ಅಯೋಧ್ಯೆ ರಾಮಮಂದಿರ: ಜನವರಿ 22ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ (ಜ.18) ಹೇಳಿದ್ದಾರೆ.
ಅಯೋಧ್ಯೆ, ಜ.18: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ (ಜ.18) ಹೇಳಿದ್ದಾರೆ.ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅರ್ಧ ದಿನ ಕೇಂದ್ರ ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗುವುದು.
ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಕೂಡ ಭಾಗವಹಿಸಬೇಕು ಎಂಬ ಕಾರಣಕ್ಕೆ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ರಜೆ ನೀಡಲಾಗುವುದು ಎಂದು ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು / ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಭದ್ರತೆಗೆ ಎಐ ತಂತ್ರಜ್ಞಾನ
ಜನವರಿ 22ರಂದು ಮಧ್ಯಾಹ್ನ 12.30ಕ್ಕೆ, ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ-ಪ್ರತಿಷ್ಠಾ ಸಮಾರಂಭವು ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಾಜದ ಎಲ್ಲಾ ವರ್ಗಗಳ ಹಲವಾರು ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಈ ರಾಮಮಂದಿರದಲ್ಲಿ ಧಾರ್ಮಿಕ ವಿಧಿವಿಧಾನಗಳು ಪ್ರಾರಂಭವಾಗಿದೆ. ಹಲವು ಕಾರ್ಯಕ್ರಮಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:18 pm, Thu, 18 January 24