ತಿದ್ದ ಕೊಳದ ಬಳಿ ಶಿವಲಿಂಗದ ಆಕೃತಿ ಪತ್ತೆಯಾಗಿದೆ ಎಂದು ಹೇಳಲಾಗಿತ್ತು. ಆ ಆಕೃತಿಯನ್ನು ಕಾರ್ಬನ್ ಡೇಟಿಂಗ್ಗೆ ಒಳಪಡಿಸಬೇಕೆಂದು ಹಿಂದೂ ಪರ ಅರ್ಜಿದಾರರು ಮನವಿ ಮಾಡಿದ್ದರು.
Published On - 10:54 am, Thu, 10 November 22