AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಜ್ಞಾನವಾಪಿ ಮಸೀದಿ ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾದ ಸ್ಥಳ ನಿರ್ಬಂಧಿಸಲು ವಾರಣಾಸಿ ನ್ಯಾಯಾಲಯ ಆದೇಶ

Gyanvapi Mosque Case ಇಂದು ಬೆಳಿಗ್ಗೆ ಕೊಳದಿಂದ ನೀರನ್ನು ಬತ್ತಿಸಿದಾಗ  "ಶಿವಲಿಂಗ" ಕಂಡುಬಂದಿದೆ ಎಂದು ಮಸೀದಿಯ ಹಿಂಭಾಗದಲ್ಲಿರುವ ದೇಗುಲದಲ್ಲಿ ಪ್ರಾರ್ಥನೆ ಮಾಡಲು ವರ್ಷಪೂರ್ತಿ ಪ್ರವೇಶವನ್ನು ಕೋರಿದ ಹಿಂದೂ ಮಹಿಳೆಯರ ಗುಂಪನ್ನು ಪ್ರತಿನಿಧಿಸುವ ವಕೀಲರು ಹೇಳಿದ್ದಾರೆ

Breaking ಜ್ಞಾನವಾಪಿ ಮಸೀದಿ ಸಮೀಕ್ಷೆ ವೇಳೆ ಶಿವಲಿಂಗ ಪತ್ತೆಯಾದ ಸ್ಥಳ ನಿರ್ಬಂಧಿಸಲು ವಾರಣಾಸಿ ನ್ಯಾಯಾಲಯ ಆದೇಶ
ಜ್ಞಾನವಾಪಿ ಮಸೀದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:May 16, 2022 | 2:39 PM

Share

ನ್ಯಾಯಾಲಯದ ಸೂಚನೆಯಂತೆ ಕಾಶಿಯ ಜ್ಞಾನವಾಪಿ ಮಸೀದಿಯ (Gyanvapi Mosque) ವಿಡಿಯೊ ಸಮೀಕ್ಷೆ ಸೋಮವಾರ ಮುಕ್ತಾಯವಾಗಿದೆ. ವಿಡಿಯೊ ಚಿತ್ರೀಕರಣ ವೇಳೆ ಶಿವಲಿಂಗ ಪತ್ತೆಯಾದ ಸ್ಥಳವನ್ನು ನಿರ್ಬಂಧಿಸಲು ಜಿಲ್ಲೆಯ ಅಧಿಕಾರಿಗಳಿಗೆ ವಾರಾಣಾಸಿ ನ್ಯಾಯಾಲಯ ಆದೇಶಿಸಿದೆ. ಉತ್ತರ ಪ್ರದೇಶದ (Uttar Pradesh)ವಾರಣಾಸಿಯಲ್ಲಿರುವ (Varanasi) ಜ್ಞಾನವಾಪಿ ಮಸೀದಿ ಸಂಕೀರ್ಣದ ಮೂರು ದಿನಗಳ ವಿಡಿಯೊ ಸಮೀಕ್ಷೆ ನ್ಯಾಯಾಲಯದ ಆದೇಶದ ಇಂದು (ಸೋಮವಾರ)ಕೊನೆಗೊಂಡಿದೆ. ಸಂಕೀರ್ಣದ ಬಳಿ ಬಿಗಿ ಭದ್ರತೆ ಮತ್ತು ನಿರ್ಬಂಧಗಳ ನಡುವೆ ಇಂದು ಬೆಳಿಗ್ಗೆ ಕೊನೆಯ ದಿನದ ಚಿತ್ರೀಕರಣ ಪ್ರಾರಂಭವಾಯಿತು. ಇಂದು ಬೆಳಿಗ್ಗೆ ಕೊಳದಿಂದ ನೀರನ್ನು ಬತ್ತಿಸಿದಾಗ  “ಶಿವಲಿಂಗ” ಕಂಡುಬಂದಿದೆ ಎಂದು ಮಸೀದಿಯ ಹಿಂಭಾಗದಲ್ಲಿರುವ ದೇಗುಲದಲ್ಲಿ ಪ್ರಾರ್ಥನೆ ಮಾಡಲು ವರ್ಷಪೂರ್ತಿ ಪ್ರವೇಶವನ್ನು ಕೋರಿದ ಹಿಂದೂ ಮಹಿಳೆಯರ ಗುಂಪನ್ನು ಪ್ರತಿನಿಧಿಸುವ ವಕೀಲರು ಹೇಳಿದ್ದಾರೆ. ಈ ಕೊಳದ ನೀರನ್ನು  ಪ್ರಾರ್ಥನೆಗೆ ಮುನ್ನ ಶುದ್ಧೀಕರಣಕ್ಕೆ (ವುಜು) ಬಳಸಲಾಗುತ್ತಿತ್ತು ಎಂದು ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದರು. ಇಸ್ಲಾಮಿಕ್ ವುಜು ಅಥವಾ ಶುದ್ಧೀಕರಣ ಆಚರಣೆಗಾಗಿ ಬಳಸಲಾಗುವ ಕೊಳವನ್ನು ಮುಚ್ಚಬೇಕು ಎಂದು ಅರ್ಜಿದಾರರು ಸ್ಥಳೀಯ ನ್ಯಾಯಾಲಯವನ್ನು ಕೇಳಿದರು. ನ್ಯಾಯಾಲಯವು ಮನವಿಯನ್ನು ಸ್ವೀಕರಿಸಿದೆ. ಅದೇ ವೇಳೆ  ಸದ್ಯಕ್ಕೆ ಕೊಳವನ್ನು ಬಳಸದಂತೆ ನೋಡಿಕೊಳ್ಳಲು ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶಿಸಿತು.

ಮಸೀದಿ ಸಂಕೀರ್ಣದಲ್ಲಿ “ಶಿವಲಿಂಗ” ಕಂಡುಬಂದ ಬಗ್ಗೆ ವರದಿಗಳನ್ನು ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ ಅವರು ಈ ಹಿಂದೆ ದೃಢಪಡಿಸಿರಲಿಲ್ಲ. “ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವಿವರಗಳನ್ನು ಆಯೋಗದ ಯಾವುದೇ ಸದಸ್ಯರು ಬಹಿರಂಗಪಡಿಸಿಲ್ಲ. ನ್ಯಾಯಾಲಯ ಸಮೀಕ್ಷೆಯ ಮಾಹಿತಿಯ ರಕ್ಷಕರಾಗಿದ್ದಾರೆ. ನಿನ್ನೆ ಒಬ್ಬ ಸದಸ್ಯರನ್ನು ಆಯೋಗದಿಂದ ಕೆಲವು ನಿಮಿಷಗಳ ಕಾಲ ಡಿಬಾರ್ ಮಾಡಲಾಗಿದೆ, ನಂತರ ಆಯೋಗಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.

ಸಮೀಕ್ಷಾ ತಂಡವು ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು, ಕೊಳವನ್ನು ಚಿತ್ರೀಕರಿಸಿದೆ. ನಾಳೆ ನ್ಯಾಯಾಲಯದೊಂದಿಗೆ ಈ ಸಮೀಕ್ಷೆ ಹಂಚಿಕೊಳ್ಳಲಿದೆ. ವರದಿಯನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸದಿದ್ದರೆ, ನಾವು ನ್ಯಾಯಾಲಯಕ್ಕೆ ಹೆಚ್ಚಿನ ಸಮಯ ಕೇಳುತ್ತೇವೆ ಎಂದು ಸರ್ಕಾರಿ ವಕೀಲ ಮಹೇಂದ್ರ ಪ್ರಸಾದ್ ಪಾಂಡೆ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ
Image
ಬಿಗಿಭದ್ರತೆಯ ನಡುವೆ ಜ್ಞಾನವಾಪಿ ಮಸೀದಿಯ 3ನೇ ದಿನದ ಸಮೀಕ್ಷೆ ಮುಕ್ತಾಯ
Image
Gyanvapi masjid controversy: ಕೋರ್ಟ್ ನೇಮಿಸಿದ ಕಮೀಷನರುಗಳಿಂದ ವಿಡಿಯೋ ಸರ್ವೇ ನಾಳೆ ಆರಂಭ, ಪ್ರಕ್ರಿಯೆ ಹೇಗೆ ನಡೆಯಲಿದೆ ಗೊತ್ತಾ?
Image
ವಾರಣಾಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ನಿಲ್ಲಿಸಲು ಸುಪ್ರೀಂಕೋರ್ಟ್ ನಕಾರ, ನಾಳೆಯಿಂದ ವಿಡಿಯೊ ಚಿತ್ರೀಕರಣ ಸರ್ವೆ

ಜ್ಞಾನವಾಪಿ ಮಸೀದಿಯು ಕಾಶಿ ವಿಶ್ವನಾಥ ದೇವಾಲಯದ ಸಮೀಪದಲ್ಲಿದೆ. ಜ್ಞಾನವಾಪಿ ಮಸೀದಿಯ ಹೊರಗೋಡೆಯಲ್ಲಿರುವ ಕೆಲ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಮಹಿಳೆಯರ ತಂಡವೊಂದು ಅನುಮತಿ ಕೋರಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:20 pm, Mon, 16 May 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!