ಭಾರತೀಯ ಪುರಾತತ್ವ ಇಲಾಖೆಯು ಕಾಶಿಯ ಜ್ಞಾನವಾಪಿ(Gyanvapi) ಮಸೀದಿಯ ಸಮೀಕ್ಷೆಯನ್ನು ಇಂದು(ಸೋಮವಾರ) ಆರಂಭಿಸಿದೆ. ಅಯೋಧ್ಯೆ(Ayodhya)ಯ ರಾಮಜನ್ಮ ಭೂಮಿಯ ವ್ಯಾಜ್ಯವನ್ನು ನ್ಯಾಯಾಲಯದಲ್ಲಿ ಪರಿಹರಿಸಲಾಗಿದ್ದು, ಪ್ರಕರಣ ಅಂತ್ಯಗೊಂಡು ಇದೀಗ ರಾಮಮಂದಿರದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈಗ ವಾರಾಣಸಿಯ ದೇವಸ್ಥಾನವನ್ನು ಕೆಡವಿ ನಿರ್ಮಿಸಲಾಗಿದೆ ಎನ್ನಲಾಗಿರುವ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಇಂದು ಆರಂಭಿಸಲಾಗಿದೆ. ಈ ಕುರಿತು ಭಾರತೀಯ ಪುರಾತತ್ವ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
2022 ರಲ್ಲಿ ಸಮೀಕ್ಷೆಯ ಸಮಯದಲ್ಲಿ ಹಿಂದೂ ಪರ ದಾವೆದಾರರು, ಹಿಂದಿನ ಶಿವ ದೇವಾಲಯದ ಅವಶೇಷ ಎಂದು ಹೇಳಲಾಗತ್ತಿರುವ ಶಿವಲಿಂಗ ರೀತಿಯ ರಚನೆ ವಝುಖಾನಾ ಹೊರತುಪಡಿಸಿ ಎಲ್ಲಾ ಪ್ರದೇಶಗಳಿಗೆ ಈ ಸಮೀಕ್ಷೆ ವಿಸ್ತರಿಸುತ್ತದೆ. ASI ಆಗಸ್ಟ್ 4ರೊಳಗೆ ಜಿಲ್ಲಾ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಬೇಕಿದೆ.
ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಹೇಳುವ ಮಹಿಳೆಯರ ಗುಂಪಿನ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯದ ಆದೇಶ ಬಂದಿದೆ. ಹಿಂದೂ ದೇವತೆಗಳ ಪುರಾತನ ವಿಗ್ರಹಗಳು ಮಸೀದಿಯೊಳಗೆ ನೆಲೆಗೊಂಡಿವೆ ಮತ್ತು ವೈಜ್ಞಾನಿಕ ಸಮೀಕ್ಷೆಯಿಂದ ಮಾತ್ರ ಸತ್ಯವನ್ನು ಬಹಿರಂಗಪಡಿಸಬಹುದು ಎಂದು ಮಹಿಳೆಯರು ಹೇಳಿದ್ದಾರೆ.
ಮತ್ತಷ್ಟು ಓದಿ: ಜ್ಞಾನವಾಪಿ ಪ್ರಕರಣ: ಮಸೀದಿ ಸಮಿತಿಯ ಮನವಿ ತಿರಸ್ಕರಿಸಿದ ವಾರಣಾಸಿ ನ್ಯಾಯಾಲಯ
ಒಂದು ವರ್ಷದ ಹಿಂದೆ ನಡೆದ ವೀಡಿಯೋಗ್ರಾಫಿಕ್ ಸಮೀಕ್ಷೆಯಲ್ಲಿ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿತ್ತು, ಹೀಗಾಗಿ ವೈಜ್ಞಾನಿಕ ಸಮೀಕ್ಷೆಯನ್ನು ಮುಂದೂಡಲಾಗಿತ್ತು, ವಝುಖಾನಾ ಪ್ರದೇಶವನ್ನು ಸೀಲ್ ಮಾಡುವಂತೆಯೂ ನ್ಯಾಯಾಲಯ ಸೂಚಿಸಿತ್ತು.
ಈ ಹಿಂದೆ, ಹಿಂದೂ ಅರ್ಜಿದಾರರು ಶಿವಲಿಂಗ ಎಂದು ಪ್ರತಿಪಾದಿಸಿದ ರಚನೆಯ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಎಎಸ್‌ಐಗೆ ನಿರ್ದೇಶನ ನೀಡಿತು. ಜ್ಞಾನವಾಪಿ ಮಸೀದಿಯ ಅಧಿಕಾರಿಗಳು ಈ ರಚನೆಯು ವಝುಖಾನಾ ದಲ್ಲಿ ಕಾರಂಜಿಯ ಒಂದು ಭಾಗವಾಗಿದೆ ಎಂದು ಹೇಳಲಾಗಿತ್ತು.
ಮಸೀದಿಯ ವಝುಖಾನಾದಲ್ಲಿ ಶಿವಲಿಂಗದಂಥ ರಚನೆ ಇದೆ ಎಂದು ಹೇಳಲಾಗಿರುವ ಕಾರಣ, ಆ ಸ್ಥಳದ ಸಂರಕ್ಷಣೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ ಹೀಗಾಗಿ ಆ ನಿರ್ದಿಷ್ಟ ಜಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ಸಮೀಕ್ಷೆ ನಡೆಯಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ