AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರದ್ಧಾ ಹಂತಕನನ್ನು ಗಲ್ಲಿಗೇರಿಸಿ: ದೆಹಲಿ ನ್ಯಾಯಾಲಯದಲ್ಲಿ ಘೋಷಣೆ ಕೂಗಿದ ವಕೀಲರು

ಪ್ರತಿಭಟನಾನಿರತ ವಕೀಲರಲ್ಲಿ ಒಬ್ಬರಾದ ಸುರೇಂದ್ರ ಕುಮಾರ್, ಆರೋಪಿಗಳ ಘೋರ ಅಪರಾಧದ ವಿರುದ್ಧ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು

ಶ್ರದ್ಧಾ ಹಂತಕನನ್ನು ಗಲ್ಲಿಗೇರಿಸಿ: ದೆಹಲಿ ನ್ಯಾಯಾಲಯದಲ್ಲಿ ಘೋಷಣೆ ಕೂಗಿದ ವಕೀಲರು
ಘೋಷಣೆ ಕೂಗುತ್ತಿರುವ ವಕೀಲರು
TV9 Web
| Edited By: |

Updated on:Nov 17, 2022 | 8:20 PM

Share

ದೆಹಲಿಯ ಸಾಕೇತ್ ಕೋರ್ಟ್‌ನ (Delhi’s Saket Court)ಹೊರಗೆ ಗುರುವಾರ ಜಮಾಯಿಸಿದ ವಕೀಲರು ಶ್ರದ್ಧಾ ವಾಕರ್ (Shraddha Walkar) ಹಂತಕ ಅಫ್ತಾಬ್ ಅಮೀನ್ ಪೂನಾವಾಲಾಗೆ(Aaftab Amin Poonawala) ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ. ದೆಹಲಿ ಪೊಲೀಸರು ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆಗೆ ತೆಗೆದುಕೊಳ್ಳಲು ನ್ಯಾಯಾಧೀಶರು ಒಪ್ಪಿದಾಗ ವಕೀಲರು “ಶ್ರದ್ಧಾ ಕೆ ಹತಿಯಾರ್ ಕೋ ಫಾಸಿ ದೋ, ಫಾಸಿ ದೋ” (ಶ್ರದ್ಧಾ ಹಂತಕನನ್ನು ಗಲ್ಲಿಗೇರಿಸಿ) ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಆರೋಪಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಅವರ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿದಾಗ ಸಾಕೇತ್ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದ ಸುಮಾರು 100 ವಕೀಲರು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಒಟ್ಟುಗೂಡಿದರು ಎಂದು ವರದಿಗಳು ತಿಳಿಸಿವೆ. ಪ್ರತಿಭಟನಾನಿರತ ವಕೀಲರಲ್ಲಿ ಒಬ್ಬರಾದ ಸುರೇಂದ್ರ ಕುಮಾರ್, ಆರೋಪಿಗಳ ಘೋರ ಅಪರಾಧದ ವಿರುದ್ಧ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಈ ವಿಷಯದಲ್ಲಿ ನ್ಯಾಯಯುತ ತನಿಖೆಗೆ ನಾವು ಒತ್ತಾಯಿಸುತ್ತೇವೆ. ಇದನ್ನು ತ್ವರಿತ ನ್ಯಾಯಾಲಯದಲ್ಲಿ ತ್ವರಿತವಾಗಿ ತೀರ್ಮಾನಿಸಬೇಕು ಎಂದು ಕುಮಾರ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಪೂನಾವಾಲಾನನ್ನು ಹಾಜರುಪಡಿಸುವಂತೆ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶರು ಸ್ವೀಕರಿಸಿ, ಸಂಜೆ 4 ಗಂಟೆಗೆ ವಿಚಾರಣೆ ಮಾಡುವುದಾಗಿ ಹೇಳಿದ ಬಳಿಕ ಅವರು ತೆರಳಿದರು. “ನನಗೆ ವಿಷಯದ ಸೂಕ್ಷ್ಮತೆ, ಮಾಧ್ಯಮ ಪ್ರಸಾರ … ಸಾರ್ವಜನಿಕರ ಗಮನ ಈ ಬಗ್ಗೆ ತಿಳಿದಿದೆ ಎಂದು ನ್ಯಾಯಾಧೀಶರು ಹೇಳಿದರು.

ಇದನ್ನೂ ಓದಿ
Image
Delhi Murder ಶ್ರದ್ಧಾಳನ್ನು ಹತ್ಯೆ ಮಾಡಿದ ಅಫ್ತಾಬ್ ಪೂನಾವಾಲಾ ಈ ಒಂದು ಸುಳ್ಳಿನಿಂದ ಸಿಕ್ಕಿಬಿದ್ದ
Image
Shraddha Walkar Murder: ಶ್ರದ್ಧಾ ಕೊಲೆ ಪ್ರಕರಣ; ಆರೋಪಿ ಅಫ್ತಾಬ್​ಗೆ ಮಂಪರು ಪರೀಕ್ಷೆ ಸಾಧ್ಯತೆ
Image
Delhi Murder Case: ದೆಹಲಿ ಕೊಲೆ ಪ್ರಕರಣ; ಶ್ರದ್ಧಾಳ ದೇಹದ 13 ಭಾಗ ಪತ್ತೆ; ತಲೆ, ಹತ್ಯೆಯ ಆಯುಧಕ್ಕಾಗಿ ಹುಡುಕಾಟ
Image
Shraddha Murder: ದೆಹಲಿಯನ್ನು ಬೆಚ್ಚಿ ಬೀಳಿಸಿದ ಶ್ರದ್ಧಾ ಕೊಲೆ ಪ್ರಕರಣ; ಆ ನಿಗೂಢ ರಾತ್ರಿ ನಡೆದಿದ್ದೇನು?

10 ದಿನಗಳ ಪೊಲೀಸರ ಕೋರಿಕೆಯ ವಿರುದ್ಧ ದೆಹಲಿ ನ್ಯಾಯಾಲಯವು  ಪೂನಾವಾಲಾನ ಕಸ್ಟಡಿಯನ್ನು ಐದು ದಿನಗಳವರೆಗೆ ವಿಸ್ತರಿಸಿದೆ. ನ್ಯಾಯಾಲಯವು ಆರೋಪಿಯ ನಾರ್ಕೋ-ಅನಾಲಿಸಿಸ್ ಪರೀಕ್ಷೆಗೆ ಪೊಲೀಸರಿಗೆ ಅನುಮತಿ ನೀಡಿದೆ.

ದೆಹಲಿ ಪೊಲೀಸರು ಹಿಮಾಚಲ ಪ್ರದೇಶದ ಪಾರ್ವತಿ ಕಣಿವೆ ಹಾಗೂ ದೆಹಲಿಯ ಬದರ್‌ಪುರ ಮತ್ತು ಚತ್ತರ್‌ಪುರ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿ ಹೆಚ್ಚಿನ ಸಾಕ್ಷ್ಯಾಧಾರಗಳನ್ನು ಪಡೆಯಲು ಸಮಯ ಕೋರಿದ್ದರು. ಮೇ 18 ರಂದು ಪೂನಾವಾಲಾ ಲಿವ್-ಇನ್ ಸಂಗಾತಿ ಶ್ರದ್ಧಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಹಲವಾರು ದಿನಗಳ ಅವಧಿಯಲ್ಲಿ ದೆಹಲಿಯ ಅರಣ್ಯಗಳಲ್ಲಿ ಎಸೆಯಲಾಯಿತು. ಕಳೆದ ತಿಂಗಳು ಸಂತ್ರಸ್ತೆಯ ತಂದೆ ನೀಡಿದ ದೂರಿನ ನಂತರ ಪ್ರಕರಣ ಬೆಳಕಿಗೆ ಬಂದಿದೆ. ನವೆಂಬರ್ 12ರಂದು ಪೂನಾವಾಲಾನನ್ನು ಬಂಧಿಸಲಾಗಿತ್ತು.

Published On - 8:03 pm, Thu, 17 November 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ