AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

H3N2 Death in Maharashtra: ಮಹಾರಾಷ್ಟ್ರದಲ್ಲಿ ತೀವ್ರ ಜ್ವರದಿಂದ ಎಂಬಿಬಿಎಸ್​ ವಿದ್ಯಾರ್ಥಿ ಸಾವು, ಹೆಚ್​3ಎನ್​2 ವೈರಸ್ ಶಂಕೆ

ಮಹಾರಾಷ್ಟ್ರದಲ್ಲಿ ಹೆಚ್​3ಎನ್​2 ವೈರಸ್​ಗೆ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಲ್ಲಿ, ಬಾರತದಲ್ಲಿ ಹೆಚ್​3ಎನ್​2 ವೈರಸ್​ ಪ್ರಕರಣಗಳು ಹೆಚ್ಚುತ್ತಿವೆ.

H3N2 Death in Maharashtra: ಮಹಾರಾಷ್ಟ್ರದಲ್ಲಿ ತೀವ್ರ ಜ್ವರದಿಂದ ಎಂಬಿಬಿಎಸ್​ ವಿದ್ಯಾರ್ಥಿ ಸಾವು, ಹೆಚ್​3ಎನ್​2 ವೈರಸ್ ಶಂಕೆ
ಹೆಚ್​3ಎನ್​2 ವೈರಸ್Image Credit source: The Wire
ನಯನಾ ರಾಜೀವ್
| Edited By: |

Updated on:Mar 15, 2023 | 2:20 PM

Share

ಮಹಾರಾಷ್ಟ್ರದಲ್ಲಿ ಹೆಚ್​3ಎನ್​2 ವೈರಸ್​ಗೆ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಲ್ಲಿ, ಬಾರತದಲ್ಲಿ ಹೆಚ್​3ಎನ್​2 ವೈರಸ್​ ಪ್ರಕರಣಗಳು ಹೆಚ್ಚುತ್ತಿವೆ. ಭಾರತದಲ್ಲಿ ಇದುವರೆಗೆ H3N2 ನಿಂದ ಎರಡು ಸಾವುಗಳು ಸಂಭವಿಸಿವೆ. ಒಂದು ಕರ್ನಾಟಕದಲ್ಲಿ ಮತ್ತು ಇನ್ನೊಂದು ಹರಿಯಾಣದಲ್ಲಿ. ಇದೀಗ ಮಹಾರಾಷ್ಟ್ರದಲ್ಲಿ ಎಂಬಿಬಿಎಸ್​ ವಿದ್ಯಾರ್ಥಿ ಮೃತಪಟ್ಟಿದ್ದು, ಇದು ಹೆಚ್​3ಎನ್​2 ಎನ್ನುವುದಕ್ಕೆ ಸಧ್ಯಕ್ಕೆ ಯಾವುದೇ ಪುರಾವೆಗಳಿಲ್ಲ.  ಮರಣೋತ್ತರ ಪರೀಕ್ಷೆಯಲ್ಲಿ ಅವರ ರಕ್ತದಲ್ಲಿ H3N2 ವೈರಸ್ ಪತ್ತೆಯಾಗಿದೆ ಎನ್ನಲಾಗಿದೆ.

ಅಹ್ಮದ್‌ನಗರದ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ 23ರ ಹರೆಯದ  ವಿದ್ಯಾರ್ಥಿ ಕಳೆದ ವಾರ ಸ್ನೇಹಿತರೊಂದಿಗೆ ಕೊಂಕಣದ ಅಲಿಬಾಗ್‌ಗೆ ಪಿಕ್ನಿಕ್‌ಗೆ ತೆರಳಿದ್ದರು. ಅಲ್ಲಿಂದ ಬಂದ ನಂತರ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಪರೀಕ್ಷಿಸಿದಾಗ ಕೋವಿಡ್-19 ಪಾಸಿಟಿವ್ ಎಂದು ತಿಳಿದುಬಂದಿದೆ. ಆ ನಂತರ ಅವರನ್ನು ಅಹಮದ್‌ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ (ಮಾರ್ಚ್ 13) ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.  ಅವರ ಮರಣೋತ್ತರ ಪರೀಕ್ಷೆಯು ಅವರ ರಕ್ತದಲ್ಲಿ H3N2 ವೈರಸ್ ಕಂಡುಬಂದಿದೆ ಎಂದು ವರದಿಯಾಗಿದೆ, ಆದರೆ ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ.

ಮತ್ತೊಂದು ಪ್ರಕರಣದಲ್ಲಿ, ಗುಜರಾತ್‌ನ ವಡೋದರಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ 58 ವರ್ಷದ ಮಹಿಳೆ ಜ್ವರ ತರಹದ ರೋಗಲಕ್ಷಣಗಳಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಮಾರ್ಚ್ 14) ತಿಳಿಸಿದ್ದಾರೆ. H3N2 ಇನ್‌ಫ್ಲುಯೆಂಜಾ ವೈರಸ್ ಕಾರಣವೇ ಎಂದು ಕೇಳಿದಾಗ, ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಪರಿಶೀಲನಾ ಸಮಿತಿಯು ಮಹಿಳೆಯ ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:54 am, Wed, 15 March 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ