Rahul Gandhi: ವಾರಾಣಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್ ಗಾಂಧಿ

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಿಯಾಂಕಾ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು 2ರಿಂದ 3 ಲಕ್ಷ ಮತಗಳಿಂದ ಸೋಲಿಸುತ್ತಿದ್ದರು ಎಂದು ಹೇಳಿದ್ದಾರೆ.

Rahul Gandhi: ವಾರಾಣಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್ ಗಾಂಧಿ
ರಾಹುಲ್ ಗಾಂಧಿ - ಪ್ರಿಯಾಂಕಾ ಗಾಂಧಿ
Follow us
ಸುಷ್ಮಾ ಚಕ್ರೆ
|

Updated on:Jun 11, 2024 | 8:32 PM

ರಾಯ್​ಬರೇಲಿ: ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ (Lok Sabha Elections) 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿರುವ ಲೋಕಸಭೆ ಕ್ಷೇತ್ರವಾದ ರಾಯ್​ಬರೇಲಿಯಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ರಾಹುಲ್ ಗಾಂಧಿ (Rahul Gandhi) ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯವರ (Priyanka Gandhi) ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅಮೇಥಿ ಮತ್ತು ರಾಯ್​ಬರೇಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆಯಲ್ಲಿ ಇಂದು ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಗೆಲುವು “ಐತಿಹಾಸಿಕವಾದುದು” ಎಂದು ಬಣ್ಣಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾರಾಣಸಿಯಲ್ಲಿ ಸ್ಪರ್ಧಿಸಿದ್ದರೆ ಅವರು ಪ್ರಧಾನಿ ಮೋದಿಯನ್ನು 2 ಅಥವಾ 3 ಲಕ್ಷ ಮತಗಳಿಂದ ಸೋಲಿಸುತ್ತಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ಸಂವಿಧಾನದ ರಕ್ಷಣೆಗೆ ಮೊದಲ ಹೆಜ್ಜೆಯಿಟ್ಟಿದ್ದೇವೆ; ಫಲಿತಾಂಶದ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ

ತಾನು ಮತ್ತು ಪಕ್ಷದ ಇತರ ಸಂಸದರು ಚುನಾವಣಾ ಫಲಿತಾಂಶದ ಬಗ್ಗೆ ಅಹಂಕಾರ ಪಡುವುದಿಲ್ಲ. ಜನಸಾಮಾನ್ಯರ ಉದ್ದೇಶಕ್ಕಾಗಿ ಕೆಲಸ ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಬಿಜೆಪಿಯ ಸೋಲನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಜನರನ್ನು ಕಡೆಗಣಿಸಿದ್ದಾರೆ. ಕೈಗಾರಿಕೋದ್ಯಮಿಗಳು ಮತ್ತು ಇತರ ವ್ಯಕ್ತಿಗಳಿಗೆ ಪ್ರಾಮುಖ್ಯತೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಜನಸಾಮಾನ್ಯರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಇಡೀ ದೇಶ ಅವಧ್ ಕಡೆಗೆ ನೋಡುತ್ತಿದೆ ಎಂದು ಹೇಳಿದರು. ಇದು ದೇಶದಲ್ಲಿ ನಮಗೆ ಸಮರ್ಪಿತ, ನಿಜವಾದ ಮತ್ತು ಸ್ವಚ್ಛ ರಾಜಕೀಯ ಬೇಕು ಎಂಬ ಸಂದೇಶವನ್ನು ರವಾನಿಸಿದೆ. ಇದೊಂದು ಐತಿಹಾಸಿಕ ಗೆಲುವು. ಈ ಸಂದೇಶವು ಅವಧ್‌ನಿಂದ ಇಡೀ ಉತ್ತರ ಪ್ರದೇಶಕ್ಕೆ ಮತ್ತು ಇಡೀ ದೇಶಕ್ಕೆ ಶುದ್ಧ ರಾಜಕಾರಣದ ಅಗತ್ಯವಿದೆ ಎಂದು ಸೂಚಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಯ ‘ಮ್ಯಾನ್ ಆಫ್ ದಿ ಮ್ಯಾಚ್’; ರಾಹುಲ್ ಗಾಂಧಿ ಪರ ಬ್ಯಾಟ್ ಬೀಸಿದ ಶಶಿ ತರೂರ್

ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮತ್ತು ಅಮೇಥಿಯಲ್ಲಿ ಕೆಎಲ್ ಶರ್ಮಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಧನ್ಯವಾದ ಸಮಾವೇಶವನ್ನು ಆಯೋಜಿಸಲಾಗಿತ್ತು. ಯುಪಿಯಲ್ಲಿ ಕಾಂಗ್ರೆಸ್ 6 ಲೋಕಸಭಾ ಸ್ಥಾನಗಳನ್ನು ಗೆದ್ದುಕೊಂಡರೆ, ಸಮಾಜವಾದಿ ಪಕ್ಷವು 80ರಲ್ಲಿ 37 ಸ್ಥಾನಗಳನ್ನು ಗಳಿಸಿತು. ಬಿಜೆಪಿ 2019ರ ಚುನಾವಣೆಯಲ್ಲಿ 64 ಸ್ಥಾನಗಳನ್ನು ಪಡೆದಿದ್ದು ಈ ಬಾರಿ 33 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಹಿನ್ನಡೆ ಅನುಭವಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Tue, 11 June 24

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ