ಪುದುಚೇರಿಯಲ್ಲಿ ಹೆಚ್3ಎನ್2 ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಮಾರ್ಚ್ 16-26ರವರೆಗೆ ರಜೆ ಘೋಷಿಸಲಾಗಿದೆ. ಮಾರ್ಚ್ 11ರವರೆಗೆ ಪುದುಚೇರಿಯಲ್ಲಿ 79 ಹೆಚ್3ಎನ್2 ಪ್ರಕರಣಗಳು ಪತ್ತೆಯಾಗಿದ್ದವು. ಇದುವರೆಗೆ ಯಾವುದೇ ಸಾವು ವರದಿಯಾಗಿಲ್ಲ. ಹೆಚ್ಚುತ್ತಿರುವ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ಕೇಂದ್ರಾಡಳಿತ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಚಿಕಿತ್ಸೆಗಾಗಿ ಹೊರರೋಗಿಗಳ ವಿಭಾಗದಲ್ಲಿ ವಿಶೇಷ ಬೂತ್ಗಳನ್ನು ಪ್ರಾರಂಭಿಸಲಾಗಿದೆ.
ಹೆಚ್ಚುತ್ತಿರುವ ವೈರಸ್ ಪ್ರಕರಣಗಳ ಮಧ್ಯೆ ಶಾಲೆಗಳನ್ನು ಮುಚ್ಚುವಂತೆ ರಾಜಕೀಯ ಪಕ್ಷಗಳು ಮತ್ತು ಪೋಷಕರು ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಒತ್ತಾಯಿಸಿದ್ದವು, ಹಾಗಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ವೈದ್ಯರ ಪ್ರಕಾರ, H3N2 ವೈರಸ್ ಮಕ್ಕಳು ಮತ್ತು ವೃದ್ಧರ ಮೇಲೆ ಹೆಚ್ಚು ದಾಳಿ ಮಾಡುತ್ತಿದೆ. ಆದ್ದರಿಂದ, ಜನರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಮತ್ತು ಇತರ ಎಲ್ಲಾ ನಿಯಮಗಳನ್ನು ಅನುಸರಿಸುವುದು ಸೇರಿದಂತೆ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಲು ವೈದ್ಯರು ಸೂಚಿಸಿದ್ದಾರೆ.
ಮತ್ತಷ್ಟು ಓದಿ: H3N2 Death in Maharashtra: ಮಹಾರಾಷ್ಟ್ರದಲ್ಲಿ ತೀವ್ರ ಜ್ವರದಿಂದ ಎಂಬಿಬಿಎಸ್ ವಿದ್ಯಾರ್ಥಿ ಸಾವು, ಹೆಚ್3ಎನ್2 ವೈರಸ್ ಶಂಕೆ
ಹೆಚ್3ಎನ್2 ವೈರಸ್ ಸೋಂಕಿಗೆ ಒಳಗಾದ ಕೆಲವು ರೋಗಿಗಳಲ್ಲಿ ಶ್ವಾಸಕೋಶದಲ್ಲಿ ಹೆಚ್ಚಿನ ಸೋಂಕು ಹರಡುತ್ತಿದೆ ಎಂದು ವೈದ್ಯರು ಹೇಳುತ್ತಾರೆ. ನ್ಯುಮೋನಿಯಾ ಬರುವ ಸ್ಥಿತಿಯೂ ನಿರ್ಮಾಣವಾಗುತ್ತಿದೆ. ಸಾಮಾನ್ಯವಾಗಿ ವಯಸ್ಸಾದ ಅಥವಾ ಚಿಕ್ಕ ಮಕ್ಕಳಲ್ಲಿ, ಪ್ರಕರಣವು ಹದಗೆಟ್ಟಾಗ, ಅವರನ್ನು ಆಸ್ಪತ್ರೆಗೆ ಸೇರಿಸುವ ಅವಶ್ಯಕತೆಯಿದೆ.
ಮಹಾರಾಷ್ಟ್ರದಲ್ಲಿ ಹೆಚ್3ಎನ್2 ವೈರಸ್ಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿಯಾಗಿದ್ದಾರೆ. ಇದುವರೆಗೆ ಕರ್ನಾಟಕದಲ್ಲಿ, ಹರ್ಯಾಣದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:19 pm, Wed, 15 March 23