ರಾಯ್ಬರೇಲಿ: ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ (Lok Sabha Elections) 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿರುವ ಲೋಕಸಭೆ ಕ್ಷೇತ್ರವಾದ ರಾಯ್ಬರೇಲಿಯಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ರಾಹುಲ್ ಗಾಂಧಿ (Rahul Gandhi) ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯವರ (Priyanka Gandhi) ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅಮೇಥಿ ಮತ್ತು ರಾಯ್ಬರೇಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆಯಲ್ಲಿ ಇಂದು ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಗೆಲುವು “ಐತಿಹಾಸಿಕವಾದುದು” ಎಂದು ಬಣ್ಣಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾರಾಣಸಿಯಲ್ಲಿ ಸ್ಪರ್ಧಿಸಿದ್ದರೆ ಅವರು ಪ್ರಧಾನಿ ಮೋದಿಯನ್ನು 2 ಅಥವಾ 3 ಲಕ್ಷ ಮತಗಳಿಂದ ಸೋಲಿಸುತ್ತಿದ್ದರು ಎಂದು ಹೇಳಿದ್ದಾರೆ.
ಇದನ್ನೂ ಓದಿ: Rahul Gandhi: ಸಂವಿಧಾನದ ರಕ್ಷಣೆಗೆ ಮೊದಲ ಹೆಜ್ಜೆಯಿಟ್ಟಿದ್ದೇವೆ; ಫಲಿತಾಂಶದ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ
ತಾನು ಮತ್ತು ಪಕ್ಷದ ಇತರ ಸಂಸದರು ಚುನಾವಣಾ ಫಲಿತಾಂಶದ ಬಗ್ಗೆ ಅಹಂಕಾರ ಪಡುವುದಿಲ್ಲ. ಜನಸಾಮಾನ್ಯರ ಉದ್ದೇಶಕ್ಕಾಗಿ ಕೆಲಸ ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಬಿಜೆಪಿಯ ಸೋಲನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಜನರನ್ನು ಕಡೆಗಣಿಸಿದ್ದಾರೆ. ಕೈಗಾರಿಕೋದ್ಯಮಿಗಳು ಮತ್ತು ಇತರ ವ್ಯಕ್ತಿಗಳಿಗೆ ಪ್ರಾಮುಖ್ಯತೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಜನಸಾಮಾನ್ಯರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ.
RAHUL GANDHI ON FIRE 🔥
“If Priyanka Gandhi had fought from Varanasi, Narendra Modi would’ve definitely lost by 2-3 lakh votes”
Most brutal TRUTH by RaGa 😂🔥 pic.twitter.com/cMt53AznXe
— Ankit Mayank (@mr_mayank) June 11, 2024
ಇದೇ ವೇಳೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಇಡೀ ದೇಶ ಅವಧ್ ಕಡೆಗೆ ನೋಡುತ್ತಿದೆ ಎಂದು ಹೇಳಿದರು. ಇದು ದೇಶದಲ್ಲಿ ನಮಗೆ ಸಮರ್ಪಿತ, ನಿಜವಾದ ಮತ್ತು ಸ್ವಚ್ಛ ರಾಜಕೀಯ ಬೇಕು ಎಂಬ ಸಂದೇಶವನ್ನು ರವಾನಿಸಿದೆ. ಇದೊಂದು ಐತಿಹಾಸಿಕ ಗೆಲುವು. ಈ ಸಂದೇಶವು ಅವಧ್‌ನಿಂದ ಇಡೀ ಉತ್ತರ ಪ್ರದೇಶಕ್ಕೆ ಮತ್ತು ಇಡೀ ದೇಶಕ್ಕೆ ಶುದ್ಧ ರಾಜಕಾರಣದ ಅಗತ್ಯವಿದೆ ಎಂದು ಸೂಚಿಸುತ್ತದೆ ಎಂದಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಯ ‘ಮ್ಯಾನ್ ಆಫ್ ದಿ ಮ್ಯಾಚ್’; ರಾಹುಲ್ ಗಾಂಧಿ ಪರ ಬ್ಯಾಟ್ ಬೀಸಿದ ಶಶಿ ತರೂರ್
ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮತ್ತು ಅಮೇಥಿಯಲ್ಲಿ ಕೆಎಲ್ ಶರ್ಮಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಧನ್ಯವಾದ ಸಮಾವೇಶವನ್ನು ಆಯೋಜಿಸಲಾಗಿತ್ತು. ಯುಪಿಯಲ್ಲಿ ಕಾಂಗ್ರೆಸ್ 6 ಲೋಕಸಭಾ ಸ್ಥಾನಗಳನ್ನು ಗೆದ್ದುಕೊಂಡರೆ, ಸಮಾಜವಾದಿ ಪಕ್ಷವು 80ರಲ್ಲಿ 37 ಸ್ಥಾನಗಳನ್ನು ಗಳಿಸಿತು. ಬಿಜೆಪಿ 2019ರ ಚುನಾವಣೆಯಲ್ಲಿ 64 ಸ್ಥಾನಗಳನ್ನು ಪಡೆದಿದ್ದು ಈ ಬಾರಿ 33 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಹಿನ್ನಡೆ ಅನುಭವಿಸಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:28 pm, Tue, 11 June 24