ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಬಂದ ವಿಮಾನದಲ್ಲಿ ಪ್ರಯಾಣಿಕರಿಂದ ಹನುಮಾನ್ ಚಾಲೀಸಾ ಪಠಣ

ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಯೋಧ್ಯಾ ಧಾಮಕ್ಕೆ ಉದ್ಘಾಟನಾ ವಿಮಾನದಲ್ಲಿ ಹೆಚ್ಚಿನ ಪ್ರಯಾಣಿಕರು ಇದ್ದು, ಅವರು ಹನುಮಾನ್ ಚಾಲೀಸಾ ಪಠಣ ಮಾಡುತ್ತಿದ್ದಾರೆ, ಕೆಲವು ಪ್ರಯಾಣಿಕರು ವಿಮಾನದೊಳಗೆ ವೀಡಿಯೊ ರೆಕಾರ್ಡ್ ಮಾಡುತ್ತಿರುವುದನ್ನು ಕಾಣಬಹುದು.

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಬಂದ ವಿಮಾನದಲ್ಲಿ ಪ್ರಯಾಣಿಕರಿಂದ ಹನುಮಾನ್ ಚಾಲೀಸಾ ಪಠಣ
ವಿಮಾನದಲ್ಲಿ ಹನುಮಾನ್ ಚಾಲೀಸಾ ಪಠಣ
Follow us
ರಶ್ಮಿ ಕಲ್ಲಕಟ್ಟ
|

Updated on: Dec 30, 2023 | 4:46 PM

ಅಯೋಧ್ಯೆ, ಡಿಸೆಂಬರ್ 30: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮಕ್ಕೆ (Maharishi Valmiki International Airport Ayodhya Dham) ಬರುತ್ತಿರುವ ಉದ್ಘಾಟನಾ ವಿಮಾನದಲ್ಲಿದ್ದವರು ಹನುಮಾನ್ ಚಾಲೀಸಾವನ್ನು (Hanuman Chalisa) ಪಠಿಸಿದ್ದಾರೆ. ಎಎನ್ಐ ಸುದ್ದಿಸಂಸ್ಥೆ ಹಂಚಿಕೊಂಡ ವಿಡಿಯೊದಲ್ಲಿ ಅನೇಕ ಪ್ರಯಾಣಿಕರು ಕೇಸರಿ ಶಾಲು ಧರಿಸಿ ವಿಮಾನದೊಳಗೆ ಹನುಮಾನ್ ಚಾಲೀಸಾ ಪಠಣ ಮಾಡುವುದನ್ನು ತೋರಿಸುತ್ತದೆ.

ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಯೋಧ್ಯಾ ಧಾಮಕ್ಕೆ ಉದ್ಘಾಟನಾ ವಿಮಾನದಲ್ಲಿ ಹೆಚ್ಚಿನ ಪ್ರಯಾಣಿಕರು ಇದ್ದು ಕೆಲವು ಪ್ರಯಾಣಿಕರು ವಿಮಾನದೊಳಗೆ ವೀಡಿಯೊ ರೆಕಾರ್ಡ್ ಮಾಡುತ್ತಿರುವುದನ್ನು ಕಾಣಬಹುದು.

ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟನೆ

ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. 1450 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮವನ್ನು Sthapati ಸಂಸ್ಥೆ ವಿನ್ಯಾಸಗೊಳಿಸಿದೆ. GRIHA 4-Starಪ್ರಮಾಣೀಕೃತ, ಭಕ್ತರು ಮತ್ತು ಪ್ರವಾಸಿಗರಿಗೆ ಪ್ರಯಾಣಿಸಲು ಅನುಕೂಲವಾಗುವಂತೆ ವಿಮಾನ ನಿಲ್ದಾಣವಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುನ್ನ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಾಯಿತು.

ಇದನ್ನೂ ಓದಿ: Video Viral: ಮೋದಿಯನ್ನು ಅಯೋಧ್ಯೆಗೆ ಸ್ವಾಗತಿಸಿದ ಬಾಬರಿ ಮಸೀದಿಯ ಮುಖ್ಯ ಅರ್ಜಿದಾರ ಇಕ್ಬಾಲ್​​​​ ಅನ್ಸಾರಿ

ಎರಡು ಅಮೃತ್ ಭಾರತ್, ಆರು ವಂದೇ ಭಾರತ್ ರೈಲುಗಳಿಗೆ ಚಾಲನೆ

ಅಯೋಧ್ಯಾ ಧಾಮ್ ನಿಲ್ದಾಣದಿಂದ ಎರಡು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಹೊಸ ಅಮೃತ್ ಭಾರತ್ ರೈಲುಗಳು ದರ್ಭಾಂಗ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ಮಾಲ್ಡಾ ಟೌನ್-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಸ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್‌ಪ್ರೆಸ್

ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್; ಅಮೃತಸರ-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್; ಕೊಯಮತ್ತೂರು-ಬೆಂಗಳೂರು ಕ್ಯಾಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್; ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್; ಜಲ್ನಾ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ಎಂಬ 6 ವಂದೇ ಭಾರತ್ ರೈಲುಗಳಿಗೂ ಚಾಲನೆ ನೀಡಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ