Har Ghar Jal Utsav: ಭಾರತದ 10 ಕೋಟಿ ಗ್ರಾಮೀಣ ಮನೆಗಳಿಗೆ ಪೈಪ್ ಮೂಲಕ ಶುದ್ಧ ನೀರು ನೀಡಲಾಗುತ್ತಿದೆ; ಪ್ರಧಾನಿ ಮೋದಿ

ಇಂದು ದೇಶದ 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ಪೈಪ್‌ಗಳ ಮೂಲಕ ಶುದ್ಧ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಗೋವಾ 'ಹರ್ ಘರ್ ಜಲ್' ಪ್ರಮಾಣೀಕರಿಸಿದ ಮೊದಲ ರಾಜ್ಯವಾಗಿದೆ ಎಂದು ಮೋದಿ ಹೇಳಿದ್ದಾರೆ.

Har Ghar Jal Utsav: ಭಾರತದ 10 ಕೋಟಿ ಗ್ರಾಮೀಣ ಮನೆಗಳಿಗೆ ಪೈಪ್ ಮೂಲಕ ಶುದ್ಧ ನೀರು ನೀಡಲಾಗುತ್ತಿದೆ; ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 19, 2022 | 1:41 PM

ನವದೆಹಲಿ: ಭಾರತದ 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ಈಗಾಗಲೇ ಪೈಪ್‌ಗಳ ಮೂಲಕ ಶುದ್ಧ ನೀರಿನ ಸೌಲಭ್ಯಕ್ಕೆ ಸಂಪರ್ಕ ಕಲ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಗೋವಾದ (Goa) ಪಣಜಿಯಲ್ಲಿ ನಡೆದ ‘ಹರ್ ಘರ್ ಜಲ ಉತ್ಸವ’ (Har Ghar Jal Utsav) ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ನಾನು ದೇಶದ 3 ದೊಡ್ಡ ಸಾಧನೆಗಳನ್ನು ಎಲ್ಲಾ ದೇಶವಾಸಿಗಳೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಭಾರತದ ಈ ಸಾಧನೆಗಳ ಬಗ್ಗೆ ತಿಳಿದರೆ ಪ್ರತಿಯೊಬ್ಬ ಪ್ರಜೆಯೂ ಬಹಳ ಹೆಮ್ಮೆಪಡುತ್ತಾರೆ ಎಂದಿದ್ದಾರೆ.

ಇಂದು ದೇಶದ 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ಪೈಪ್‌ಗಳ ಮೂಲಕ ಶುದ್ಧ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಇದು ಪ್ರತಿ ಮನೆಗೆ ನೀರು ತಲುಪಿಸುವ ಸರ್ಕಾರದ ಅಭಿಯಾನದ ದೊಡ್ಡ ಯಶಸ್ಸಾಗಿದೆ. ಗೋವಾ ‘ಹರ್ ಘರ್ ಜಲ್’ (ಪ್ರತಿ ಮನೆಯಲ್ಲೂ ನೀರು) ಪ್ರಮಾಣೀಕರಿಸಿದ ಮೊದಲ ರಾಜ್ಯವಾಗಿದೆ ಎಂದು ಮೋದಿ ಹೇಳಿದ್ದಾರೆ.

ಭಾರತ ಮತ್ತು ವಿಶೇಷವಾಗಿ ಗೋವಾ ಇಂದು ಒಂದು ಮೈಲಿಗಲ್ಲನ್ನು ಸಾಧಿಸಿದೆ. ‘ಹರ್ ಘರ್ ಜಲ್’ ಎಂದು ಪ್ರಮಾಣೀಕರಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದಾದ್ರಾ ನಗರ ಹವೇಲಿ ಮತ್ತು ದಮನ್ ಮತ್ತು ಡಿಯು ಕೂಡ ‘ಹರ್ ಘರ್ ಜಲ್’ ಪ್ರಮಾಣೀಕೃತ ಕೇಂದ್ರಾಡಳಿತ ಪ್ರದೇಶಗಳಾಗಿ ಮಾರ್ಪಟ್ಟಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಕುಟುಂಬ ರಾಜಕಾರಣ ಬಗ್ಗೆ ಪ್ರಸ್ತಾಪಿಸಿದ್ದಾರೆ; ಇನ್ಮುಂದೆ ನನ್ನ ಮಗನಿಗೆ MLA, MLC, MP ಟಿಕೆಟ್ ಬೇಕು ಅನ್ನಂಗಿಲ್ಲ -ಯತ್ನಾಳ್

ಭಾರತದ 3ನೇ ಸಾಧನೆ ‘ಸ್ವಚ್ಛ ಭಾರತ ಅಭಿಯಾನ’ಕ್ಕೆ ಸಂಬಂಧಿಸಿದ್ದಾಗಿದೆ. ಕೆಲವು ವರ್ಷಗಳ ಹಿಂದೆ ಭಾರತದ ಎಲ್ಲಾ ಪ್ರಜೆಗಳ ಪ್ರಯತ್ನದಿಂದ ದೇಶವನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಲಾಯಿತು. ಈ ನಿಟ್ಟಿನಲ್ಲಿ ಭಾರತವೂ ಮಹತ್ವದ ಮೈಲಿಗಲ್ಲುಗಳನ್ನು ಸಾಧಿಸಿದೆ. ಈಗ ದೇಶದ ವಿವಿಧ ರಾಜ್ಯಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಹಳ್ಳಿಗಳು ಒಡಿಎಫ್ ಪ್ಲಸ್ ಆಗಿವೆ ಎಂದು ಪ್ರಧಾನಿ ಹೇಳಿದ್ದಾರೆ.

ಇಂದು ಅತ್ಯಂತ ಮಹತ್ವದ ಮತ್ತು ಪವಿತ್ರ ದಿನ. ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ದೇಶದಾದ್ಯಂತ ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತ ಇರುವ ಶ್ರೀಕೃಷ್ಣನ ಎಲ್ಲ ಭಕ್ತರಿಗೆ ಅನೇಕ ಅಭಿನಂದನೆಗಳು. ಶ್ರೀ ಕೃಷ್ಣನಿಗೆ ಜಯವಾಗಲಿ. ಅಮೃತ್ ಮಹೋತ್ಸವದ ಅವಧಿಯಲ್ಲಿ ಇಂದು ನಾವು 3 ಪ್ರಮುಖ ಮೈಲಿಗಲ್ಲುಗಳನ್ನು ದಾಟಿದ್ದೇವೆ. ಇಂದು ವಿಶ್ವದ ದೊಡ್ಡ ಸಂಸ್ಥೆಗಳು ನೀರಿನ ಭದ್ರತೆ 21ನೇ ಶತಮಾನದ ದೊಡ್ಡ ಸವಾಲು ಎಂದು ಹೇಳುತ್ತಿವೆ. ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಈಡೇರಿಕೆಗೆ ನೀರಿನ ಕೊರತೆಯೂ ಅಡ್ಡಿಯಾಗಬಹುದು. ನಮ್ಮ ಸರ್ಕಾರ ಕಳೆದ 8 ವರ್ಷಗಳಿಂದ ಇದೇ ಮನೋಭಾವದಿಂದ ಜಲ ಭದ್ರತೆಗೆ ಶ್ರಮಿಸುತ್ತಿದೆ. ಸರ್ಕಾರ ರಚನೆಗೆ ಇಷ್ಟೊಂದು ಶ್ರಮ ಬೇಕಾಗಿಲ್ಲ. ಆದರೆ, ದೇಶ ರಚನೆಗೆ ಕಠಿಣ ಪರಿಶ್ರಮ ಬೇಕು. ನಾವೆಲ್ಲರೂ ದೇಶವನ್ನು ನಿರ್ಮಿಸುವ ಮಾರ್ಗವನ್ನು ಆರಿಸಿಕೊಂಡಿದ್ದೇವೆ. ಆದ್ದರಿಂದ ನಾವು ದೇಶದ ಪ್ರಸ್ತುತ ಮತ್ತು ಭವಿಷ್ಯದ ಸವಾಲುಗಳನ್ನು ನಿರಂತರವಾಗಿ ಪರಿಹರಿಸುತ್ತಿದ್ದೇವೆ ಎಂದು ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ, ಸ್ವಜನಪಕ್ಷಪಾತ ಭಾರತವನ್ನು ಗೆದ್ದಲಿನ ಹಾಗೆ ತಿನ್ನುತ್ತಿದೆ; ಪ್ರಧಾನಿ ಮೋದಿ ಅಸಮಾಧಾನ

ಹೊಸ ಸರ್ಕಾರ ರಚನೆಯಾದ ನಂತರ ನಾವು ಪ್ರತ್ಯೇಕ ಜಲಶಕ್ತಿ ಸಚಿವಾಲಯವನ್ನು ರಚಿಸಿದ್ದೇವೆ. ಈ ಅಭಿಯಾನಕ್ಕೆ 3 ಲಕ್ಷ 60 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. 100 ವರ್ಷಗಳಲ್ಲಿ ಅತಿದೊಡ್ಡ ಸಾಂಕ್ರಾಮಿಕವು ಅಡಚಣೆಗಳನ್ನು ಉಂಟುಮಾಡಿತು. ಆದರೆ ಇದರ ಹೊರತಾಗಿಯೂ ಈ ಅಭಿಯಾನದ ವೇಗವು ನಿಧಾನವಾಗಲಿಲ್ಲ. ಜಲ ಜೀವನ್ ಮಿಷನ್‌ನ ಯಶಸ್ಸಿಗೆ 4 ಬಲವಾದ ಸ್ತಂಭಗಳು- ಜನರ ಭಾಗವಹಿಸುವಿಕೆ, ಪ್ರತಿ ಪಾಲುದಾರರ ಭಾಗವಹಿಸುವಿಕೆ, ರಾಜಕೀಯ ಇಚ್ಛಾಶಕ್ತಿ ಮತ್ತು ಸಂಪನ್ಮೂಲಗಳ ಅತ್ಯುತ್ತಮ ಬಳಕೆಗೆ ಕಾರಣವೆಂದು ಹೇಳಬಹುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:38 pm, Fri, 19 August 22

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ