ತಪ್ಪಿತಸ್ಥರನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ಬಿಹಾರದ ಮಾಜಿ ಸಂಸದ ಆನಂದ್ ಮೋಹನ್ ಸಿಂಗ್

ನಿತೀಶ್ ಕುಮಾರ್ ಸರ್ಕಾರ ಜೈಲು ನಿಯಮಗಳನ್ನು ತಿದ್ದುಪಡಿ ಮಾಡಿದ ನಂತರ ಮಾಜಿ ಸಂಸದ ಜೈಲಿನಿಂದ ಬಿಡುಗಡೆಯಾಗಿದ್ದರು.. ಈ ಹಿಂದೆ, ಕರ್ತವ್ಯದಲ್ಲಿದ್ದ ಸಾರ್ವಜನಿಕ ನೌಕರನ ಹತ್ಯೆಗೆ ಸಂಬಂಧಿಸಿದಂತೆ ಶಿಕ್ಷೆಗೊಳಗಾದವಪು ಶಿಕ್ಷೆಯ ವಿನಾಯಿತಿಗೆ ಅರ್ಹರಾಗಿರಲಿಲ್ಲ. ಇದನ್ನು ಬಿಹಾರ ಸರ್ಕಾರ ಬದಲಿಸಿ, ಸಿಂಗ್ ಸೇರಿದಂತೆ 27 ಅಪರಾಧಿಗಳ ಬಿಡುಗಡೆಗೆ ದಾರಿ ಮಾಡಿಕೊಟ್ಟಿತು.

ತಪ್ಪಿತಸ್ಥರನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ಬಿಹಾರದ ಮಾಜಿ ಸಂಸದ ಆನಂದ್ ಮೋಹನ್ ಸಿಂಗ್
ಆನಂದ್ ಮೋಹನ್ ಸಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on: May 12, 2023 | 4:46 PM

ಪಾಟ್ನಾ: 1994ರಲ್ಲಿ ಐಎಎಸ್ ಅಧಿಕಾರಿಯೊಬ್ಬರ ಹತ್ಯೆಗೆ (G Krishnaiah Murder Case) ಕುಮ್ಮಕ್ಕು ನೀಡಿದ ಆರೋಪದಲ್ಲಿ 14 ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿದ್ದ ಬಿಹಾರದ (Bihar) ಮಾಜಿ ಸಂಸದ ಆನಂದ್ ಮೋಹನ್ ಸಿಂಗ್  (Anand Mohan Singh) ಈ ಪ್ರಕರಣದಲ್ಲಿ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಮೊದಲ ಬಾರಿಗೆ ಮಾತನಾಡಿದ ರಾಜಕಾರಣಿ, ಬುಧವಾರ ಬಿಹಾರದ ಅರಾರಿಯಾದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ನಾನು ತಪ್ಪಿತಸ್ಥನೆಂದು ಸಾಬೀತಾದರೆ ಗಲ್ಲು ಶಿಕ್ಷೆಗೆ ಸಿದ್ಧ ಎಂದು ಹೇಳಿದರು. ಈ ದೇಶ ಯಾರ ಸ್ವತ್ತಲ್ಲ, ನಾನು ಕಾನೂನು ಮತ್ತು ಸಂವಿಧಾನವನ್ನು ನಂಬುತ್ತೇನೆ. ಯಾವುದೇ ದೂರುಗಳಿಲ್ಲದೆ 15 ವರ್ಷಗಳಿಗಿಂತ ಹೆಚ್ಚು ಜೈಲು ಶಿಕ್ಷೆಯನ್ನು ಅನುಭವಿಸಿದ್ದೇನೆ. ನಾನು ತಪ್ಪಿತಸ್ಥನೆಂದು ಸರ್ಕಾರ ನಂಬಿದರೆ ನಾನು ಗಲ್ಲಿಗೇರುವುದಕ್ಕೆಲು ಸಿದ್ಧ” ಎಂದು ಮಾಜಿ ಸಂಸದರು ಹೇಳಿದರು.

ಆನಂದ್ ಮೋಹನ್ ಸಿಂಗ್ ಕಳೆದ ತಿಂಗಳು ಜೈಲಿನಿಂದ ಹೊರನಡೆದಿದ್ದು, ಬಿಹಾರ ಸರ್ಕಾರದ ಜೈಲು ನಿಯಮ ಬದಲಾವಣೆಗೆ ಸಂಬಂಧಿಸಿದಂತೆ ಭಾರೀ ಗದ್ದಲದ ನಡುವೆಯೇ ಅವರ ಬಿಡುಗಡೆಗೆ ಹಾದಿ ಸುಗಮವಾಗಿತ್ತು.

ನಿತೀಶ್ ಕುಮಾರ್ ಸರ್ಕಾರ ಜೈಲು ನಿಯಮಗಳನ್ನು ತಿದ್ದುಪಡಿ ಮಾಡಿದ ನಂತರ ಮಾಜಿ ಸಂಸದ ಜೈಲಿನಿಂದ ಬಿಡುಗಡೆಯಾಗಿದ್ದರು.. ಈ ಹಿಂದೆ, ಕರ್ತವ್ಯದಲ್ಲಿದ್ದ ಸಾರ್ವಜನಿಕ ನೌಕರನ ಹತ್ಯೆಗೆ ಸಂಬಂಧಿಸಿದಂತೆ ಶಿಕ್ಷೆಗೊಳಗಾದವಪು ಶಿಕ್ಷೆಯ ವಿನಾಯಿತಿಗೆ ಅರ್ಹರಾಗಿರಲಿಲ್ಲ. ಇದನ್ನು ಬಿಹಾರ ಸರ್ಕಾರ ಬದಲಿಸಿ, ಸಿಂಗ್ ಸೇರಿದಂತೆ 27 ಅಪರಾಧಿಗಳ ಬಿಡುಗಡೆಗೆ ದಾರಿ ಮಾಡಿಕೊಟ್ಟಿತು.

ಹಲವಾರು ಪ್ರಕರಣಗಳನ್ನು ಎದುರಿಸಿದ ಸಿಂಗ್, 1994 ರಲ್ಲಿ ದಲಿತ ಐಎಎಸ್ ಅಧಿಕಾರಿಯಾಗಿದ್ದ ಜಿಲ್ಲಾ ಮ್ಯಾಜಿಸ್ಟ್ರೇಟ್ ಜಿ ಕೃಷ್ಣಯ್ಯ ಅವರನ್ನು ಹತ್ಯೆಗೈದ ಗುಂಪನ್ನು ಪ್ರಚೋದಿಸಿದ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿತ್ತು.

1994 ರಲ್ಲಿ, ಆನಂದ್ ಮೋಹನ್ ಅವರ ಬಿಪಿಪಿ ಪಕ್ಷದ ಮುಜಾಫರ್‌ಪುರದ ದರೋಡೆಕೋರ-ರಾಜಕಾರಣಿ ಛೋಟಾನ್ ಶುಕ್ಲಾ ಅವರ ಮೃತದೇಹ ಹೊತ್ತು ಗುಂಪೊಂದು ಪ್ರತಿಭಟನೆ ನಡೆಸುತ್ತಿತ್ತು. ಡಿಸೆಂಬರ್ 4 ರಂದು ಮುಜಾಫರ್‌ಪುರದ ಭಗವಾನ್‌ಪುರ್ ಚೌಕ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಅವರ ವಾಹನದ ಮೇಲೆ ಗುಂಡು ಹಾರಿಸಿ ಶುಕ್ಲಾ ಸಾವಿಗೀಡಾಗಿದ್ದರು. ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಸಹ ಭಾಗಿಯಾಗಿದ್ದಾನೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ತಿಳಿಸಿದೆ.

ಛೋಟಾನ್ ಹತ್ಯೆಯಲ್ಲಿ ಪೊಲೀಸರೊಬ್ಬರು ಭಾಗಿಯಾಗಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಆತನ ಬೆಂಬಲಿಗರು ನಗರದಲ್ಲಿ ಆಕ್ರೋಶ ವ್ಯಕ್ತಪಡಿಸಿ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಮರುದಿನ, ಮುಜಫರ್‌ಪುರದಿಂದ ವೈಶಾಲಿಯ ಲಾಲ್‌ಗಂಜ್‌ನಲ್ಲಿರುವ ಅವನ ತಂದೆಯ ಗ್ರಾಮವಾದ ಖಂಜಾಹಚಕ್‌ಗೆ ಛೋಟಾನ್‌ನ ಮೃತದೇಹ ಹೊತ್ತು ಬೆಂಬಲಿಗರು ಹೋಗಿದ್ದರು.

ಇದನ್ನೂ ಓದಿ:  ಗ್ಯಾಂಗ್​ಸ್ಟರ್ ತಿಲ್ಲು ತಾಜ್​ಪುರಿಯಾ ಆಪ್ತನ ಸಹೋದರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಆನಂದ್ ಮೋಹನ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ನೆರೆದಿದ್ದ ಜನರನ್ನುದ್ದೇಶಿಸಿ ಆವೇಶಭರಿತ ಭಾಷಣ ಮಾಡಿದರು. ಆ ಸಮಯದಲ್ಲಿ ಗೋಪಾಲಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದ ಜಿ ಕೃಷ್ಣಯ್ಯ ಅವರು ಹಾಜಿಪುರದಿಂದ ಗೋಪಾಲಗಂಜ್‌ಗೆ ಹಿಂತಿರುಗುತ್ತಿದ್ದರು. 1985ರ ಬ್ಯಾಚ್‌ನ ಐಎಎಸ್ ಅಧಿಕಾರಿ ಆಗಿರುವ ಜಿ ಕೃಷ್ಣಯ್ಯ ತೆಲಂಗಾಣದ ಮಹೆಬೂಬ್‌ನಗರದವರು.

ಕೆಂಪು ದೀಪವಿರುವ ಸರ್ಕಾರಿ ವಾಹನದ ನೋಡಿ ರೊಚ್ಚಿಗೆದ್ದ ಪ್ರತಿಭಟನಾಕಾರರು ಖಬ್ರಾ ಗ್ರಾಮದ ಬಳಿ ಕೃಷ್ಣಯ್ಯ ಅವರನ್ನು ಘೇರಾವ್ ಮಾಡಿ ಕಾರಿಗೆ ಕಲ್ಲು ತೂರಾಟ ಆರಂಭಿಸಿದರು. ಈ ನಡುವೆ ಛೋಟಾನ್ ಸಹೋದರ ಭುತ್ಕುನ್ ಶುಕ್ಲಾ ಕೃಷ್ಣಯ್ಯ ಅವರ ಮೇಲೆ ಗುಂಡು ಹಾರಿಸಿದ್ದು, ಜನರ ಗುಂಪು ಕೃಷ್ಣಯ್ಯ ಅವರನ್ನು ಥಳಿಸಿ ಹತ್ಯೆಗೈದಿದೆ.

ಕೃಷ್ಣಯ್ಯ ಅವರನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಿಲ್ಲ. ಐಎಎಸ್ ಅಧಿಕಾರಿಯನ್ನು ಹತ್ಯೆ ಮಾಡಲು ಆನಂದ್ ಮೋಹನ್ ಜನಸಮೂಹವನ್ನು ಪ್ರಚೋದಿಸಿದರು ಎಂದು ಆರೋಪಿಸಲಾಗಿದೆ. 2007 ರಲ್ಲಿ ಆನಂದ್ ಮೋಹನ್ಗೆ ಮರಣದಂಡನೆ ವಿಧಿಸಲಾಯಿತು. ಆದರೆ ನಂತರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಯಿತು. ಇದಾದ ನಂತರ ಅವರು 15 ವರ್ಷಗಳ ಕಾಲ ಜೈಲಿನಲ್ಲಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ