ನೂತನ ಕೃಷಿ ಕಾಯ್ದೆ ವಿರೋಧಿಸಿ ಸಂಸದೀಯ ಸಮಿತಿಗಳಿಗೆ ರಾಜೀನಾಮೆ ಸಲ್ಲಿಸಿದ ಹನುಮಾನ್ ಬೇನಿವಾಲ್
ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿಯ ಸಂಸದ ಹನುಮಾನ್ ಬೇನಿವಾಲ್ ಮೂರು ಸಂಸದೀಯ ಸಮಿತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ ಸಂಸದ ಹನುಮಾನ್ ಬೇನಿವಾಲ್ ಮೂರು ಸಂಸದೀಯ ಸಮಿತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿ (ಆರ್ಎಲ್ಪಿ) ಮೊದಲಿಂದಲೂ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಲೇ ಬಂದಿದೆ.
ಹನುಮಾನ್ ಬೇನಿವಾಲ್ ಕೈಗಾರಿಕಾ ಸ್ಥಾಯಿ ಸಮಿತಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಮಾಲೋಚನಾ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಅಲ್ಲದೇ, ಈ ಪಕ್ಷದ ರಾಜಸ್ಥಾನದ ಬಿಜೆಪಿ ಸರ್ಕಾರ ಭಾಗವಾಗಿರುವ ಆರ್ಎಲ್ಪಿಯ ಮೂವರು ಶಾಸಕರು ಸಹ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯಿಂದ ಆರ್ಎಲ್ಪಿ ಎನ್ಡಿಎ ಮೈತ್ರಿಕೂಟವನ್ನು ತೊರೆಯುವ ಸಾಧ್ಯತೆಗಳು ದಟ್ಟವಾಗುತ್ತಿವೆ
ರೈತರ ದಿಲ್ಲಿ ಚಲೋ ಪ್ರತಿಭಟನೆ ರಾಜಕೀಯ ಸ್ವರೂಪ ಪಡೆಯಲಾರಂಭಿಸಿದೆ!