ಕೃಷಿ ಕಾಯ್ದೆಗೆ ಅವಕಾಶ ನೀಡುವ ಕುರಿತು ರೈತರು ಆಲೋಚಿಸಬೇಕು: ಎಚ್.ಡಿ.ಕುಮಾರಸ್ವಾಮಿ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 27, 2020 | 6:42 PM

ಪ್ರಯೋಗಕ್ಕೆ ಅವಕಾಶ ನೀಡದಿದ್ದರೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದಿರುವ ಎಚ್​.ಡಿ.ಕುಮಾರಸ್ವಾಮಿ, ರೈತರು ಕಾಯ್ದೆಗಳ ಅನುಷ್ಠಾನಕ್ಕೆ ಒಮ್ಮೆ ಅವಕಾಶ ನೀಡಬೇಕು. ಸರ್ಕಾರ ಮತ್ತು ಹೋರಾಟಗಾರರ ನಡುವೆ ಸಮನ್ವಯ ಸಾಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೃಷಿ ಕಾಯ್ದೆಗೆ ಅವಕಾಶ ನೀಡುವ ಕುರಿತು ರೈತರು ಆಲೋಚಿಸಬೇಕು: ಎಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
Follow us on

ಬೆಂಗಳೂರು: ‘ರೈತರು ಹೊಸ ಕೃಷಿ ಕಾಯ್ದೆಗಳನ್ನು ಪ್ರಯೋಗಾತ್ಮಕವಾಗಿ ಸ್ವೀಕರಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಕ್ಕೆ ದನಿಗೂಡಿಸಿದ್ದಾರೆ. ರೈತ ಸಮುದಾಯವು ಕಾಯ್ದೆಗಳ ಕುರಿತು ಮುಕ್ತ ಮನಸ್ಸಿನಿಂದ ಯೋಚಿಸಬೇಕು.ನೂತನ ಕೃಷಿ ಕಾಯ್ದೆಗಳಿಂದ ಪ್ರಯೋಜನವಾಗದಿದ್ದರೆ ಸರ್ಕಾರ ತಿದ್ದುಪಡಿ ಮಾಡುವ ಭರವಸೆ ನೀಡಿದೆ ಎಂದಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್​​ರನ್ನು ಟ್ಯಾಗ್ ಮಾಡಿರುವ ಅವರು ದೆಹಲಿ ಚಲೋ ಚಳವಳಿ ಇತರ ದೇಶಗಳಿಗೆ ಭಾರತದಲ್ಲಿ ಬೃಹತ್ ಸಮಸ್ಯೆ ಸೃಷ್ಟಿಯಾಗಿದೆ ಎಂಬ ಸಂದೇಶವನ್ನು ನೀಡುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಯೋಗಾತ್ಮಕವಾಗಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಅವಕಾಶ ನೀಡುವಂತೆ ಕೋರಿದ್ದಾರೆ. ಒಂದು ವೇಳೆ ಕಾಯ್ದೆಗಳಿಂದ ಕಿಂಚಿತ್ ಉಪಯೋಗವೂ ಆಗದಿದ್ದರೆ ರೈತರು ಸೂಚಿಸುವ ತಿದ್ದುಪಡಿ ತರುವುದಾಗಿ ಪ್ರಸ್ತಾವನೆ ಮುಂದಿಟ್ಟಿದ್ದಾರೆ. ರೈತರು ಈ ಪ್ರಸ್ತಾವನೆಯನ್ನು ಮುಕ್ತ ಮನಸ್ಸಿಂದ ಸ್ವೀಕರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪ್ರಯೋಗಕ್ಕೆ ಅವಕಾಶ ನೀಡದಿದ್ದರೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದಿರುವ ಅವರು, ರೈತರು ಕಾಯ್ದೆಗೆ ಒಮ್ಮೆ ಅವಕಾಶ ನೀಡಬೇಕು. ಸರ್ಕಾರ ಮತ್ತು ಹೋರಾಟಗಾರರ ನಡುವೆ ಸಮನ್ವಯ ಸಾಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚಿಗಷ್ಟೇ ಗೃಹ ಸಚಿವ ರಾಜನಾಥ್ ಸಿಂಗ್​, ಒಂದೆರಡು ವರ್ಷಗಳಿಗಾದರೂ ನೂತನ ಕೃಷಿ ಕಾಯ್ದೆ ಪ್ರಾಯೋಗಿಕವಾಗಿ ಜಾರಿಗೊಳಿಸಿಸುವ ಕುರಿತು ಹೇಳಿಕೆ ನೀಡಿದ್ದರು.

 

ದೆಹಲಿಯಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ: ಕುಮಾರಸ್ವಾಮಿ ಸರಣಿ ಟ್ವೀಟ್