AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HAL Recruitment 2026: ಲಿಖಿತ ಪರೀಕ್ಷೆಯಿಲ್ಲದೆ ಉದ್ಯೋಗ ಪಡೆಯುವ ಸುವರ್ಣಾವಕಾಶ; 205 ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನ!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಹೈದರಾಬಾದ್ ವಿಭಾಗವು 2026-27ನೇ ಸಾಲಿಗೆ 205 ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್ ಸೇರಿದಂತೆ ಹಲವು ಟ್ರೇಡ್‌ಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ. ಯಾವುದೇ ಲಿಖಿತ ಪರೀಕ್ಷೆ ಇಲ್ಲ. ಮೇ 28 ರಿಂದ ಜೂನ್ 1 ರವರೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು.

HAL Recruitment 2026: ಲಿಖಿತ ಪರೀಕ್ಷೆಯಿಲ್ಲದೆ ಉದ್ಯೋಗ ಪಡೆಯುವ ಸುವರ್ಣಾವಕಾಶ; 205 ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನ!
ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನImage Credit source: Pinterest
ಅಕ್ಷತಾ ವರ್ಕಾಡಿ
|

Updated on: May 15, 2026 | 5:14 PM

Share

ಐಟಿಐ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಭರ್ಜರಿ ಸಿಹಿಸುದ್ದಿ ನೀಡಿದೆ. ಹೈದರಾಬಾದ್‌ನಲ್ಲಿರುವ HAL ಏವಿಯಾನಿಕ್ಸ್ ವಿಭಾಗವು 2026-27ನೇ ಸಾಲಿಗೆ ಒಟ್ಟು 205 ಐಟಿಐ ಅಪ್ರೆಂಟಿಸ್ ತರಬೇತಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯ ವಿಶೇಷವೆಂದರೆ, ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಕೇವಲ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಯಾವೆಲ್ಲಾ ಟ್ರೇಡ್‌ಗಳಿಗೆ ಅವಕಾಶವಿದೆ?

ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಟರ್ನರ್, ವೆಲ್ಡರ್, ರೆಫ್ರಿಜರೇಷನ್ & ಎಸಿ, ಸಿಒಪಿಎ (COPA), ಪ್ಲಂಬರ್, ಪೇಂಟರ್, ಡೀಸೆಲ್ ಮೆಕ್ಯಾನಿಕ್, ಮೋಟಾರ್ ವೆಹಿಕಲ್ ಮೆಕ್ಯಾನಿಕ್, ಡ್ರಾಫ್ಟ್ಸ್‌ಮನ್ (ಸಿವಿಲ್ ಮತ್ತು ಮೆಕ್ಯಾನಿಕಲ್) ಹಾಗೂ ಎಲೆಕ್ಟ್ರೋಪ್ಲೇಟರ್ ವಿಭಾಗಗಳಲ್ಲಿ ಈ ಹುದ್ದೆಗಳು ಖಾಲಿ ಇವೆ. ಆಸಕ್ತರು NCVT ಇಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಸಂಬಂಧಿತ ಐಟಿಐ ಪೂರ್ಣಗೊಳಿಸಿರಬೇಕು. ಆಯ್ಕೆಯಾದವರಿಗೆ 1961ರ ಅಪ್ರೆಂಟಿಸ್‌ಶಿಪ್ ಕಾಯ್ದೆಯನ್ವಯ ಶಿಷ್ಯವೇತನ ನೀಡಲಾಗುತ್ತದೆ.

ನೇರ ಸಂದರ್ಶನದ ದಿನಾಂಕ ಮತ್ತು ಸಮಯ:

ಅಭ್ಯರ್ಥಿಗಳು ತಮ್ಮ ಟ್ರೇಡ್‌ಗಳಿಗೆ ನಿಗದಿಪಡಿಸಿದ ದಿನಾಂಕದಂದು ಹೈದರಾಬಾದ್‌ನ ಬಾಲನಗರದಲ್ಲಿರುವ HAL ಕಚೇರಿಗೆ ಹಾಜರಾಗಬೇಕು:

  • ಮೇ 28: ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಡೀಸೆಲ್ ಮೆಕ್ಯಾನಿಕ್ (ಬೆಳಿಗ್ಗೆ); ಫಿಟ್ಟರ್, ಪ್ಲಂಬರ್, ಪೇಂಟರ್ (ಮಧ್ಯಾಹ್ನ).
  • ಮೇ 29: COPA, ಮೋಟಾರ್ ವೆಹಿಕಲ್ ಮೆಕ್ಯಾನಿಕ್ (ಬೆಳಿಗ್ಗೆ); ಎಲೆಕ್ಟ್ರಿಷಿಯನ್, ಡ್ರಾಫ್ಟ್ಸ್‌ಮನ್ ಮೆಕ್ಯಾನಿಕಲ್ (ಮಧ್ಯಾಹ್ನ).
  • ಜೂನ್ 1: ಮೆಷಿನಿಸ್ಟ್, ರೆಫ್ರಿಜರೇಷನ್ ಆ್ಯಂಡ್ ಎಸಿ (ಬೆಳಿಗ್ಗೆ); ಡ್ರಾಫ್ಟ್ಸ್‌ಮನ್ ಸಿವಿಲ್, ವೆಲ್ಡರ್, ಎಲೆಕ್ಟ್ರೋಪ್ಲೇಟರ್ (ಮಧ್ಯಾಹ್ನ).

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ಸಂದರ್ಶನಕ್ಕೆ ಬೇಕಾಗುವ ಅಗತ್ಯ ದಾಖಲೆಗಳು:

ಸಂದರ್ಶನಕ್ಕೆ ಹೋಗುವಾಗ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳ ಮೂಲ ಮತ್ತು ಜೆರಾಕ್ಸ್ ಪ್ರತಿಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು:

  • ಆಧಾರ್ ಕಾರ್ಡ್ ಮತ್ತು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
  • ಐಟಿಐ ಪ್ರಮಾಣಪತ್ರ ಮತ್ತು ಜಾತಿ ಪ್ರಮಾಣಪತ್ರ.
  • ಅಪ್ರೆಂಟಿಸ್‌ಶಿಪ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿದ ಪ್ರತಿ (Registration Copy).
  • ಜನ್ಮ ದಿನಾಂಕ ದೃಢೀಕರಣ ಪತ್ರ.

ಸಂದರ್ಶನ ನಡೆಯುವ ಸ್ಥಳ: ಉತ್ಸವ್ ಸದನ್ ಆಡಿಟೋರಿಯಂ, HAL ಏವಿಯಾನಿಕ್ಸ್ ವಿಭಾಗ, ಬಾಲನಗರ, ಹೈದರಾಬಾದ್ – 500042.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ